World Cup; ಆಸ್ಟ್ರೇಲಿಯಕ್ಕೆ ಸುಲಭದ ತುತ್ತಾದ ನೆದರ್ಲ್ಯಾಂಡ್ಸ್ : ದಾಖಲೆಯ ಜಯ
Team Udayavani, Oct 25, 2023, 8:49 PM IST
ಹೊಸದಿಲ್ಲಿ: ಇಲ್ಲಿ ಬುಧವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯ ಅಬ್ಬರಿಸಿ ತನ್ನ ಸಾಮರ್ಥ್ಯ ಮೆರೆದಿದ್ದು ನೆದರ್ಲ್ಯಾಂಡ್ಸ್ ವಿರುದ್ಧ ದಾಖಲೆಯ 309 ರನ್ ಗಳ ಜಯ ತನ್ನದಾಗಿಸಿಕೊಂಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯ ಮ್ಯಾಕ್ಸ್ ವೆಲ್ ಸ್ಪೋಟಕ ದಾಖಲೆಯ ಶತಕ, ವಾರ್ನರ್ ಅವರ ಅಮೋಘ ಶತಕದ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 399 ರನ್ ಗಳನ್ನು ಕಲೆ ಹಾಕಿತು. 400 ರನ್ ಗಳ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ 21ಓವರ್ ಗಳಲ್ಲಿ 90 ರನ್ ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡು ಸೋಲಿಗೆ ಶರಣಾಯಿತು. ವಿಕ್ರಮಜಿತ್ ಸಿಂಗ್ 25 ರನ್ ಗರಿಷ್ಟ ಸ್ಕೋರ್.
ಇದನ್ನೂ ಓದಿ: World Cup; ಮ್ಯಾಕ್ಸ್ ವೆಲ್ ಅತೀ ವೇಗದ ಶತಕದ ದಾಖಲೆ: ನೆದರ್ಲ್ಯಾಂಡ್ಸ್ ಗೆ 400 ಗುರಿ!
ಆಸೀಸ್ ಪರ ಬಿಗು ಬೌಲಿಂಗ್ ದಾಳಿ ನಡೆಸಿದ ಆಡಮ್ ಝಂಪಾ 4 ವಿಕೆಟ್ ಕಬಳಿಸಿದರು. ಮಿಚೆಲ್ ಮಾರ್ಷ್ 2 ಮತ್ತು ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್ವುಡ್, ನಾಯಕ ಪ್ಯಾಟ್ ಕಮ್ಮಿನ್ಸ್ ತಲಾ 1 ವಿಕೆಟ್ ಪಡೆದರು.
ಏಕದಿನದಲ್ಲಿ ರನ್‌ಗಳ ಅಂತರದ ಅತಿ ದೊಡ್ಡ ಎರಡನೇ ಗೆಲುವು ಇದಾಗಿದೆ. ಭಾರತ ಇದೇ ವರ್ಷ ಶ್ರೀಲಂಕಾ ವಿರುದ್ಧ ತಿರುವನಂತಪುರ ದಲ್ಲಿ 317 ರನ್ ಗಳ ಗೆಲುವು ಮೊದಲನೆಯದ್ದಾಗಿ ಉಳಿದಿದೆ.
ಮಿಚೆಲ್ ಸ್ಟಾರ್ಕ್ ವಿಶ್ವಕಪ್ ನಲ್ಲಿ 56 ನೇ ವಿಕೆಟ್ ಪಡೆದುಕೊಂಡರು. ಗ್ಲೆನ್ ಮೆಕ್‌ಗ್ರಾತ್ 71 ಮತ್ತು ಮುತ್ತಯ್ಯ ಮುರಳೀಧರನ್ 68 ವಿಕೆಟ್ ಪಡೆದು ಮೊದಲೆರಡು ಸ್ಥಾನದಲ್ಲಿದ್ದಾರೆ. ಲಂಕಾದ ಮಾಲಿಂಗ ಕೂಡ 56 ವಿಕೆಟ್ ಪಡೆದಿದ್ದಾರೆ.
ಝಂಪಾ 3 ನೇ ಬಾರಿ ವಿಶ್ವಕಪ್‌ನಲ್ಲಿ ಸತತ 4+ ವಿಕೆಟ್‌ಗಳನ್ನು ಪಡೆದ ಬೌಲರ್ ಎನಿಸಿಕೊಂಡರು. ಮೊಹಮ್ಮದ್ ಶಮಿ (2019), ಶಾಹಿದ್ ಅಫ್ರಿದಿ (ಪಾಕಿಸ್ಥಾನ, 2011) 3 ಬಾರಿ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.