ಮುಂಬೈನಲ್ಲೇ ನಡೆಯಲಿದೆ ವಿಂಡೀಸ್ ವಿರುದ್ಧದ ಪಂದ್ಯ !
Team Udayavani, Nov 21, 2019, 3:41 PM IST
ಮುಂಬೈ: ಭಾರತದ ಪ್ರವಾಸ ಕೈಗೊಳ್ಳಲಿರುವ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಭಾರತ ಮೊದಲ ಟಿ ಟ್ವೆಂಟಿ ಪಂದ್ಯವನ್ನು ಡಿಸೆಂಬರ್ ಆರರಂದು ಮುಂಬೈನ ವಾಖೆಂಡೆಯಲ್ಲಿ ನಡೆಯಲಿದೆ. ಆದರೆ ಭದ್ರತೆಯ ಕಾರಣ ಪೊಲೀಸರು ಪಂದ್ಯವನ್ನು ಸ್ಥಳಾಂತರಿಸಲು ಕೋರಿಕೊಂಡಿದ್ದರು. ಇತ್ತೀಚಿನ ಬೆಳವಣಿಗೆಯಲ್ಲಿ ಪಂದ್ಯವನ್ನು ಸ್ಥಳಾಂತರಿಸುವ ಬಗ್ಗೆ ಯಾವುದೇ ಯೋಚನೆಯಿಲ್ಲ ಎಂದು ಮುಂಬೈ ಕ್ರಿಕೆಟ್ ಸಂಸ್ಥೆ ಮೂಲಗಳು ಹೇಳಿದೆ.
ಡಿಸೆಂಬರ್ ಆರರಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪುಣ್ಯ ಸ್ಮರಣೆಯ ದಿನವಾಗಿದ್ದು, ಮುಂಬೈನಲ್ಲಿ ಮಹಾಪರಿನಿರ್ವಾಣ್ ದಿವಸ್ ಆಚರಿಸಲಾಗುತ್ತದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೂ ಅದೇ ದಿನ 27 ವರ್ಷಗಳು ತುಂಬುತ್ತದೆ. ಹಾಗಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಆ ದಿನ ಭದ್ರತೆಗಾಗು ನಿಯೋಜಿಸಲಾಗುವ ಕಾರಣ ಟಿ ಟ್ವೆಂಟಿ ಪಂದ್ಯಕ್ಕೆ ಭದ್ರತೆ ಒದಗಿಸುವುದು ಕಷ್ಟ. ಹೀಗಾಗಿ ಪಂದ್ಯವನ್ನು ಮುಂಬೈಯಿಂದ ಶಿಫ್ಟ್ ಮಾಡಬೇಕೆಂದು ಪೊಲೀಸರು ಮನವಿ ಮಾಡಿದ್ದರು.
ನಾವು ಈ ಬಗ್ಗೆ ಪೊಲೀಸರೊಂದಿಗೆ ಮಾತುಕತೆ ನಡೆಸುತ್ತೇವೆ. ಇದುವರೆಗೆ ಯಾವುದೇ ಬದಲಾವಣೆ ಮಾಡಿಲ್ಲ. ಎಲ್ಲವೂ ಅಂದುಕೊಂಡಂತೆ ಇದೆ ಎಂದು ಮುಂಬೈ ಕ್ರಿಕೆಟ್ ಸಂಸ್ಥೆಯ ಅಧಿಕಾರಿಯೋರ್ವರು ಖಾಸಗಿ ಸುದ್ದಿಸಂಸ್ಥೆಗೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
INDvsNZ; ಗಿಲ್, ಪಂತ್, ವಾಷಿಂಗ್ಟನ್ ಬ್ಯಾಟಿಂಗ್ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ
IPL ಚಾಂಪಿಯನ್ ಕ್ಯಾಪ್ಟನ್ ಅಯ್ಯರ್ ನನ್ನು ಕೆಕೆಆರ್ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ
Hong Kong Sixes 2024: ಒಂದೇ ಓವರ್ ನಲ್ಲಿ 37 ರನ್ ಬಿಟ್ಟುಕೊಟ್ಟ ರಾಬಿನ್ ಉತ್ತಪ್ಪ
KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.