ಲೆಜೆಂಡ್ ಆಲ್ ರೌಂಡರ್ ಕಪಿಲ್ ದೇವ್ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ
Team Udayavani, Oct 25, 2020, 4:17 PM IST
ಹೊಸದಿಲ್ಲಿ: ಹೃದಯಾಘಾತದ ಕಾರಣದಿಂದ ಆಸ್ಪತ್ರೆ ಸೇರಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
61 ವರ್ಷದ ಲೆಜೆಂಡ್ ಆಲ್ ರೌಂಡರ್ ಕಪಿಲ್ ದೇವ್ ಅವರಿಗೆ ಶುಕ್ರವಾರ ಹೃದಯಾಘಾತವಾಗಿತ್ತು. ಅವರನ್ನು ದೆಹಲಿಯ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರಿಗೆ ಆ್ಯಂಜಿಯೋಪ್ಲಾಸ್ಟ್ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.
ಸದ್ಯ ಕಪಿಲ್ ದೇವ್ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಪೋರ್ಟಿಸ್ ಎಸ್ಕಾರ್ಟ್ಸ್ ಹಾರ್ಟ್ ಇನ್ ಸ್ಟಿಟ್ಯೂಟ್ ನ ಕಾರ್ಡಿಯಾಲಜಿ ವಿಭಾಗದ ನಿರ್ದೇಶಕ ಡಾ.ಡಾ.ಅತುಲ್ ಮಾಥುರ್ ಅವರು ಹೇಳಿದ್ದಾರೆ.
ಇದನ್ನೂ ಓದಿ:ಚೇತರಸಿಕೊಳ್ಳುತ್ತಿರುವ ಕಪಿಲ್ ದೇವ್: ಅಭಿಮಾನಿಗಳಿಗೆ ಕೃತಜ್ಞತೆ ಹೇಳಿದ ಲೆಜೆಂಡ್
ಭಾರತ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾದ ಕಪಿಲ್ ದೇವ್ 131 ಟೆಸ್ಟ್ ಹಾಗೂ 225 ಏಕದಿನ ಪಂದ್ಯಗಳನ್ನು ಆಡಿದ್ದಾರೆ. 1983ರ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಮುನ್ನಡೆಸಿ ಭಾರತಕ್ಕೆ ಚೊಚ್ಚಲ ವಿಶ್ವಕಪ್ ಗೆದ್ದಿದ್ದರು. ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು ಸಾಧಿಸಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.