IPL;ಮುಂಬೈ ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಕೆಕೆಆರ್


Team Udayavani, May 12, 2024, 12:41 AM IST

1-wewwqe

ಕೋಲ್ಕತಾ:ಮಳೆಯಿಂದ ಅಡಚಣೆಗೊಳಗಾಗಿ 16 ಓವರ್‌ಗಳಿಗೆ ಸೀಮಿತಗೊಂಡ ಶನಿವಾರ ರಾತ್ರಿಯ ಐಪಿಎಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಎದುರು 18 ರನ್ ಜಯ ಸಾಧಿಸಿದ ಕೋಲ್ಕತಾ ನೈಟ್‌ರೈಡರ್ ಪ್ಲೇ ಆಫ್ ಪ್ರವೇಶಿಸಿತು.

ಕೆಕೆಆರ್ ಪ್ರಾಬಲ್ಯ ಮೆರೆದು 12 ನೇ ಪಂದ್ಯದಲ್ಲಿ 9 ನೇ ಜಯ ತನ್ನದಾಗಿಸಿಕೊಂಡಿತು. ಈಗಾಗಲೇ ಹೊರ ಬಿದ್ದಿರುವ ಮುಂಬೈ ಹೋರಾಟ ನೀಡಿದರೂ ಗೆಲುವು ಸಾಧ್ಯವಾಗಲಿಲ್ಲ.

ಬಿಗ್‌ ಹಿಟ್ಟಿಂಗ್‌ ತಂಡವಾದ ಕೆಕೆಆರ್ ಮೊದಲು ಬ್ಯಾಟಿಂಗ್ ನಡೆಸಿ 7 ವಿಕೆಟಿಗೆ 157 ರನ್‌ ಗಳಿಸಿತು. ಗುರಿ ಬೆನ್ನಟ್ಟಿದ ಮುಂಬೈ 8 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಲಷ್ಟೇ ಶಕ್ತವಾಯಿತು.

ಕೆಕೆಆರ್ ಬೌಲರ್ ಗಳು ಮುಂಬೈ ತಂಡವನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು. ವರುಣ್ ಚಕ್ರವರ್ತಿ ಬಿಗಿ ದಾಳಿ ನಡೆಸಿ ಎರಡು ವಿಕೆಟ್ ಪಡೆದರು. ಹರ್ಷಿತ್ ರಾಣಾ, ರಸ್ಸೆಲ್ ಕೂಡ ತಲಾ ಎರಡು ವಿಕೆಟ್ ಕಿತ್ತರು. ಸುನಿಲ್ ನಾರಾಯಣ್ ಒಂದು ವಿಕೆಟ್ ಕಿತ್ತರು.

ಇಶಾನ್ ಕಿಶನ್ 40 , ರೋಹಿತ್ ಶರ್ಮ 19, ಸೂರ್ಯಕುಮಾರ್ 11, ತಿಲಕ್ ವರ್ಮ 32 ರನ್ ಗಳಿಸಿ ಔಟಾದರು. ನಮನ್ 17 ರನ್ ಗಳಿಸಿದರು.

ಕೆಕೆಆರ್‌ ಪರ ವೆಂಕಟೇಶ್‌ ಅಯ್ಯರ್‌ 42, ನಿತೀಶ್‌ ರಾಣಾ 33, ಆ್ಯಂಡ್ರೆ ರಸೆಲ್‌ 24 ರನ್‌ ಮಾಡಿದರು. ಫಿಲಿಪ್‌ ಸಾಲ್ಟ್ ಮೊದಲ ಎಸೆತವನ್ನೇ ಸಿಕ್ಸರ್‌ಗೆ ಬಡಿದಟ್ಟಿದರೂ 5ನೇ ಎಸೆತದಲ್ಲಿ ಪೆವಿಲಿಯನ್‌ ಸೇರಿಕೊಂಡರು. ಮತ್ತೋರ್ವ ಬಿಗ್‌ ಹಿಟ್ಟರ್‌ ಸುನೀಲ್‌ ನಾರಾಯಣ್‌ ಅವರದು ಗೋಲ್ಡನ್‌ ಡಕ್‌ ಸಂಕಟ; ಬುಮ್ರಾ ಎಸೆತದಲ್ಲಿ ಕ್ಲೀನ್‌ಬೌಲ್ಡ್‌. ಇದು ಐಪಿಎಲ್‌ನಲ್ಲಿ ಸುನೀಲ್‌ ನಾರಾಯಣ್‌ ಸುತ್ತಿದ 16ನೇ ಸೊನ್ನೆ. ದಿನೇಶ್‌ ಕಾರ್ತಿಕ್‌, ಗ್ಲೆನ್‌ ಮ್ಯಾಕ್ಸ್‌ ವೆಲ್‌ ಮತ್ತು ರೋಹಿತ್‌ ಶರ್ಮ 17 ಸೊನ್ನೆಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಆದರೆ ಟಿ20 ಕ್ರಿಕೆಟ್‌ನಲ್ಲಿ ಅತ್ಯಧಿಕ 44 ಸಲ ಸೊನ್ನೆಗೆ ಔಟಾದ ದಾಖಲೆ ಸುನೀಲ್‌ ನಾರಾಯಣ್‌ ಹೆಸರಿಗೆ ಬರೆಯಲ್ಪಟ್ಟಿತು. ಅಲೆಕ್ಸ್‌ ಹೇಲ್ಸ್‌ 2ನೇ ಸ್ಥಾನಕ್ಕೆ ಇಳಿದರು (43).

ನಾಯಕ ಶ್ರೇಯಸ್‌ ಅಯ್ಯರ್‌ ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ಕೇವಲ 7 ರನ್‌ ಮಾಡಿ ಅಂಶುಲ್‌ ಎಸೆತದಲ್ಲಿ ಬೌಲ್ಡ್‌ ಆದರು. ಆದರೆ ಒನ್‌ಡೌನ್‌ನಲ್ಲಿ ಆಡಲಿಳಿದ ವೆಂಕಟೇಶ್‌ ಅಯ್ಯರ್‌ ಮುಂಬೈ ದಾಳಿಯನ್ನು ತಡೆದು ನಿಂತು ಆಕ್ರಮಣಕಾರಿ ಆಟವಾಡಿದರು. ಇವರ ಗಳಿಕೆ 21 ಎಸೆತಗಳಿಂದ 42 ರನ್‌ (6 ಬೌಂಡರಿ, 2 ಸಿಕ್ಸರ್‌). ಪೀಯೂಷ್‌ ಚಾವ್ಲಾ ತಮ್ಮ ಮೊದಲ ಎಸೆತದಲ್ಲೇ ವೆಂಕಟೇಶ್‌ ಅಯ್ಯರ್‌ ವಿಕೆಟ್‌ ಹಾರಿಸಿದರು.
ನಿತೀಶ್‌ ರಾಣಾ 23 ಎಸೆತಗಳಿಂದ 33 ರನ್‌ ಕೊಡುಗೆ ಸಲ್ಲಿಸಿದರು (4 ಬೌಂಡರಿ, 1 ಸಿಕ್ಸರ್‌). ಅಂತಿಮವಾಗಿ ರನೌಟ್‌ ರೂಪದಲ್ಲಿ ಪೆವಿಲಿಯನ್‌ ಸೇರಿಕೊಂಡರು. ಮುಂಬೈ ಬೌಲಿಂಗ್‌ ಜತೆಗೆ ಫೀಲ್ಡಿಂಗ್‌ನಲ್ಲೂ ಮಿಂಚಿತು.

ಟಾಪ್ ನ್ಯೂಸ್

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.