ಕೊಹ್ಲಿಗೆ ಕಾದಿವೆ 2 ದಾಖಲೆಗಳು…
Team Udayavani, Jul 31, 2018, 9:47 AM IST
ಬರ್ಮಿಂಗ್‌ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಮಹತ್ವದ ಟೆಸ್ಟ್ ಸರಣಿಗೆ ಸಜ್ಜಾಗಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುಂದೀಗ ಎರಡು ದಾಖಲೆಗಳು ಕಾದು ಕುಳಿತಿವೆ. ಭಾರತದ ಪರ ಅತ್ಯಧಿಕ ಟೆಸ್ಟ್ ಪಂದ್ಯಗಳನ್ನು ಗೆದ್ದ 2ನೇ ನಾಯಕನಾಗುವುದು ಹಾಗೂ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿ ಮರಳಿ ನಂ.1 ಬ್ಯಾಟ್ಸ್‌ಮನ್ ಎನಿಸಿಕೊಳ್ಳುವುದು.
ಈವರೆಗೆ 36 ಟೆಸ್ಟ್‌ಗಳಲ್ಲಿ ಭಾರತವನ್ನು ಮುನ್ನಡೆಸಿರುವ ವಿರಾಟ್ ಕೊಹ್ಲಿ 21ರಲ್ಲಿ ಗೆಲುವು ಕಂಡಿದ್ದಾರೆ. ಈ ಸಾಧನೆಯಲ್ಲಿ ಅವರದು ಸೌರವ್ ಗಂಗೂಲಿಗೆ ಸರಿಸಮನಾದ ದಾಖಲೆ. ಇವರಿಬ್ಬರೂ ಭಾರತಕ್ಕೆ ಅತ್ಯಧಿಕ ಗೆಲುವು ತಂದಿತ್ತ ನಾಯಕರ ಯಾದಿಯಲ್ಲಿ ಜಂಟಿ 2ನೇ ಸ್ಥಾನದಲ್ಲಿದ್ದಾರೆ. ಇನ್ನೊಂದು ಟೆಸ್ಟ್‌ನಲ್ಲಿ ಗೆಲುವು ಸಾಧಿಸಿದರೆ ಕೊಹ್ಲಿ ಒಬ್ಬರೇ 2ನೇ ಸ್ಥಾನದಲ್ಲಿ ಕಾಣಿಸಿಕೊಳ್ಳಲಿದ್ದು, ಗಂಗೂಲಿ ಮೂರಕ್ಕೆ ಇಳಿಯಲಿದ್ದಾರೆ.
ಧೋನಿ ಅಗ್ರಸ್ಥಾನ
60 ಪಂದ್ಯಗಳಲ್ಲಿ 27 ಗೆಲುವು ಕಂಡ ಮಹೇಂದ್ರ ಸಿಂಗ್ ಧೋನಿಗೆ ಅಗ್ರಸ್ಥಾನ ಮೀಸಲು. ಮೊಹಮ್ಮದ್ ಅಜರುದ್ದೀನ್ (14), ಸುನೀಲ್ ಗಾವಸ್ಕರ್ (9) ಅನಂತರದ ಸ್ಥಾನದಲ್ಲಿದ್ದಾರೆ.
ನಂ.1 ಆಗುವರೇ ಕೊಹ್ಲಿ?
ವಿರಾಟ್ ಕೊಹ್ಲಿ ಮರಳಿ ನಂ.1 ಟೆಸ್ಟ್ ಬ್ಯಾಟ್ಸ್‌ಮನ್ ಆಗುವರೇ ಎಂಬುದು ಮತ್ತೂಂದು ನಿರೀಕ್ಷೆ. ಸದ್ಯ ಆಸ್ಟ್ರೇಲಿಯದ ನಿಷೇಧಿತ ಕ್ರಿಕೆಟಿಗ ಸ್ಟೀವನ್ ಸ್ಮಿತ್ 929 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಕೊಹ್ಲಿ 903 ಅಂಕ ಹೊಂದಿದ್ದು, 2ನೇ ಸ್ಥಾನದಲ್ಲಿದ್ದಾರೆ. 5 ಪಂದ್ಯಗಳ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಕೊಹ್ಲಿ ಮತ್ತೆ ವಿಶ್ವದ ಅಗ್ರಮಾನ್ಯ ಟೆಸ್ಟ್ ಬ್ಯಾಟ್ಸ್‌ಮನ್ ಆಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.