ಕೆಪಿಎಲ್‌: ಬೆಳಗಾವಿ ಪ್ಯಾಂಥರ್ಸ್‌ಗೆ ಕೂಟದಲ್ಲಿ ಮೊದಲ ಜಯ

Team Udayavani, Sep 9, 2017, 7:20 AM IST

Ban09091710Medn.jpg

ಮೈಸೂರು: ಬೆಳಗಾವಿ ಪ್ಯಾಂಥರ್ಸ್‌ ತಂಡ 6ನೇ ಆವೃತ್ತಿಯ ಕೆಪಿಎಲ್‌ನಲ್ಲಿ ಮೊದಲ ಜಯ ದಾಖಲಿಸಿದೆ. ಅದು ಶುಕ್ರವಾರ ನಡೆದ ಕೆಪಿಎಲ್‌ನ ಮೊದಲ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್‌ ತಂಡವನ್ನು 23 ರನ್‌ಗಳಿಂದ ಸೋಲಿಸಿತು.

ನಗರದ ಮಾನಸಗಂಗೋತ್ರಿಯ ನರಸಿಂಹರಾಜ ಒಡೆಯರ್‌ ಮೈದಾನದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಬೆಳಗಾವಿ ಪ್ಯಾಂಥರ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 192 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ಕಠಿಣ ಗುರಿ ಬೆನ್ನಟ್ಟಿದ ಬೆಂಗಳೂರು ಬ್ಲಾಸ್ಟರ್ 19.3 ಓವರ್‌ಗಳಲ್ಲಿ 169 ರನ್‌ಗಳಿಗೆ ಆಲೌಟ್‌ ಆಯಿತು.

ಬೆಂಗಳೂರಿನ ವಿಶ್ವನಾಥ್‌ ವ್ಯರ್ಥ ಹೋರಾಟ:
ಬೃಹತ್‌ ಗುರಿಯನ್ನು ಎದುರಿಟ್ಟುಕೊಂಡು ಹೋರಾಟ ನಡೆಸಿದ ಬೆಂಗಳೂರು ಬ್ಲಾಸ್ಟರ್ಗೆ ಎಂ.ವಿಶ್ವನಾಥ್‌ (65) ಆಸರೆಯಾದರು. ಆದರೆ ಇವರ ಹೋರಾಟ ತಂಡವನ್ನು ಗೆಲ್ಲಿಸಲು ಸಾಕಾಗಲಿಲ್ಲ. ವಿಶ್ವನಾಥ್‌ ಅವರು ಶಿಶಿರ್‌ ಭವಾನೆ ಜೊತೆಗೂಡಿ 85 ರನ್‌ ಸಂಗ್ರಹಿಸಿದರು. ಏಕಾಂಗಿಯಾಗಿ ಬಿಜಾಪುರ ಬುಲ್ಸ್‌ ಬೌಲರ್‌ಗಳ ಮೇಲೆ ಸವಾರಿ ಮಾಡಿದ ವಿಶ್ವನಾಥ್‌ 35 ಎಸೆತಗಳಲ್ಲಿ 5 ¸‌ರ್ಜರಿ ಸಿಕ್ಸರ್‌ ಹಾಗೂ 2 ಬೌಂಡರಿ ಸಹಿತ 65 ರನ್‌ಗಳಿಸಿದರು. ಈ ವೇಳೆ ರನೌಟ್‌ ಬಲೆಗೆ ಬಿದ್ದರು. ಇಲ್ಲಿಂದ ಬೆಳಗಾವಿ ಪಂದ್ಯದ ಮೇಲೆ ಹಿಡಿತ ಸಾಧಿಸಿತು.

ಬೆಳಗಾವಿಯ ಬಿನ್ನಿ ¸ಭರ್ಜರಿ ಬ್ಯಾಟಿಂಗ್‌: ಕೇವಲ 32 ರನ್‌ಗಳಿಗೆ ಆರಂಭಿಕ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಬೆಳಗಾವಿ ತಂಡಕ್ಕೆ ಭರವಸೆಯ ಆಟಗಾರ ಸ್ಟುವರ್ಟ್‌ ಬಿನ್ನಿ ಆಸರೆಯಾದರು. 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಿನ್ನಿ ಎದುರಾಳಿ ಬೌಲಿಂಗ್‌ ದಾಳಿಗೆ ತಕ್ಕ ಉತ್ತರ ನೀಡಿದರು. ಆರಂಭದಲ್ಲಿ ನಿಧಾನಗತಿಯಲ್ಲೇ ರನ್‌ ಗಳಿಸುತ್ತ ತಂಡದ ಮೊತ್ತವನ್ನು ಹೆಚ್ಚಿಸಿದರು. ಆದರೆ ರಾಜೂ ¸ಭಟ್ಕಳ್‌ ಎಸೆದ ಪಂದ್ಯದ 15ನೇ ಓವರ್‌ನಲ್ಲಿ ರನ್‌ವೇಗ ಹೆಚ್ಚಿಸಿದ ಸ್ಟುವರ್ಟ್‌, ಒಂದೇ ಓವರ್‌ನಲ್ಲಿ 3 ಬೌಂಡರಿ, 1 ಸಿಕ್ಸರ್‌ ಸಹಿತ 23 ರನ್‌ ಬಾರಿಸುವ ಮೂಲಕ ಅರ್ಧಶತಕ ಸಿಡಿಸಿ ಆರ್ಭಟಿಸಿದರು. ಒಟ್ಟು 3 ಬಾರಿ ಜೀವದಾನ ಪಡೆದ ಬಿನ್ನಿ ಕೊನೆಯ ಮೂರು ಓವರ್‌ಗಳಿವೆ ಎನ್ನುವಾಗ ಭಾರೀ ಪ್ರಮಾಣದಲ್ಲಿ ಏರಿಸಿದರು. ಅವರ ಸ್ಫೋಟಕ ಬ್ಯಾಟಿಂಗ್‌ ಪರಿಣಾಮ ಬೆಳಗಾವಿ ಸ್ಕೋರ್‌ ನಿರೀಕ್ಷೆಗೆ ಮೀರಿ ಏರಿಕೆ ಕಂಡಿತ. ಕೇವಲ 45 ಎಸೆತ ಎದುರಿಸಿದ ಬಿನ್ನಿ, 8 ಬೌಂಡರಿ ಹಾಗೂ 5 ಆಕರ್ಷಕ ಸಿಕ್ಸರ್‌ ಸಹಿತ 87 ರನ್‌ ಗಳಿಸಿದರು. ಪರಿಣಾಮ ಬೆಳಗಾವಿ 192 ರನ್‌ಗಳವರೆಗೆ ಏರಿಕೆ ಕಂಡಿತು. ಇದುವರೆಗೆ ಬೆಂಗಳೂರಿಗೆ ಸವಾಲೆನಿಸಿತು.

ಸಂಕ್ಷಿಪ್ತ ಸ್ಕೋರ್‌: ಬೆಳಗಾವಿ ಪ್ಯಾಂಥರ್ 20 ಓವರ್‌, 192/7 (ಸ್ಟುವರ್ಟ್‌ ಬಿನ್ನಿ 87, ಎಸ್‌.ರಕ್ಷಿತ್‌ 29, ಮಿತ್ರಕಾಂತ್‌ 22ಕ್ಕೆ 2), ಬೆಂಗಳೂರು ಬ್ಲಾಸ್ಟರ್ 19.3 ಓವರ್‌ನಲ್ಲಿ 169 (ವಿಶ್ವನಾಥ್‌ 65, ಶಿಶಿರ್‌ ವಾನೆ 34, ಕಿಶೋರ್‌ ಕಾಮತ್‌ 26ಕ್ಕೆ 4).

– ಸಿ.ದಿನೇಶ್‌

ಟಾಪ್ ನ್ಯೂಸ್

Darshan (3)

Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

“ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

Tulu Cinema: “ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

16-skin

Deepawali: ಪಟಾಕಿ ಅವಘಡ: ಚರ್ಮ ಕಸಿ ಶಸಚಿಕಿತ್ಸೆಗೆ ಸಜ್ಜು

Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…

Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…

ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ

Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

MI: ಸೂರ್ಯ, ಹಾರ್ದಿಕ್‌ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್:‌ ರೋಹಿತ್‌ ಹೇಳಿದ್ದೇನು?

Pro-KABADDI

Pro Kabaddi: ದಬಾಂಗ್‌ ಡೆಲ್ಲಿಯನ್ನು ಕೆಡವಿದ ಪಾಟ್ನಾ ಪೈರೆಟ್ಸ್‌

Rohith

India Vs Newzeland Test: ವಾಂಖೇಡೆ: ರೋಹಿತ್‌ ಶರ್ಮಾ ಪಡೆಗೆ ಅಗ್ನಿಪರೀಕ್ಷೆ

IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್‌ ಲಿಸ್ಟ್

IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್‌ ಲಿಸ್ಟ್

ಬೆಂಗಳೂರು ವನಿತಾ ತಂಡದ ಪಾಲಾದ ಇಂಗ್ಲೆಂಡ್‌ ಆಲ್‌ ರೌಂಡರ್‌ ವ್ಯಾಟ್

WPL: ಬೆಂಗಳೂರು ವನಿತಾ ತಂಡದ ಪಾಲಾದ ಇಂಗ್ಲೆಂಡ್‌ ಆಲ್‌ ರೌಂಡರ್‌ ವ್ಯಾಟ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Darshan (3)

Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್

ವಿನೀತ್‌ ಕುಮಾರ್‌ ನಟನೆಯ “90 ಎಮ್ ಎಲ್” ಸಿನಿಮಾ ಮುಹೂರ್ತ

Tulu Cinema: ವಿನೀತ್‌ ಕುಮಾರ್‌ ನಟನೆಯ “90 ಎಮ್ ಎಲ್” ಸಿನಿಮಾ ಮುಹೂರ್ತ

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

“ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

Tulu Cinema: “ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

Defence Secretary: ರಕ್ಷಣಾ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.