Bangladesh Series: ನ್ಯೂಜಿಲ್ಯಾಂಡ್ ಏಕದಿನ ತಂಡಕ್ಕೆ ಲ್ಯೂಕಿ ಫರ್ಗ್ಯುಸನ್ ಕ್ಯಾಪ್ಟನ್
Team Udayavani, Sep 2, 2023, 4:03 PM IST
ವೆಲ್ಲಿಂಗ್ಟನ್: ಮುಂಬರುವ ಬಾಂಗ್ಲಾದೇಶ ವಿರುದ್ದದ ಏಕದಿನ ಸರಣಿಗೆ ನ್ಯೂಜಿಲ್ಯಾಂಡ್ ತಂಡ ಪ್ರಕಟಿಸಿದ್ದು, ವೇಗಿ ಲ್ಯೂಕಿ ಫರ್ಗ್ಯುಸನ್ ಅವರಿಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ತಂಡದ ಹಿರಿಯ ಸದಸ್ಯರಿಗೆ ವಿಶ್ರಾಂತಿ ನೀಡಲಾಗಿದ್ದು, ಎರಡನೇ ದರ್ಜೆಯ ತಂಡವನ್ನು ಬಾಂಗ್ಲಾ ಸರಣಿಗೆ ಆಯ್ಕೆ ಮಾಡಲಾಗಿದೆ.
ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಗಾಗಿ ಇಂಗ್ಲೆಂಡ್ ಪ್ರವಾಸದ ನಂತರ ಹಲವು ಪ್ರಮುಖ ಆಟಗಾರರಿಗೆ ವಿರಾಮ ನೀಡಲಾಗಿದೆ.
ನಾಯಕ ಕೇನ್ ವಿಲಿಯಮ್ಸನ್ ಅವರು ಇನ್ನೂ ಫಿಟ್ ಆಗಿಲ್ಲ. ಸ್ಟ್ಯಾಂಡ್ ಇನ್ ನಾಯಕ ಟಾಮ್ ಲ್ಯಾಥಮ್, ವಿಕೆಟ್ ಕೀಪರ್-ಬ್ಯಾಟರ್ ಗಳಾದ ಡೆವೊನ್ ಕಾನ್ವೇ ಮತ್ತು ಗ್ಲೆನ್ ಫಿಲಿಪ್ಸ್, ಆಲ್‌ರೌಂಡರ್‌ಗಳಾದ ಡೇರಿಲ್ ಮಿಚೆಲ್ ಮತ್ತು ಮಿಚೆಲ್ ಸ್ಯಾಂಟ್ನರ್, ವೇಗಿಗಳಾದ ಮ್ಯಾಟ್ ಹೆನ್ರಿ ಮತ್ತು ಟಿಮ್ ಸೌಥಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಹೊಸ ಆಟಗಾರ ಡೀನ್ ಫಾಕ್ಸ್ ಕ್ರಾಫ್ಟ್ ಅವರನ್ನು ತಂಡದಲ್ಲಿ ಸೇರಿಸಲಾಗಿದೆ. ಢಾಕಾದಲ್ಲಿ ಸೆಪ್ಟೆಂಬರ್ 21, 23 ಮತ್ತು 26 ರಂದು ನಡೆಯಲಿರುವ ಮೂರು ಪಂದ್ಯಗಳಿಗೆ ಬ್ಯಾಟಿಂಗ್ ಕೋಚ್ ಲ್ಯೂಕ್ ರಾಂಕಿ ಅವರಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ್ದು, ಮುಖ್ಯ ಕೋಚ್ ಗ್ಯಾರಿ ಸ್ಟೆಡ್ ಗೆ ವಿರಾಮ ನೀಡಲಾಗಿದೆ.
ತಂಡ: ಲ್ಯೂಕಿ ಫರ್ಗ್ಯುಸನ್ (ನಾ), ಫಿನ್ ಅಲೆನ್, ಟಾಮ್ ಬ್ಲಂಡೆಲ್, ಟ್ರೆಂಟ್ ಬೌಲ್ಟ್, ಚಾಡ್ ಬೋವ್ಸ್, ಡೇನ್ ಕ್ಲೀವರ್, ಡೀನ್ ಫಾಕ್ಸ್ ಕ್ರಾಫ್ಟ್, ಕೈಲ್ ಜೇಮಿಸನ್, ಕೋಲ್ ಮೆಕ್‌ಕಾಂಚಿ, ಆಡಮ್ ಮಿಲ್ನೆ, ಹೆನ್ರಿ ನಿಕೋಲ್ಸ್, ರಚಿನ್ ರವೀಂದ್ರ, ಇಶ್ ಸೋಧಿ, ಬ್ಲೇರ್ ಟಿಕ್ನರ್, ವಿಲ್ ಯಂಗ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.