Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
Team Udayavani, Nov 8, 2024, 6:05 PM IST
ಮುಂಬೈ: ಟೀಂ ಇಂಡಿಯಾದ ಬ್ಯಾಟರ್, ಕನ್ನಡಿಗ ಕೆ.ಎಲ್.ರಾಹುಲ್ (KL Rahul) ಅವರು ಶುಕ್ರವಾರ (ನ.08) ಸಂತಸದ ವಿಚಾರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅದು ರಾಹುಲ್ ಮತ್ತು ಅಥಿಯಾ ದಂಪತಿ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆಂಬ ಸುದ್ದಿ.
ಹೌದು, ನಟಿ ಅಥಿಯಾ ಶೆಟ್ಟಿ (Athiya Shetty) ಮತ್ತು ಕ್ರಿಕೆಟರ್ ಕೆ.ಎಲ್ ರಾಹುಲ್ ಅವರು ಈ ಸಂತಸದ ಸುದ್ದಿಯನ್ನು ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಥಿಯಾ ಅವರು ಸದ್ಯ ಗರ್ಭಿಣಿಯಾಗಿದ್ದು, “ನಮ್ಮ ಸುಂದರ ಆಶೀರ್ವಾದ ಶೀಘ್ರದಲ್ಲೇ ಬರಲಿದೆ” ಎಂದು ಬರೆದುಕೊಂಡಿದ್ದಾರೆ.
2025ರಲ್ಲಿ ಕೆ.ಎಲ್ ರಾಹುಲ್ ಅಪ್ಪನಾಗಲಿದ್ದಾರೆ. ರಾಹುಲ್ ಸದ್ಯ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿಗಾಗಿ ತೆರಳಿದ್ದಾರೆ. ಜಂಟಿ ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ, ಅಥಿಯಾ ಮತ್ತು ಕೆಎಲ್ ರಾಹುಲ್ ತಮ್ಮ ಸಂತೋಷವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
2023ರ ಜನವರಿ 23ರಂದು ಕೆ.ಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ವಿವಾಹ ಬಂಧನಕ್ಕೆ ಒಳಗಾಗಿದ್ದರು. ಬಾಲಿವುಡ್ ನಟ, ಕರ್ನಾಟಕ ಕರಾವಳಿ ಮೂಲದವರಾದ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ. ಮಂಗಳೂರಿನವರೇ ಆದ ಕೆ.ಎಲ್.ರಾಹುಲ್ ಅವರು 2019ರಿಂದ ಅಥಿಯಾ ಜತೆಗೆ ಸ್ನೇಹದಿಂದ ಇದ್ದರು. 2019ರ ಡಿಸೆಂಬರ್ ವೇಳೆ ತಮ್ಮ ಪ್ರೀತಿಯ ವಿಚಾರವನ್ನು ಪರೋಕ್ಷವಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.