ಐಪಿಎಲ್‌ನಲ್ಲಿ  ವೇಗಿಗಳಿಗೆ ವಿಶ್ರಾಂತಿ: ಕೊಹ್ಲಿ ಸಲಹೆ

Team Udayavani, Nov 9, 2018, 12:34 PM IST

kohli.jpg

ಹೊಸದಿಲ್ಲಿ: ತನ್ನನ್ನು ಟೀಕಿಸಿದ ಅಭಿಮಾನಿಗೆ ದೇಶಬಿಟ್ಟು ಹೋಗು ಎಂದ ಭಾರತ ಕ್ರಿಕೆಟ್‌ ತಂಡದ ನಾಯಕ ಕೊಹ್ಲಿ ಇದೀಗ ಮತ್ತೂಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮುಂದಿನ ಏಕದಿನ ವಿಶ್ವಕಪ್‌ ಹಿನ್ನೆಲೆಯಲ್ಲಿ ಐಪಿಎಲ್‌ನಿಂದ ಭಾರತದ ಪ್ರಮುಖ ವೇಗಿಗಳಿಗೆ ವಿಶ್ರಾಂತಿ ನೀಡಬೇಕು ಎಂದು ಬಿಸಿಸಿಐ ನಡೆಸಿದ ಸಭೆಯಲ್ಲಿ ಕೊಹ್ಲಿ ಹೇಳಿದ್ದಾರೆ.

ವೇಗಿಗಳಿಗೆ ಮಾತ್ರ ವಿಶ್ರಾಂತಿ ನೀಡಿ ಎಂದು ಹೇಳಿ, ಬ್ಯಾಟ್ಸ್‌ಮನ್‌ಗಳ ಬಗ್ಗೆ ಸೊಲ್ಲೆತ್ತದಿರುವುದು ಕೊಹ್ಲಿ ಹೇಳಿಕೆಯ ತಾರ್ಕಿಕತೆಯ ಬಗ್ಗೆಯೇ ಪ್ರಶ್ನೆ ಮೂಡಿಸಿದೆ. ಮುಂದಿನ ವರ್ಷ ಮೇ 30ರಿಂದ ಜು. 4ರ ವರೆಗೆ ಇಂಗ್ಲೆಂಡ್‌ನ‌ಲ್ಲಿ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ನಡೆಯಲಿದೆ. ಅದಕ್ಕೂ ಹತ್ತು ದಿನಗಳ ಮುನ್ನ ಐಪಿಎಲ್‌ ಮುಗಿಯುತ್ತದೆ. ಹೀಗಾದರೆ ಬೌಲರ್‌ಗಳ ಮೇಲೆ ಒತ್ತಡ ಬೀಳುತ್ತದೆ, ಅವರಿಗೆ ಅಗತ್ಯ ವಿಶ್ರಾಂತಿ ಸಿಗದಿದ್ದರೆ ಇಂಗ್ಲೆಂಡ್‌ನ‌ಲ್ಲಿ ಅವರ ಪ್ರದರ್ಶನದ ಮೇಲೆ ಹೊಡೆತ ಬೀಳುತ್ತದೆ ಎನ್ನುವ ಕಾರಣಕ್ಕೆ ಕೊಹ್ಲಿ ಹೀಗೆ ಹೇಳಿದ್ದಾರೆ. ಆದರೆ ಬ್ಯಾಟ್ಸ್‌ಮನ್‌ಗಳಿಗೂ ವಿಶ್ರಾಂತಿ ಸಿಗದಿದ್ದರೆ ಅವರ ಪ್ರದರ್ಶನದ ಮೇಲೆ ಒತ್ತಡ ಬೀಳುವುದಿಲ್ಲವೇ ಎಂಬ ಪ್ರಶ್ನೆಗಳು ಇಲ್ಲಿ ಮೂಡಿವೆ.

ಈಗೇಕೆ ಈ ಅನಿಸಿಕೆ?
ಇತ್ತೀಚೆಗೆ, ಭಾರತ ತಂಡ, ಇಂಗ್ಲೆಂಡ್‌ ಪ್ರವಾಸ ಕೈಗೊಂಡಿದ್ದಾಗ ತೋರಿದ್ದ ಕಳಪೆ ಪ್ರದರ್ಶನದ ಕಾರಣ ತಿಳಿಯಲು ಸಿಒಎ, ಗುರುವಾರ ಸಭೆ ಕರೆದಿದ್ದರು. ಸಿಒಎ ಸದಸ್ಯರಾದ ವಿನೋದ್‌ ರಾಯ್‌, ಡಯಾನಾ ಎಡುಲ್ಜಿ, ನಾಯಕ ವಿರಾಟ್‌ ಕೊಹ್ಲಿ, ಅಜಿಂಕ್ಯ ರಹಾನೆ, ರೋಹಿತ್‌ ಶರ್ಮ, ಕೋಚ್‌ ರವಿಶಾಸಿ ಹಾಗೂ ರಾಷ್ಟ್ರೀಯ ಆಯ್ಕೆ ಮಂಡಳಿ ಅಧ್ಯಕ್ಷ ಎಂಎಸ್‌ಕೆ ಪ್ರಸಾದ್‌ ಸಭೆಯಲ್ಲಿ ಭಾಗವಹಿಸಿದ್ದರು. 

ತಂಡದ ಕಳಪೆ ಪ್ರದರ್ಶನದ ಬಗ್ಗೆ ಮಾಹಿತಿ ನೀಡುವಾಗ ಕೊಹ್ಲಿ ಮೇಲಿನಂತೆ ಸಲಹೆ ಇಟ್ಟಿದ್ದಾರೆ. ಆದರೆ ಹೀಗೆ ವಿಶ್ರಾಂತಿ ನೀಡಿದರೆ ಐಪಿಎಲ್‌ ತಂಡಗಳ ಮೇಲೆ ಹೊಡೆತ ಬೀಳುತ್ತದೆ. ಜತೆಗೆ ಬುಮ್ರಾ, ಭುವನೇಶ್ವರ್‌ಗೆ ಐಪಿಎಲ್‌ನಿಂದ ದೊರೆಯುವ ಹಣಕ್ಕೂ ಕತ್ತರಿ ಬೀಳುತ್ತದೆ. ಇದನ್ನು ಬಿಸಿಸಿಐ ತುಂಬಿಕೊಡಬೇಕು ಎಂದು ಸಭೆಯಲ್ಲಿ ವಿನಂತಿಸಲಾಗಿದೆ.

ಟಾಪ್ ನ್ಯೂಸ್

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.