ಕೊಹ್ಲಿ ಕೇವಲ ಮತ್ತೊಬ್ಬ ಕ್ರಿಕೆಟಿಗ: ಆಸೀಸ್ ನಾಯಕ ಟಿಮ್‌ ಪೇನ್‌


Team Udayavani, Nov 15, 2020, 12:44 PM IST

ಕೊಹ್ಲಿ ಕೇವಲ ಮತ್ತೊಬ್ಬ ಕ್ರಿಕೆಟಿಗ: ಆಸೀಸ್ ನಾಯಕ ಟಿಮ್‌ ಪೇನ್‌

ಮೆಲ್ಬರ್ನ್: ಸಚಿನ್‌ ತೆಂಡುಲ್ಕರ್‌ ಬಳಿಕ ಭಾರತದ ರನ್‌ ಯಂತ್ರವಾಗಿ ಮಾರ್ಪಟ್ಟಿರುವ ವಿರಾಟ್‌ ಕೊಹ್ಲಿ ಎದುರಾಳಿಗೆ ನಡುಕ ಹುಟ್ಟಿಸುವ ಬ್ಯಾಟ್ಸ್‌ಮನ್‌ ಎಂಬುದರಲ್ಲಿ ಅನುಮಾನವಿಲ್ಲ. ಅವರೀಗ ಆಸ್ಟ್ರೇಲಿಯದ ಬಹು ದೊಡ್ಡ ಸವಾಲಿಗೆ ಸಜ್ಜಾಗಿದ್ದಾರೆ. ಆಸೀಸ್ ಮಾಧ್ಯಮಗಳಲ್ಲಿ ಕೊಹ್ಲಿ ಜಪ ಆರಂಭವಾಗಿದೆ.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಆಸೀಸ್‌ ಟೆಸ್ಟ್‌ ಕಪ್ತಾನ ಟಿಮ್‌ ಪೇನ್‌, “ಕೊಹ್ಲಿ ಬಗ್ಗೆ ಅನೇಕರು ಅನೇಕ ರೀತಿಯ ಹೇಳಿಕೆ ನೀಡಬಹುದು. ಎದುರಾಳಿ ಆಟಗಾರರು ಅವರನ್ನು ದ್ವೇಷಿಸುವುದನ್ನೇ ಪ್ರೀತಿಸುತ್ತಾರೆ. ಅಭಿಮಾನಿಗಳು ಅವರ ಬ್ಯಾಟಿಂಗನ್ನು ಬಹಳಷ್ಟು ಮೆಚ್ಚುತ್ತಾರೆ. ಆದರೆ ನನ್ನ ಪಾಲಿಗೆ ಅವರೋರ್ವ ಎದುರಾಳಿ ಹಾಗೂ ಕೇವಲ ಮತ್ತೂಬ್ಬ ಕ್ರಿಕೆಟಿಗ, ಅಷ್ಟೇ…’ ಎಂದಿದ್ದಾರೆ.

“ನಾವು ಕೂಡ ಕ್ರಿಕೆಟ್‌ ಫ್ಯಾನ್‌ ಆಗಿ ಅವರ ಬ್ಯಾಟಿಂಗನ್ನು ಆಸ್ವಾದಿಸುತ್ತೇವೆ. ಆದರೆ ನಮ್ಮೆದುರು ಆಡುವಾಗ ಎದುರಾಳಿ ಎಂದೇ ಪರಿಗಣಿಸಬೇಕಾಗುತ್ತದೆ’ ಎಂಬುದಾಗಿ ಟಿಮ್‌ ಪೇನ್‌ ಹೇಳಿದರು.

ನಾಯಕತ್ವಕ್ಕೆ ಸ್ಮಿತ್‌ ಇನ್ನೂ ಕಾಯಬೇಕು

ನಿಷೇಧ ಮುಗಿಸಿ ಬಂದು ಸಾಕಷ್ಟು ಸಮಯವಾದರೂ ಸ್ಟೀವನ್‌ ಸ್ಮಿತ್‌ ಅವರನ್ನು ಮರಳಿ ಆಸ್ಟ್ರೇಲಿಯ ಕ್ರಿಕೆಟ್‌ ತಂಡದ ನಾಯಕತ್ವಕ್ಕೆ ಪರಿಶೀಲಿಸದಿದ್ದುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಅಧ್ಯಕ್ಷ ಟ್ರೆವರ್‌ ಹಾನ್ಸ್‌ ಪ್ರತಿಕ್ರಿಯಿಸಿದ್ದು, ನಾಯಕತ್ವಕ್ಕಾಗಿ ಸ್ಮಿತ್‌ ಇನ್ನೂ ಸಾಕಷ್ಟು ಸಮಯ ಕಾಯಬೇಕು ಎಂದಿದ್ದಾರೆ. “ಸ್ಮಿತ್‌ ನಾಯಕತ್ವದ ಅಭ್ಯರ್ಥಿಯೇ ಆಗಿರಬಹುದು, ಆದರೆ ನಾವು ಅವರನ್ನು ಪರಿಗಣಿಸುವುದು, ಬಿಡುವುದು ಮುಂದಿನ ಪರಿಸ್ಥಿತಿಯನ್ನು ಅವಲಂಬಿಸಿದೆ. ಅವರಿನ್ನೂ ಕಾಯಬೇಕು’ ಎಂದು ಹಾನ್ಸ್‌ ಹೇಳಿದರು.

ಟಿಮ್‌ ಪೇನ್‌ ಯಶಸ್ಸು

ಸ್ಮಿತ್‌ ನಿಷೇಧಕ್ಕೊಳಗಾದಾಗ ಟೆಸ್ಟ್‌ ತಂಡದ ನಾಯಕತ್ವ ಪಡೆದ ಪೇನ್‌ ಇದರಲ್ಲಿ ಸಾಕಷ್ಟು ಯಶಸ್ಸು ಕಂಡಿರುವ ಕಾರಣ ಅವರನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂಬುದನ್ನು ಹಾನ್ಸ್‌ ಪರೋಕ್ಷವಾಗಿ ಹೇಳಿದ್ದಾರೆ.

ಪೇನ್‌ ನಾಯಕತ್ವದಲ್ಲಿ ಆಸ್ಟ್ರೇಲಿಯ ತಂಡ 2019ರಲ್ಲಿ ಆ್ಯಶಸ್‌ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಜತೆಗೆ ಶ್ರೀಲಂಕಾ, ಪಾಕಿಸ್ಥಾನ ಮತ್ತು ನ್ಯೂಜಿಲ್ಯಾಂಡ್‌ ವಿರುದ್ಧ ಟೆಸ್ಟ್‌ ಸರಣಿಯನ್ನೂ ಜಯಿಸಿತ್ತು. ಸೋತದ್ದು ಪ್ರವಾಸಿ ಭಾರತದೆದುರಿನ ಸರಣಿಯಲ್ಲಿ ಮಾತ್ರ. ಇದಕ್ಕೆ ಸೇಡು ತೀರಿಸಿಕೊಳ್ಳಲು ಯಶಸ್ವಿಯಾದರೆ ಅವರ ನಾಯಕತ್ವ ಇನ್ನಷ್ಟು ಗಟ್ಟಿಗೊಳ್ಳಲಿದೆ.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rwqeqwqw

BCCI ಕಾರ್ಯದರ್ಶಿಯಾಗಿ ರೋಹನ್‌ ಜೇಟ್ಲಿ?

1-frr

Ranji; ಕರ್ನಾಟಕ-ಬೆಂಗಾಲ್‌ ಪಂದ್ಯ ನಾಳೆಯಿಂದ: ತಂಡದಲ್ಲಿ ಶಮಿ ಇಲ್ಲ

IPL 2

IPL; ರಿಯಾದ್‌ನಲ್ಲಿ ಮಹಾ ಹರಾಜು?: 204 ಸ್ಥಾನಗಳಿಗೆ ಪೈಪೋಟಿ

ICC

ICC; ವನಿತಾ ಕ್ರಿಕೆಟ್‌ ಫ್ಯೂಚರ್‌ ಪ್ರವಾಸ ವೇಳಾಪಟ್ಟಿ ಪ್ರಕಟ

Hockey

National Hockey; ಕರ್ನಾಟಕಕ್ಕೆ ಜಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.