IPL 2024: ಹೀಗೆ ಆದರೆ ಆರ್ ಸಿಬಿ ಐಪಿಎಲ್ ಗೆಲ್ಲಲು ಸಾಧ್ಯವಿಲ್ಲ…: ಮೈಕಲ್ ವಾನ್
Team Udayavani, Mar 30, 2024, 8:46 AM IST
ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್ ನ ತನ್ನ ಮೂರನೇ ಪಂದ್ಯವನ್ನು ಶುಕ್ರವಾರ ಆಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸೋಲನುಭವಿಸಿದೆ. ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಸುಲಭದ ತುತ್ತಾಗಿದೆ.
ಮೊದಲು ಬ್ಯಾಟಿಂಗ್ ಮಾಡಿ ಆರ್ ಸಿಬಿ ಆರು ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿದರೆ, ಕೆಕೆಆರ್ ತಂಡವು ಮೂರು ವಿಕೆಟ್ ಕಳೆದುಕೊಂಡು ಕೇವಲ 16.5 ಓವರ್ ಗಳಲ್ಲಿ 186 ರನ್ ಗಳಿಸಿತು. ಆಡಿದ ಮೂರು ಪಂದ್ಯಗಳಲ್ಲಿ ಎರಡನ್ನು ಸೋತಿರುವ ಆರ್ ಸಿಬಿ ಸದ್ಯ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
ಪಂದ್ಯದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಇಂಗ್ಲೆಂಡ್ ನ ಮಾಜಿ ನಾಯಕ ಮೈಕಲ್ ವಾನ್, ಇಂತಹ ಬೌಲಿಂಗ್ ದಾಳಿಯಿಂದ ಆರ್ ಸಿಬಿ ತಂಡವು ಐಪಿಎಲ್ ಕಪ್ ಗೆಲ್ಲಲು ಸಾಧ್ಯವಿಲ್ಲ ಎಂದಿದ್ದಾರೆ.
ಇದೇ ವೇಳೆ ಭಾರತ ತಂಡದ ಮಾಜಿ ವೇಗಿ ಇರ್ಫಾನ್ ಪಠಾಣ್ ಕೂಡಾ ಆರ್ ಸಿಬಿ ತಂಡದ ಬೌಲಿಂಗ್ ನ್ನು ಟೀಕೆ ಮಾಡಿದ್ದು, ಆರ್ ಸಿಬಿ ಬೌಲಿಂಗ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದಿದ್ದಾರೆ.
Impossible for @RCBTweets to win the IPL with this bowling attack .. #OnOn #IPL2024live
— Michael Vaughan (@MichaelVaughan) March 29, 2024
ಬೆಂಗಳೂರಿನ ಮೂವರು ಮುಂಚೂಣಿ ಬೌಲರ್‌ಗಳಾದ ಮೊಹಮ್ಮದ್ ಸಿರಾಜ್, ಅಲ್ಜಾರಿ ಜೋಸೆಫ್ ಮತ್ತು ಯಶ್ ದಯಾಲ್ ಅವರು 10 ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟರು. ಸಿರಾಜ್ 15.33 ರ ಎಕಾನಮಿಯಲ್ಲಿ ಮೂರು ಓವರ್‌ಗಳಲ್ಲಿ 46 ರನ್ ನೀಡಿದರು, ಜೋಸೆಫ್ 17ರ ಎಕಾನಮಿಯಲ್ಲಿ ಎರಡು ಓವರ್‌ಗಳಲ್ಲಿ 34 ರನ್‌ಗಳನ್ನು ಸೋರಿಕೆ ಮಾಡಿದರು. ದಯಾಲ್ 11.50 ಎಕಾನಮಿಯೊಂದಿಗೆ ನಾಲ್ಕು ಓವರ್‌ಗಳಲ್ಲಿ 45 ರನ್‌ಗಳನ್ನು ಬಿಟ್ಟುಕೊಟ್ಟರು.
ಆದರೆ ಇಂಪ್ಯಾಕ್ಟ್ ಸಬ್ ಆಗಿ ಬಂದ ಕನ್ನಡಿಗ ವಿಜಯ್ ಕುಮಾರ್ ವೈಶಾಖ್ ಅವರು ಮಾತ್ರ ನಾಲ್ಕು ಓವರ್ ಗಳಲ್ಲಿ ಕೇವಲ 23 ರನ್ ನೀಡಿ ಉತ್ತಮ ಪ್ರದರ್ಶನ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.