World Cup ಕನಸು ಕಿತ್ತ ಗಾಯ! ವಿಶ್ವಕಪ್ ನಿಂದಲೂ ಹೊರಬಿದ್ದ ಕಿವೀಸ್ ನಾಯಕ
Team Udayavani, Apr 6, 2023, 10:19 AM IST
ವೆಲ್ಲಿಂಗ್ಟನ್: 16ನೇ ಸೀಸನ್ ನ ಐಪಿಎಲ್ (IPL) ನ ಆರಂಭಿಕ ಪಂದ್ಯದಲ್ಲೇ ಗಾಯಗೊಂಡು ಐಪಿಎಲ್ ನಿಂದ ಹೊರಬಿದ್ದ ಕೇನ್ ವಿಲಿಯಮ್ಸನ್ (Kane Williamson) ಅವರು ಶಸ್ತ್ರಚಿಕಿತ್ಸೆಗೆ ಒಳಪಡಬೇಕಾಗಿದೆ. ಹೀಗಾಗಿ ಮುಂದಿನ ಏಕದಿನ ವಿಶ್ವಕಪ್ ನಿಂದಲೂ ಅವರು ಹೊರಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಗುಜರಾತ್ ಟೈಟಾನ್ಸ್ ತಂಡದ ಸದಸ್ಯ ಕೇನ್ ವಿಲಿಯಮ್ಸನ್ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮೈದಾನದಿಂದ ಹೊರಕ್ಕೆ ಕರೆದುಕೊಂಡು ಬರಲಾಗಿತ್ತು.
ವಿಲಿಯಮ್ಸನ್ ಅವರ ಬಲಕಾಲು ಮಂಡಿ ಊತವಾಗಿದ್ದು, ಸ್ಕ್ಯಾನ್ ವೇಳೆ ಗಾಯದ ಗಂಭೀರತೆ ಅರಿವಾಗಿದೆ. ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎನ್ನಲಾಗಿದೆ. ಒಂದು ವೇಳೆ ಕೇನ್ ಶಸ್ತ್ರಚಿಕಿತ್ಸೆಗೆ ಒಳಗಾದರೆ ಮುಂದಿನ ಅಕ್ಟೋಬರ್ ನಲ್ಲಿ ನಡೆಯಲಿರುವ ವಿಶ್ವಕಪ್ ನಲ್ಲಿ ಅವರು ಭಾಗವಹಿಸುವುದು ಅಸಾಧ್ಯವಾಗಿದೆ.
ಇದನ್ನೂ ಓದಿ:Snake Bite: ಹಾವು ಕೈಗೆ ಕಚ್ಚಿತೆಂದು, ಹಾವಿನ ತಲೆಗೆ ಕಚ್ಚಿ ಕೊಂದ ಯುವಕ; ಮೂವರ ಬಂಧನ
“ಇದು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ, ಆದರೆ ನಾನು ಸಾಧ್ಯವಾದಷ್ಟು ಬೇಗ ಮೈದಾನಕ್ಕೆ ಮರಳಲು ನಾನು ಎಲ್ಲವನ್ನೂ ಮಾಡುತ್ತೇನೆ. ಮುಂದಿನ ಕೆಲವು ತಿಂಗಳುಗಳಲ್ಲಿ ಗ್ಯಾರಿ ಮತ್ತು ತಂಡವನ್ನು ಬೆಂಬಲಿಸಲು ನಾನು ಏನು ಮಾಡಬಹುದೋ ಅದನ್ನು ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ಕೇನ್ ಹೇಳಿದ್ದರು.
2019 ರ ವಿಶ್ವಕಪ್ ನಲ್ಲಿ ರನ್ನರ್ ಅಪ್ ಆಗಿ ಮುಗಿಸಿದ ನ್ಯೂಜಿಲೆಂಡ್ ಈಗ 2023 ರ ಆವೃತ್ತಿಗೆ ಹೋಗುವ ತಮ್ಮ ಯೋಜನೆಗಳನ್ನು ಮರುಆಲೋಚಿಸಬೇಕಿದೆ. ಇಂಗ್ಲೆಂಡ್ ನಲ್ಲಿ ನಡೆದ 2019ರ ಪಂದ್ಯಾವಳಿಯಲ್ಲಿ, ವಿಲಿಯಮ್ಸನ್ ಒಂಬತ್ತು ಇನ್ನಿಂಗ್ಸ್ ಗಳಿಂದ 82.57 ರ ಅತ್ಯುತ್ತಮ ಸರಾಸರಿಯಲ್ಲಿ ಎರಡು ಶತಕ ಮತ್ತು ಎರಡು ಅರ್ಧಶತಕಗಳೊಂದಿಗೆ 578 ರನ್‌ಗಳನ್ನು ಒಟ್ಟುಗೂಡಿಸಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.