ಇಂದು ಕೊಹ್ಲಿ ಪತ್ರಿಕಾಗೋಷ್ಠಿ ನಡೆಸುತ್ತಾರೆ!
Team Udayavani, Jul 29, 2019, 11:14 AM IST
ಮುಂಬಯಿ: ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳುವ ಮುನ್ನ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪತ್ರಿಕಾಗೋಷ್ಠಿ ನಡೆಸುವುದಿಲ್ಲ ಎಂಬ ಸುದ್ದಿಗಳು ಹರಡಿದ್ದವು. ಆದರೆ ಕೊಹ್ಲಿ ಪತ್ರಿಕಾಗೋಷ್ಠಿಯನ್ನು ಸೋಮವಾರ ಸಂಜೆ 6 ಗಂಟೆಗೆ ನಡೆಸುತ್ತಾರೆಂದು ಸ್ವತಃ ಬಿಸಿಸಿಐ ಖಚಿತಪಡಿಸಿದೆ ಎಂದು ವರದಿಯಾಗಿದೆ.
ಕೊಹ್ಲಿ ಮತ್ತು ರೋಹಿತ್ ಶರ್ಮ ನಡುವೆ ಭಿನ್ನಮತ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸದೇ ಕೊಹ್ಲಿ ಅಮೆರಿಕಕ್ಕೆ ಹಾರುತ್ತಾರೆ ಎಂದು ಹೇಳಲಾಗಿತ್ತು.
ವಿದೇಶಿ ಸರಣಿಯೊಂದಕ್ಕೆ ಭಾರತೀಯ ತಂಡ ತೆರಳುವ ಮೊದಲು ಪತ್ರಿಕಾಗೋಷ್ಠಿಯಲ್ಲಿ ಮಾತನಾಡು ವುದು ವಾಡಿಕೆ. ಈ ಬಾರಿ ಆ ಪದ್ಧತಿ ಮುರಿದು ನಾಯಕ ಕೊಹ್ಲಿ ಜಾಹೀರಾತು ಕಾರ್ಯಕ್ರಮವೊಂದರಲ್ಲಿ ಮಾತ್ರ ಭಾಗವಹಿಸುತ್ತಾರೆ ಎನ್ನಲಾಗಿತ್ತು.
ಪತ್ರಿಕಾಗೋಷ್ಠಿಯಲ್ಲಿ ನಾಯಕ-ಉಪನಾಯಕನ ನಡುವೆ ಭಿನ್ನ ಮತದ ಸುದ್ದಿಯೇ ಮುಖ್ಯ ಸ್ಥಾನ ಪಡೆಯುವ ನಿರೀಕ್ಷೆಯಿರುವುದೇ ಇದಕ್ಕೆ ಕಾರಣ ಎನ್ನಲಾಗಿತ್ತು.
ಭಾರತೀಯ ತಂಡ ಸೋಮವಾರ ಅಮೆರಿಕಕ್ಕೆ ತೆರಳಲಿದೆ. ಫ್ಲೋರಿಡಾದಲ್ಲಿ ಆ. 3, 4ರಂದು ಸತತ 2 ಟಿ20 ಪಂದ್ಯವಾಡಿದ ಅನಂತರ ವಿಂಡೀಸ್‌ಗೆ ತೆರಳಿ ಪ್ರವಾಸದ ಮುಂದಿನ ಪಂದ್ಯಗಳಲ್ಲಿ ಪಾಲ್ಗೊಳ್ಳಲಿದೆ.
ಭಿನ್ನಮತವೇಕೆ?
ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಸೋತ ಭಾರತ ತಂಡ ತವರಿಗೆ ಆಗಮಿಸಿದ ಬಳಿಕ ಕೊಹ್ಲಿ ಮತ್ತು ರೋಹಿತ್ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದವು. ನಿರ್ದಿಷ್ಟವಾಗಿ ಯಾವ ಕಾರಣದಿಂದ ಇಬ್ಬರ ನಡುವೆ ಭಿನ್ನಮತವಿದೆ ಎಂಬ ಬಗ್ಗೆ ಇನ್ನೂ ಖಚಿತ ಮಾಹಿತಿಯಿಲ್ಲ. ಕೂಟದ ಬಳಿಕ ಬಿಸಿಸಿಐನೊಳಕ್ಕೆ ರೋಹಿತ್‌ಗೆ ಏಕದಿನ ನಾಯಕತ್ವ ನೀಡಬೇಕೆಂಬ ಲೆಕ್ಕಾಚಾರ ನಡೆದಿದ್ದವು ಎನ್ನಲಾಗಿತ್ತು. ಆದರೆ ಬಿಸಿಸಿಐ ಇಂತಹ ಎಲ್ಲ ವದಂತಿಗಳನ್ನು ಅಲ್ಲಗಳೆದು, ಕೊಹ್ಲಿಗೆ ಮೂರೂ ಮಾದರಿಯ ನಾಯಕತ್ವವನ್ನು ಮುಂದುವರಿಸಿದೆ. ಅಷ್ಟು ಮಾತ್ರವಲ್ಲ ಬಿಸಿಸಿಐ ಇಂತಹ ಎಲ್ಲ ವರದಿ ಗಳನ್ನು ಸತತವಾಗಿ ನಿರಾಕರಿಸಿಕೊಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್‌ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.