ಕನ್ನಡಿಗ ಪ್ರಕಾಶ್‌, ಮಿತ್ತಲ್‌ಗೆ ಚಿನ್ನ

Team Udayavani, Nov 4, 2017, 12:04 PM IST

04-31.jpg

ಗೋಲ್ಡ್‌ ಕೋಸ್ಟ್‌  (ಆಸ್ಟ್ರೇಲಿಯ): ಕನ್ನಡಿಗ ಪ್ರಕಾಶ್‌ ನಂಜಪ್ಪ ಮತ್ತು ಡಬಲ್‌ ಟ್ರ್ಯಾಪ್‌ ಶೂಟರ್‌ ಅಂಕುರ್‌ ಮಿತ್ತಲ್‌ ಅವರು ಕಾಮನ್‌ವೆಲ್ತ್‌ ಶೂಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಜಯಿಸಿದ್ದಾರೆ. ಈ ಮೂಲಕ ಭಾರತ ಒಟ್ಟಾರೆ ಐದು ಚಿನ್ನ ಸಹಿತ 15 ಪದಕ ಗೆದ್ದ ಸಾಧನೆ ಮಾಡಿದೆ. 

50 ಮೀ. ಪಿಸ್ತೂಲ್‌ ವಿಭಾಗದಲ್ಲಿ ಭಾರತ ಕ್ಲೀನ್‌ಸ್ವೀಪ್‌ ಸಾಧನೆಗೈದಿದೆ. ನಂಜಪ್ಪ ಚಿನ್ನದ ಪದಕ ಜಯಿಸಿದರೆ ವಿಶ್ವಕಪ್‌ ಫೈನಲ್‌ನ ಕಂಚು ವಿಜೇತ ಅಮನ್‌ಪ್ರೀತ್‌ ಸಿಂಗ್‌ ಬೆಳ್ಳಿ ಮತ್ತು ಜಿತು ರಾಯ್‌ ಕಂಚಿನ ಪದಕ ಗೆದ್ದಿದ್ದಾರೆ. ಡಬಲ್‌ ಟ್ರ್ಯಾಪ್‌ನಲ್ಲಿ ಅಂಕುರ್‌  ಮಿತ್ತಲ್‌ ಚಿನ್ನ ಗೆದ್ದು ಸಂಭ್ರಮಿಸಿದರೆ ವನಿತೆಯರ ಡಬಲ್‌ ಟ್ರ್ಯಾಪ್‌ನಲ್ಲಿ ಶ್ರೇಯಸಿ ಸಿಂಗ್‌ ಬೆಳ್ಳಿ ಪಡೆದಿದ್ದಾರೆ. ಇಂಗ್ಲೆಂಡಿನ ಮ್ಯಾಥ್ಯೂ ಫ್ರೆಂಚ್‌ ಅವ ರನ್ನು ಸೋಲಿಸುವ ಮೂಲಕ ಮಿತ್ತಲ್‌ ಚಿನ್ನ ಜಯಿಸಿದರು. 

ಶುಕ್ರವಾರ ನಡೆದ ಪುರುಷರ 50 ಮೀ. ಪಿಸ್ತೂಲ್‌ ವಿಭಾಗ ಸ್ಪರ್ಧೆಯಲ್ಲಿ ಪ್ರಕಾಶ್‌ ಒಟ್ಟು 222.4 ಅಂಕವನ್ನು ಸಂಪಾದಿಸಿ ಪ್ರಥಮ ಸ್ಥಾನ ಪಡೆದರು. ಶೂಟಿಂಗ್‌ನ ಆರಂಭದಿಂದಲೂ ಪ್ರಕಾಶ್‌ ಉತ್ತಮ ಲಯ ಕಾಯ್ದು ಕೊಂಡಿದ್ದರು. ನಿಖರ ಗುರಿ ಇಡುವಲ್ಲಿ ಯಶಸ್ವಿಯಾದ ಕನ್ನಡಿಗ ಅಂತಿಮವಾಗಿ ಚಿನ್ನದ ಪದಕ ಗೆದ್ದರು. ಭಾರತದ ಇನ್ನಿಬ್ಬರು ಶೂಟರ್‌ಗಳಾದ ಅಮನ್‌ಪ್ರೀತ್‌ ಸಿಂಗ್‌ ಬೆಳ್ಳಿ ಮತ್ತು ಜಿತು ರಾಯ್‌ ಕೂಡ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಕ್ರಮವಾಗಿ ಕಂಚಿನ ಪದಕ ಗೆದ್ದರು.

ಇದಕ್ಕೂ ಮುನ್ನ ಪುರುಷರ 10 ಮೀ. ಏರ್‌ ಪಿಸ್ತೂಲ್‌ ವಿಭಾಗದಲ್ಲಿಯೂ ಭಾರತೀಯರು ಕ್ಲೀನ್‌ಸ್ವೀಪ್‌ ಮಾಡಿದ್ದರು. ಶಹಜರ್‌ ರಿಜ್ವಿ ಚಿನ್ನ, ಓಂಕಾರ್‌ ಸಿಂಗ್‌ ಬೆಳ್ಳಿ, ಜಿತು ರಾಯ್‌ ಕಂಚಿನ ಪದಕ ಗೆದ್ದಿದ್ದರು. ಹೀಗಾಗಿ ಭಾರತಕ್ಕೆ ಇದು ಎರಡನೇ ಕ್ಲೀನ್‌ಸ್ವೀಪ್‌ ಆಗಿದೆ. ಉಳಿದಂತೆ ಲಂಡನ್‌ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತ ಗಗನ್‌ ನಾರಂಗ್‌ 50 ಮೀ. ರೈಫ‌ಲ್‌ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.

ಪ್ರಕಾಶ್‌ ಈ ಹಿಂದೆ ಪ್ರಮುಖವಾಗಿ ಐಎಸ್‌ಎಸ್‌ಎಫ್ ವಿಶ್ವಕಪ್‌ನಲ್ಲಿ ಕಂಚು, 2014ರ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಬೆಳ್ಳಿ ಹಾಗೂ 2014ರ ಏಷ್ಯನ್‌ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಟಾಪ್ ನ್ಯೂಸ್

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC

ICC; ಟು-ಟೈರ್‌ ಟೆಸ್ಟ್‌  ನಿಯಮಕ್ಕೆ ಸಿದ್ಧತೆ? ಏನಿದು ಸಿಸ್ಟಮ್‌?

badminton

Malaysia Super 1000 Badminton: ಯಶಸ್ವಿ ಆರಂಭಕ್ಕೆ ಮೊದಲ ಮೆಟ್ಟಿಲು

1-kho

Kho Kho ಇಂಡಿಯಾಕ್ಕೆ ಒಡಿಶಾ ಪ್ರಾಯೋಜಕತ್ವ

1-Y-J

Yashasvi Jaiswal ವಿಶ್ವಾಸ; ನಾವು ಬಲಿಷ್ಠರಾಗಿ ಬರುವೆವು…

1-SA

Test; ಪಾಕಿಸ್ಥಾನಕ್ಕೆ 10 ವಿಕೆಟ್‌ ಸೋಲು :ದಕ್ಷಿಣ ಆಫ್ರಿಕಾ 2-0 ಕ್ಲೀನ್‌ಸ್ವೀಪ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.