ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
Team Udayavani, Oct 23, 2020, 1:56 PM IST
ಹೊಸದಿಲ್ಲಿ: ಭಾರತದ ಮಾಜಿ ನಾಯಕ, ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
61 ವರ್ಷದ ಕಪಿಲ್ ದೇವ್ ಅವರನ್ನು ಹೊಸದಿಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಪತ್ರಕರ್ತೆ ಟೀನಾ ಥಾಕರ್ ಈ ಬಗ್ಗೆ ಖಚಿತಪಡಿಸಿದ್ದು, ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
Legendary cricketer Kapil Dev @therealkapildev suffers heart attack, undergoes angioplasty at a hospital in Delhi. Wishing him a speedy recovery.
— Teena Thacker (@Teensthack) October 23, 2020
1959ರ ಜನವರಿ 6ರಂದು ಚಂಡೀಗಢದಲ್ಲಿ ಜನಿಸಿದ್ದ ಕಪಿಲ್ ದೇವ್, 1978ರಲ್ಲಿ ಪಾಕಿಸ್ಥಾನ ವಿರುದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು.
1983ರಲ್ಲಿ ವೆಸ್ಟ್ ಇಂಡೀಸ್ ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ನಲ್ಲಿ ಕಪಿಲ್ ದೇವ್ ನಾಯಕತ್ವದ ಭಾರತ ತಂಡ ಮೊದಲ ಬಾರಿಗೆ ವಿಶ್ವಕಪ್ ಎತ್ತಿ ಹಿಡಿದಿತ್ತು. ಫೈನಲ್ ಪಂದ್ಯದಲ್ಲಿ ಭಾರತ ಬಲಿಷ್ಠ ವೆಸ್ಟ್ ಇಂಡೀಸ್ ವಿರುದ್ಧ ರೋಚಕ ಜಯ ಸಾಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.