ಕೆಎಸ್ಸಿಎ ಚುನಾವಣೆ: ಬಿನ್ನಿ, ಹರೀಶ್ ಪೈಪೋಟಿ
Team Udayavani, Oct 4, 2019, 5:18 AM IST
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್ಸಿಎ) ಮತದಾನ ಪ್ರಕ್ರಿಯೆ ಗುರುವಾರ ಬಿರುಸಿನಿಂದ ಸಾಗಿತು. ಮಾಜಿ ಕ್ರಿಕೆಟಿಗ ಬೃಜೇಶ್ ಪಟೇಲ್ ಬೆಂಬಲಿತ ರೋಜರ್ ಬಿನ್ನಿ ಹಾಗೂ ತಂಡವು ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಎಂ.ಎಂ. ಹರೀಶ್ ಮತ್ತು ಟೀಮನ್ನು ಎದುರಿಸಿತು.
ಕಳೆದೆರಡು ದಿನಗಳಿಂದ ಎರಡೂ ಗುಂಪುಗಳು ಬಿರುಸಿನ ಪ್ರಚಾರ ನಡೆಸಿ ದ್ದವು. ಗುರುವಾರ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಯಿತು. ಸಂಜೆ 7ರ ತನಕ ಇದು ಮುಂದುವರಿಯಿತು. ರಾತ್ರಿ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭಗೊಂಡಿತು.
ಉತ್ಸಾಹದ ಮತದಾನ
ಕೆಎಸ್ಸಿಎಯ ಒಟ್ಟು 1,623 ಆಜೀವ ಸದಸ್ಯರು, 348 ಕ್ಲಬ್ ಸದಸ್ಯರು ತಮ್ಮ ಹಕ್ಕು ಚಲಾಯಿಸಿದರು. ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ , ಉಪಾಧ್ಯಕ್ಷ ಸ್ಥಾನಕ್ಕೆ ಜೆ. ಅಭಿರಾಮ್, ಖಜಾಂಚಿ ಸ್ಥಾನಕ್ಕೆ ವಿನಯ್ ಮೃತ್ಯುಂಜಯ, ಕಾರ್ಯದರ್ಶಿ ಸ್ಥಾನಕ್ಕೆ ಸಂತೋಷ್ ಮೆನನ್ ಹಾಗೂ ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಶವೀರ್ ತಾರಾಪುರ್ ಸ್ಪರ್ಧಿಸಿದ್ದಾರೆ. ಎದುರಾಳಿ ಬಣದಿಂದ ಅಧ್ಯಕ್ಷ ಸ್ಥಾನಕ್ಕೆ ಎಂ.ಎಂ. ಹರೀಶ್ ಸ್ಪರ್ಧಿಸಿದ್ದರು. ಕಾರ್ಯದರ್ಶಿ ಸ್ಥಾನಕ್ಕೆ ಕೆ.ಎಸ್. ರಘುರಾಮ್, ಜಂಟಿ ಕಾರ್ಯದರ್ಶಿಸ್ಥಾನಕ್ಕೆ ಜೋಸೆಫ್ ಹೂವಾರ್, ಖಜಾಂಚಿ ಸ್ಥಾನಕ್ಕೆ ಬಿ.ಎನ್. ಮಧುಕರ್ ಸ್ಪರ್ಧೆ ಮಾಡಿದ್ದಾರೆ. ಮೂಲಗಳ ಪ್ರಕಾರ ಬೃಜೇಶ್ ಬೆಂಬಲಿತ ರೋಜರ್ ಬಿನ್ನಿ ಬಣ ಗೆಲುವು ಸಾಧಿಸುವುದು ಖಚಿತ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.