Kabaddi; 33 ವರ್ಷ ಬಳಿಕ ಮಂಗಳೂರು ವಿವಿ ಚಾಂಪಿಯನ್
ಅಖಿಲ ಭಾರತ ಅಂತರ್ ವಿವಿ ಪುರುಷರ ಕಬಡ್ಡಿ
Team Udayavani, Nov 27, 2023, 2:40 AM IST
![1-ssadsa](https://www.udayavani.com/wp-content/uploads/2023/11/1-ssadsa-5-620x329.jpg)
![1-ssadsa](https://www.udayavani.com/wp-content/uploads/2023/11/1-ssadsa-5-620x329.jpg)
ಉಡುಪಿ: ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗ, ಪೂರ್ಣ ಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ವತಿಯಿಂದ ನಡೆದ ಅಖಿಲ ಭಾರತ ಅಂತರ್ ವಿವಿ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಆತಿಥೇಯ ಮಂಗಳೂರು ವಿವಿ ತಂಡ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
33 ವರ್ಷಗಳ ಬಳಿಕ ಮಂಗಳೂರು ವಿ.ವಿ. ತಂಡ ಅಖೀಲ ಭಾರತ ಅಂತರ್ ವಿವಿ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಪೈನಲ್ ಪ್ರವೇಶಿಸಿ, ಚೆನ್ನೈನ ವೇಲ್ಸ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ವಿವಿ ತಂಡವನ್ನು 47-15 ಅಂತರದಿಂದ ಮಣಿಸಿದ್ದೊಂದು ಐತಿಹಾಸಿಕ ಸಾಧನೆ ಯಾಗಿ ದಾಖಲಾಗಿದೆ. ಆರಂಭ ದಿಂದಲೂ ಮುನ್ನಡೆ ಕಾಯ್ದುಕೊಂಡ ಮಂಗಳೂರು ವಿವಿ ತಂಡ ಮೊದಲಾ ರ್ಧದಲ್ಲಿ 29-06 ಅಂಕಗಳ ಅಂತರ ಕಾಯ್ದುಕೊಂಡಿತ್ತು.
ಮಂಗಳೂರು ವಿವಿಯ ವಿನಯ್ ಮತ್ತು ರತನ್ ಬೆಸ್ಟ್ ಡಿಫೆಂಡರ್ ಹಾಗೂ ಬೆಸ್ಟ್ ರೈಡರ್, ವೆಲ್ಸ್ ವಿವಿಯ ಬಾಬು ಬೆಸ್ಟ್ ಆಲ್‌ರೌಂಡರ್ ಪ್ರಶಸ್ತಿಗೆ ಭಾಜನರಾದರು.
ಮಂಗಳೂರು ವಿವಿ ತಂಡ ಈ ಪಂದ್ಯಾವಳಿಯುದ್ದಕ್ಕೂ ಸಂಘಟಿತ ಹೋರಾಟದ ಮೂಲಕ ಗಮನ ಸೆಳೆಯಿತು. ಸೆಮಿಫೈನಲ್‌ನಲ್ಲಿ ಮಂಗಳೂರು ವಿವಿ ತಂಡ ಹರಿಯಾಣದ ಚೌಧರಿ ಬನ್ಸಿಲಾಲ್ ವಿವಿ ತಂಡವನ್ನು 49-35 ಅಂಕಗಳಿಂದ ಸೋಲಿಸಿತ್ತು. ಹರಿಯಾಣದ ಚೌಧರಿ ಬನ್ಸಿಲಾಲ್ ವಿವಿ ಹಾಗೂ ಮಹರ್ಷಿ ದಯಾನಂದ ವಿ.ವಿ. ತಂಡ 3ನೇ ಸ್ಥಾನವನ್ನು ಹಂಚಿಕೊಂಡವು.
ಸಮಾರೋಪ ಸಮಾರಂಭ
ಶ್ರೀ ಅದಮಾರು ಶಿಕ್ಷಣ ಮಂಡಳಿ ಅಧ್ಯಕ್ಷರಾದ ಅದಮಾರು ಮಠಾಧೀಶ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ವಿಜೇತರಿಗೆ ಟ್ರೋಫಿ ಹಸ್ತಾಂತರಿಸಿ, ಆಶೀರ್ವಚಿಸಿದರು. ಇದೇ ವೇಳೆ ಶ್ರೀಪಾದರು ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಯಲ್ಲಿ ಓದಿ ಸಾಧನೆ ಮಾಡಿದ ಹಳೆ ವಿದ್ಯಾರ್ಥಿಗಳಿಗೆ ಪ್ರಜ್ಞಾ ಗೌರವ ಪ್ರದಾನ ಮಾಡಿದರು.
ಆಡಳಿತಾಧಿಕಾರಿ ಡಾ| ಎ.ಪಿ. ಭಟ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಪಿಪಿಸಿ ಪದವಿಪೂರ್ವ ಕಾಲೇಜಿನ ಕಾರ್ಯದರ್ಶಿ ಡಾ| ಶಶಿಕಿರಣ್ ಉಮಾಕಾಂತ್, ಕಾಂಗ್ರೆಸ್ ಮುಖಂಡ ದಿನೇಶ್ ಪುತ್ರನ್, ಅಖೀಲ ಭಾರತ ವಿ. ವಿ. ಮಂಡಳಿಯ ವೀಕ್ಷಕ ಡಾ| ಸುನಿಲ್‌ಕುಮಾರ್, ಮಂಗಳೂರು ವಿ. ವಿ. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಜೆರಾಲ್ಡ್ ಸಂತೋಷ್ ಡಿ’ಸೋಜಾ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಡಾ| ಎಂ.ಆರ್. ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.
ಪಿಪಿಸಿ ಪ್ರಾಂಶುಪಾಲ ಡಾ| ರಾಮು ಎಲ್. ಸ್ವಾಗತಿಸಿ, ಕನ್ನಡ ವಿಭಾಗದ ಡಾ| ಮಂಜುನಾಥ ಕರಬ ವಿಜೇತರ ಪಟ್ಟಿ ವಾಚಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಕುಮಾರ್ ವಂದಿಸಿದರು. ಅಪೂರ್ವಾ ಮೇರಿ ಹೊಸ್ತಾ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
![Mujeeb joins Mumbai Indians team in place of another Afghan bowler](https://www.udayavani.com/wp-content/uploads/2025/02/mujeeb-150x82.jpg)

IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
![Team India: ‘We are not actors..’: Ashwin criticizes Team India’s superstar culture](https://www.udayavani.com/wp-content/uploads/2025/02/ashwin-150x82.jpg)
![Team India: ‘We are not actors..’: Ashwin criticizes Team India’s superstar culture](https://www.udayavani.com/wp-content/uploads/2025/02/ashwin-150x82.jpg)
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
![Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ](https://www.udayavani.com/wp-content/uploads/2025/02/pak-1-150x85.jpg)
![Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ](https://www.udayavani.com/wp-content/uploads/2025/02/pak-1-150x85.jpg)
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ