ಕರ್ನಾಟಕ ವನಿತೆಯರಿಗೆ ಹ್ಯಾಟ್ರಿಕ್ ಪ್ರಶಸ್ತಿ
Team Udayavani, Oct 28, 2018, 8:58 AM IST
ಮಂಗಳೂರು: ತಮಿಳುನಾಡಿನ ದಿಂಡಿಗಲ್‌ನಲ್ಲಿ ನಡೆದ ಆರನೇ ಫೆಡರೇಶನ್ ಕಪ್ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕರ್ನಾಟಕ ವನಿತೆಯರ ತಂಡ ಹ್ಯಾಟ್ರಿಕ್ ಪ್ರಶಸ್ತಿ ಗೆದ್ದ ಸಾಧನೆ ಮಾಡಿದೆ.
ಭಾರತೀಯ ಬಾಲ್ ಬ್ಯಾಡ್ಮಿಂಟನ್ ಫೆಡರೇಶನ್ ಮತ್ತು ತಮಿಳುನಾಡು ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯ ಆಶ್ರಯದಲ್ಲಿ ನಡೆದ ಈ ಪಂದ್ಯಾಟದ ಫೈನಲ್‌ನಲ್ಲಿ ಕರ್ನಾಟಕ ತಂಡವು ಆತಿಥೇಯ ತಮಿಳುನಾಡು ವನಿತಾ ತಂಡವನ್ನು 32-35, 35-30, 35-26 ಅಂಕಗಳಿಂದ ಸೋಲಿಸಿ ಪ್ರಶಸ್ತಿ ಜಯಿಸಿತು.
ಈ ಮೊದಲು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಬಿಹಾರ ತಂಡವನ್ನು ಕೆಡಹಿದ್ದರೆ ತಮಿಳುನಾಡು ತಂಡವು ಆಂಧ್ರವನ್ನು ಉರುಳಿಸಿತ್ತು. ಪುರುಷರ ತಂಡ ನಾಲ್ಕನೇ ಸ್ಥಾನ ಪಡೆದಿದೆ.
ಈ ಮೊದಲು ನಡೆದ ದಕ್ಷಿಣ ವಲಯ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲೂ ಕರ್ನಾಟಕ ತಂಡವು ತಮಿಳುನಾಡು ತಂಡವನ್ನು ಸೋಲಿಸಿ ಪ್ರಶಸ್ತಿ ಜಯಿಸಿತ್ತು.
ಆಳ್ವಾಸ್ ಸಾಧನೆ
ಕರ್ನಾಟಕ ತಂಡ ಫೆಡರೇಶನ್ ಕಪ್ ಮತ್ತು ದಕ್ಷಿಣ ವಲಯ ಪಂದ್ಯಾಟದಲ್ಲಿ ಹ್ಯಾಟ್ರಿಕ್ ಸಾಧನೆಗೈಯಲು ಮೂಡಬಿದಿರೆಯ ಆಳ್ವಾಸ್ ಆಟಗಾರ್ತಿಯರ ನಿರ್ವಹಣೆಯನ್ನು ಮರೆಯುವಂತಿಲ್ಲ. ಆಳ್ವಾಸ್‌ನ ಆರು ಆಟಗಾರ್ತಿಯರು ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ರಾಜ್ಯ ತಂಡದ ನಾಯಕಿ ಮೂಡಬಿದಿರೆಯ ಆಳ್ವಾಸ್‌ನ ಜಿ. ಜಯಲಕ್ಷ್ಮೀ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅವರಲ್ಲದೇ ರಾಜ್ಯ ತಂಡದಲ್ಲಿರುವ ಲಾವಣ್ಯ, ದಿವ್ಯಾ, ಕವನಾ, ಚಂದನಾ ಮತ್ತು ಪಲ್ಲವಿ ಅವರು ಆಳ್ವಾಸ್‌ನ ಆಟಗಾರ್ತಿಯರಾಗಿದ್ದಾರೆ. ರಾಜ್ಯ ಪುರುಷರ ತಂಡದಲ್ಲಿ ಆಳ್ವಾಸ್‌ನ ನಾಲ್ವರು ಆಟಗಾರರು ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.