ಕರ್ನಾಟಕ-ಹಿಮಾಚಲ ಪಂದ್ಯ ಡ್ರಾ

Team Udayavani, Dec 29, 2019, 12:37 AM IST

karnataka

ಮೈಸೂರು: ರೋಚಕ ಅಂತ್ಯ ಕಾಣಬೇಕಿದ್ದ ಕರ್ನಾಟಕ – ಹಿಮಾಚಲ ಪ್ರದೇಶ ನಡುವಿನ ರಣಜಿ ಮುಖಾಮುಖೀ ನೀರಸವಾಗಿ ಡ್ರಾಗೊಂಡಿದೆ. ಇದರಿಂದ ಹಿಮಾಚಲ ಮೊದಲ ಇನ್ನಿಂಗ್ಸ್‌ ಮುನ್ನಡೆಗಾಗಿ 3 ಅಂಕ ಪಡೆದರೆ, ಕರ್ನಾಟಕ ಒಂದು ಅಂಕಕ್ಕೆ ಸಮಾಧಾನಪಟ್ಟಿತು.

ಇದರೊಂದಿಗೆ ಕರ್ನಾಟಕ 3 ಪಂದ್ಯಗಳಲ್ಲಿ ಸತತ 2ನೇ ಡ್ರಾ ಸಾಧಿಸಿತು. ಹುಬ್ಬಳ್ಳಿಯಲ್ಲಿ ನಡೆದಿದ್ದ ಉತ್ತರ ಪ್ರದೇಶ ವಿರುದ್ಧದ ಪಂದ್ಯ ಕೂಡ ಡ್ರಾಗೊಂಡಿತ್ತು. ದಿಂಡಿಗಲ್‌ನಲ್ಲಿ ತಮಿಳುನಾಡು ವಿರುದ್ಧ ರೋಚಕ ಗೆಲುವು ಸಾಧಿಸಿತ್ತು. ಮುಂದಿನ ಪಂದ್ಯದಲ್ಲಿ ಕರ್ನಾಟಕ ತಂಡ ಮುಂಯಿಯನ್ನು ಅವರದೇ ಅಂಗಳದಲ್ಲಿ ಎದುರಿಸಲಿದೆ. ಈ ಪಂದ್ಯ ಜ. 3ರಿಂದ “ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌’ನಲ್ಲಿ ನಡೆಯಲಿದೆ.

ಸವಾಲು ಸ್ವೀಕರಿಸದ ನಾಯಕರು
ಅಂತಿಮ ದಿನವಾದ ಶನಿವಾರ ಬ್ಯಾಟಿಂಗ್‌ ಮುಂದುವರಿಸಿದ ಕರ್ನಾಟಕ ತನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ 296 ರನ್‌ ಗಳಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿ 114 ರನ್‌ ಲೀಡ್‌ ಪಡೆದ ಹಿಮಾಚಲ ಗೆಲುವಿಗೆ ಲಭಿಸಿದ ಗೆಲುವಿನ ಗುರಿ 183 ರನ್‌. ಚಹಾ ವಿರಾಮದ ವೇಳೆ ಹಿಮಾಚಲ 2ಕ್ಕೆ 34 ರನ್‌ ಮಾಡಿದಾಗ ಪಂದ್ಯ ರೋಚಕ ಅಂತ್ಯ ಕಾಣುವ ಸಾಧ್ಯತೆ ಇತ್ತು. ಆದರೆ ಪಂದ್ಯ ಸ್ಪಷ್ಟ ಫ‌ಲಿತಾಂಶ ಕಾಣುವ ಸಾಧ್ಯತೆ ಇಲ್ಲ ಎಂಬ ತೀರ್ಮಾನಕ್ಕೆ ಬಂದ ಇತ್ತಂಡಗಳ ನಾಯಕರು ಈ ಹಂತದಲ್ಲೇ ಪಂದ್ಯವನ್ನು ಕೊನೆಗೊಳಿಸುವ ನಿರ್ಧಾರಕ್ಕೆ ಬಂದರು.

ವಿ. ಕೌಶಿಕ್‌ ಘಾತಕ ದಾಳಿ ನಡೆಸಿ ಪ್ರಿಯಾಂಶು ಖಂಡೂರಿ (4) ಮತ್ತು ಸುಮೀತ್‌ ವರ್ಮ (11) ವಿಕೆಟ್‌ ಹಾರಿಸಿದ್ದರು. ಮೈಸೂರಿನ ಟ್ರ್ಯಾಕ್‌ ಬೌಲರ್‌ಗಳಿಗೆ ಹೆಚ್ಚಿನ ನೆರವು ನೀಡುತ್ತಿದ್ದುದರಿಂದ ಕೊನೆಯ ಅವಧಿಯಲ್ಲಿ ಕರ್ನಾಟಕ ಗೆಲುವಿಗೆ ಪ್ರಯತ್ನಿಸಬಹುದಿತ್ತು. ಆದರೆ ಸವಾಲು ತೆಗೆದುಕೊಳ್ಳಲು ಯಾರೂ ಸಿದ್ಧರಿರಲಿಲ್ಲ.

ಶತಕ ವಂಚಿತ ಪಡಿಕ್ಕಲ್‌
ನಾಟೌಟ್‌ ಬ್ಯಾಟ್ಸ್‌ಮನ್‌ಗಳಾದ ದೇವದತ್ತ ಪಡಿಕ್ಕಲ್‌ ಮತ್ತು ಕರುಣ್‌ ನಾಯರ್‌ ಮೇಲೆ ಕರ್ನಾಟಕ ಭಾರೀ ನಿರೀಕ್ಷೆ ಇರಿಸಿಕೊಂಡಿತ್ತು. ಆದರೆ ನಾಯರ್‌ ತಮ್ಮ ಮೊತ್ತಕ್ಕೆ ಎರಡೇ ರನ್‌ ಸೇರಿಸಿ ಪೆವಿಲಿಯನ್‌ ಸೇರಿಕೊಂಡರು (64 ರನ್‌, 160 ಎಸೆತ, 4 ಬೌಂಡರಿ). ಒಂದೇ ರನ್‌ ಅಂತರದಲ್ಲಿ ಶ್ರೇಯಸ್‌ ಗೋಪಾಲ್‌ (1) ವಿಕೆಟ್‌ ಉರುಳಿತು. ಕರ್ನಾಟಕ 208ಕ್ಕೆ 5 ವಿಕೆಟ್‌ ಕಳೆದುಕೊಂಡಿತು.

ಇನ್ನೊಂದು ತುದಿಯಲ್ಲಿ ಕ್ರೀಸಿಗೆ ಅಂಟಿಕೊಂಡಿದ್ದ ದೇವದತ್ತ ಪಡಿಕ್ಕಲ್‌ ಎಚ್ಚರಿಕೆಯ ಆಟವಾಡುತ್ತಿದ್ದರು. ಶತಕದ ನಿರೀಕ್ಷೆಯನ್ನೂ ಮೂಡಿಸಿದರು. ಆದರೆ ಅದೃಷ್ಟ ಕೈಕೊಟ್ಟಿತು. ಕೇವಲ ಒಂದು ರನ್‌ ಕೊರತೆಯಿಂದ ಅವರು ಸೆಂಚುರಿ ತಪ್ಪಿಸಿಕೊಂಡರು. 99 ರನ್‌ ಮಾಡಿದ ವೇಳೆ ವೈಭವ್‌ ಅರೋರಾ ಎಸೆತದಲ್ಲಿ ಲೆಗ್‌ ಬಿಫೋರ್‌ ಬಲೆಗೆ ಬಿದ್ದರು (201 ಎಸೆತ, 8 ಬೌಂಡರಿ).
ಬಳಿಕ ವಿಕೆಟ್‌ ಕೀಪರ್‌ ಬಿ.ಆರ್‌. ಶರತ್‌ (42) ಮತ್ತು ಅಭಿಮನ್ಯು ಮಿಥುನ್‌ (22) ಹಿಮಾಚಲ ದಾಳಿಯನ್ನು ತಡೆದು ನಿಂತ ಕಾರಣ ಕರ್ನಾಟಕದ ಮೊತ್ತ ಮುನ್ನೂರರ ಗಡಿ ಸಮೀಪಿಸಿತು.

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ-166 ಮತ್ತು 296 (ಪಡಿಕ್ಕಲ್‌ 99, ನಾಯರ್‌ 64, ಶರತ್‌ 42, ಅಗರ್ವಾಲ್‌ 34, ಮಿಥುನ್‌ 22, ಧವನ್‌ 83ಕ್ಕೆ 5, ದಾಗರ್‌ 34ಕ್ಕೆ 2, ಅರೋರಾ 66ಕ್ಕೆ 2). ಹಿ.ಪ್ರದೇಶ-280 ಮತ್ತು 3 ವಿಕೆಟಿಗೆ 34.

ಟಾಪ್ ನ್ಯೂಸ್

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.