KSCA ಮಹಾರಾಜ ಟ್ರೋಫಿ T-20 ಕ್ರಿಕೆಟ್‌: ಹುಬ್ಬಳ್ಳಿ ಟೈಗರ್‌ಗೆ ಭರ್ಜರಿ ಜಯ


Team Udayavani, Aug 16, 2023, 11:23 PM IST

HUBLI TIGERS

ಬೆಂಗಳೂರು: ಗೆಲುವಿನ ಓಟ ಮುಂದುವರಿಸಿರುವ ಹುಬ್ಬಳ್ಳಿ ಟೈಗರ್ ತಂಡವು ಬುಧವಾರ ನಡೆದ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್‌ ಕೂಟದಲ್ಲಿ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ ತಂಡವನ್ನು ಐದು ವಿಕೆಟ್‌ಗಳಿಂದ ಸೋಲಿಸಿದೆ.

ಮನ್ವತ್‌ ಕುಮಾರ್‌ ಅರ ಆಲ್‌ರೌಂಡ್‌ ಪ್ರದರ್ಶನದಿಂದ ಹುಬ್ಬಳ್ಳಿ ತಂಡವು ಸತತ ಮೂರನೇ ಗೆಲುವು ದಾಖಲಿಸಿದೆ. ಬಿಗು ದಾಳಿ ಸಂಘಟಿಸಿದ ಅವರು ನಾಲ್ಕು ವಿಕೆಟ್‌ ಪಡೆದರಲ್ಲದೇ ಬ್ಯಾಟಿಂಗ್‌ನಲ್ಲಿ 28 ರನ್‌ ಗಳಿಸಿದ್ದರು. ಇದರಿಂದ ತಂಡವು ಇನ್ನೂ 39 ಎಸೆತಗಳು ಬಾಕಿ ಉಳಿದಿರುವಂತೆ ಐದು ವಿಕೆಟ್‌ಗಳ ಜಯ ಸಾಧಿಸಿತು.

ಬೆಂಗಳೂರು ಬ್ಲಾಸ್ಟರ್ ಪರ ಮಾಯಾಂಕ್‌ ಅಗರ್ವಾಲ್‌ ಅರ್ಧಶತಕ ದಾಖಲಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಮೊದಲು ಬ್ಯಾಟಿಂಗ್‌ ಮಾಡಿದ ಬೆಂಗಳೂರು ಬ್ಲಾಸ್ಟರ್ ತಂಡವು 18.4 ಓವರ್‌ಗಳಲ್ಲಿ ಕೇವಲ 105 ರನ್ನಿಗೆ ಆಲೌಟಾಯಿತು. ಅಗರ್ವಾಲ್‌ 34 ಎಸೆತಗಳಿಂದ 50 ರನ್‌ ಹೊಡೆದರು. ಮನ್ವತ್‌ ಕುಮಾರ್‌ 15 ರನ್ನಿಗೆ 4 ವಿಕೆಟ್‌ ಕಿತ್ತು ಗಮನ ಸೆಳೆದರು. ಗೆಲ್ಲಲು ಸುಲಭ ಸವಾಲು ಪಡೆದ ಹುಬ್ಬಳ್ಳಿ ಟೈಗರ್ ತಂಡವು ಮನ್ವತ್‌, ಮನೀಷ್‌ ಪಾಂಡೆ ಮತ್ತು ಎಲ್‌. ಸಿಸೋಡಿಯ ಅವರ ಉತ್ತಮ ಆಟ ದಿಂದಾಗಿ 13.3 ಓವರ್‌ಗಳಲ್ಲಿ 5 ವಿಕೆಟಿಗೆ 111 ರನ್‌ ಗಳಿಸಿ ಜಯಭೇರಿ ಬಾರಿ ಸಿತು. ಸಿಸೋಡಿಯ 33, ಮನೀಷ್‌ ಅಜೇಯ 23 ರನ್‌ ಗಳಿಸಿದರು.

ಮೈಸೂರು ವಾರಿಯರ್ಗೆ ಜಯ
ದಿನದ ಇನ್ನೊಂದು ಪಂದ್ಯದಲ್ಲಿ ಮೈಸೂರು ವಾರಿಯರ್ ತಂಡವು ಗುಲ್ಬರ್ಗ ಮಿಸ್ಟಿಕ್ಸ್‌ ತಂಡವನ್ನು 54 ರನ್ನುಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಮೈಸೂರು ವಾರಿಯರ್ ತಂಡವು ನಿಗದಿತ 20 ಓವರ್‌ ಗಳಲ್ಲಿ 5 ವಿಕೆಟಿಗೆ 198 ರನ್‌ ಗಳಿಸಿತ್ತು. ಇದಕ್ಕುತ್ತರವಾಗಿ ಗುಲ್ಬರ್ಗ ತಂಡವು 19 ಓವರ್‌ಗಳಲ್ಲಿ 144 ರನ್ನಿಗೆ ಆಲೌಟಾಗಿ ಸೋಲನ್ನು ಒಪ್ಪಿಕೊಂಡಿತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.