ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಕೀಮೊ ಪೌಲ್
Team Udayavani, Aug 29, 2019, 5:33 AM IST
ಸೇಂಟ್ ಜಾನ್ಸ್ (ಆ್ಯಂಟಿಗುವಾ): ಪ್ರವಾಸಿ ಭಾರತದೆದುರಿನ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ವೆಸ್ಟ್ ಇಂಡೀಸ್ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ವೇಗಿ ಮಿಗ್ಯುಯೆಲ್ ಕಮಿನ್ಸ್ ಬದಲು ಆಲ್ರೌಂಡರ್ ಕೀಮೊ ಪೌಲ್ ಅವರನ್ನು ಸೇರಿಸಿಕೊಳ್ಳಲಾಗಿದೆ.
ಗಾಯಾಳಾದ ಕಾರಣ ಕೀಮೊ ಪೌಲ್ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಚೇತರಿಸಿ ಕೊಂಡಿದ್ದು, ಆಡಲು ಸಿದ್ಧರಾಗಿದ್ದಾರೆ. ವಿಕೆಟ್ ಕೀಪರ್ ಜಾಮರ್ ಹ್ಯಾಮಿಲ್ಟನ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ.
ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯ ಆ. 30ರಿಂದ ಕಿಂಗ್ಸ್ಟನ್ನಲ್ಲಿ ಆರಂಭವಾಗಲಿದೆ. ನಾರ್ತ್ ಸೌಂಡ್ನಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ಭಾರತ 318 ರನ್ನುಗಳ ಭರ್ಜರಿ ಜಯ ಸಾಧಿಸಿತ್ತು.
ವೆಸ್ಟ್ ಇಂಡೀಸ್ ತಂಡ:
ಜಾಸನ್ ಹೋಲ್ಡರ್ (ನಾಯಕ), ಕ್ರೆಗ್ ಬ್ರಾತ್ವೇಟ್, ಡ್ಯಾರನ್ ಬ್ರಾವೊ, ಶಮರ್ ಬ್ರೂಕ್ಸ್, ಜಾನ್ ಕ್ಯಾಂಬೆಲ್, ರೋಸ್ಟನ್ ಚೇಸ್, ರಖೀಮ್ ಕಾರ್ನ್ ವಾಲ್, ಜಾಮರ್ ಹ್ಯಾಮಿಲ್ಟನ್, ಶಾನನ್ ಗ್ಯಾಬ್ರಿಯಲ್, ಶಿಮ್ರನ್ ಹೆಟ್ಮೈರ್, ಶೈ ಹೋಪ್, ಕೀಮೊ ಪೌಲ್, ಕೆಮರ್ ರೋಚ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ
ICC ಚಾಂಪಿಯನ್ಸ್ ಟ್ರೋಫಿ ಪಾಕ್ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
MUST WATCH
ಹೊಸ ಸೇರ್ಪಡೆ
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
Siddapura: ಟ್ರಾಯ್ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.