ಮುಂದಿನ ಕನಸು ಭಾರತ ರತ್ನ: ಕೋಮ್
Team Udayavani, Jan 27, 2020, 6:50 AM IST
ಹೊಸದಿಲ್ಲಿ: ಪದ್ಮವಿಭೂಷಣ ಗೌರವಕ್ಕೆ ಭಾಜನರಾದ ಮೊದಲ ಮಹಿಳಾ ಕ್ರೀಡಾಪಟು ಎಂಬುದು ಬಾಕ್ಸರ್ ಮೇರಿ ಕೋಮ್ ಅವರ ಹೆಗ್ಗಳಿಕೆ. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಅವರು, ತನ್ನ ಮುಂದಿನ ಕನಸು ಭಾರತ ರತ್ನ ಪಡೆಯುವುದಾಗಿದೆ ಎಂದಿದ್ದಾರೆ. ಬಾಕ್ಸಿಂಗ್ ಕ್ಷೇತ್ರದಲ್ಲಿ ಮಾಡಿದ ಅತ್ಯುನ್ನತ ಸಾಧನೆಯನ್ನು ಪರಿಗಣಿಸಿ ಮೇರಿ ಕೋಮ್‌ಗೆ ಪದ್ಮವಿಭೂಷಣ ನೀಡಲಾಗಿದೆ.
“ಭಾರತ ರತ್ನಕ್ಕೆ ಭಾಜನವಾಗುವುದು ನನ್ನ ಕನಸಾಗಿದೆ. ಒಂದಲ್ಲ ಒಂದು ದಿನ ಈ ಪ್ರಶಸ್ತಿ ಪಡೆಯುತ್ತೇನೆ ಎಂಬ ನಂಬಿಕೆ ನನಗಿದೆ. ಇದೀಗ ದೇಶದ ಎರಡನೇ ಅತ್ಯುನ್ನತ ಪ್ರಶಸ್ತಿಯಾಗಿರುವ ಪದ್ಮವಿಭೂಷಣ ಲಭಿಸಿರುವುದು ಸಂತಸ ತಂದಿದೆ’ ಎಂದು 6 ಬಾರಿಯ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಮೇರಿ ಕೋಮ್ ಹೇಳಿದ್ದಾರೆ.
ಕಠಿನ ಅಭ್ಯಾಸ
“ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ತೋರವುದೇ ನನ್ನ ಸದ್ಯದ ಗುರಿ. ಅದಕ್ಕಾಗಿ ಕಠಿನ ಅಭ್ಯಾಸದಲ್ಲಿ ತೊಡಗಿದ್ದೇನೆ’ ಎಂದು ಮೇರಿ ಕೋಮ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.