ಮಾ. 7ಕ್ಕೆ ಏಕಲವ್ಯ, ಕ್ರೀಡಾ ರತ್ನ ಪ್ರದಾನ
Team Udayavani, Mar 4, 2018, 6:30 AM IST
ಬೆಂಗಳೂರು: ಪ್ರತಿ ವರ್ಷ ರಾಜ್ಯದ ಸಾಧಕ ಕ್ರೀಡಾಪಟುಗಳಿಗೆ ಕೊಡಮಾಡುವ ಏಕಲವ್ಯ, ಕರ್ನಾಟಕ ಕ್ರೀಡಾರತ್ನ, ಜೀವನಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು ಮಾ.7ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ.
ಉದಯವಾಣಿಗೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ. ಈ ಸಲ ಆಯ್ಕೆ ಸಮಿತಿ ಮುಂದೆ ಹಲವಾರು ಅರ್ಜಿಗಳು ಬಂದಿದ್ದು ಇದನ್ನೆಲ್ಲ ತಾಳ್ಮೆಯಿಂದ ಪರಿಶೀಲಿಸಿದ ಸಮಿತಿ ಅಂತಿಮವಾಗಿ ಅರ್ಹ ಅಭ್ಯರ್ಥಿಗಳಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಿದೆ ಎನ್ನಲಾಗಿದೆ.
ಮೂರು ದಿನಗಳ ಒಳಗೆ ಪಟ್ಟಿ ಪ್ರಕಟ: ಪ್ರಶಸ್ತಿಗೆ ಆಯ್ಕೆಯಾದ ಕ್ರೀಡಾಪಟುಗಳ ಪಟ್ಟಿಯನ್ನು ಸಿದ್ಧವಾಗಿದೆ. ಇನ್ನು 3 ದಿನದ ಒಳಗೆ ಸಂಪೂರ್ಣ ಪಟ್ಟಿಯನ್ನು ಪ್ರಕಟಿಸಲಿದ್ದೇವೆ. ಪ್ರಶಸ್ತಿ ವಿಜೇತರ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ ಅನ್ನುವುದನ್ನು ಆಗ ತಿಳಿಯಬಹುದಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಎಲ್ಲಿ ನಡೆಯಲಿದೆ ಎನ್ನುವುದು ಇನ್ನಷ್ಟೇ ನಿರ್ಧಾರವಾಗಬೇಕಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
“ಪೋಷಕ ರತ್ನ’ ಹೊಸ ಪ್ರಶಸ್ತಿ: ಪ್ರತಿ ಸಲ ಕರ್ನಾಟಕ ಕ್ರೀಡಾ ರತ್ನ, ಏಕಲವ್ಯ, ಜೀವನಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗುತ್ತಿತ್ತು. ಈ ಬಾರಿ ಈ ಪ್ರಶಸ್ತಿಗಳ ಜತೆಗೆ “ಪೋಷಕ ರತ್ನ’ ಹೊಸದೊಂದು ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಕ್ರೀಡೆಗೆ ಪ್ರೋತ್ಸಾಹ ನೀಡುವ ಸಂಘ -ಸಂಸ್ಥೆ, ವ್ಯಕ್ತಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. 5 ಲಕ್ಷ ರೂ. ನಗದು ಪುರಸ್ಕಾರವನ್ನು ಪ್ರಶಸ್ತಿ ಒಳಗೊಂಡಿದೆ. ಏಕಲವ್ಯ (2 ಲಕ್ಷ ರೂ.), ಕರ್ನಾಟಕ ಕ್ರೀಡಾ ರತ್ನ (1 ಲಕ್ಷ ರೂ.) ಹಾಗೂ ಜೀವನಶ್ರೇಷ್ಠ ಸಾಧನೆ ಪ್ರಶಸ್ತಿ (1 ಲಕ್ಷ ರೂ.) ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.