ನಾಪತ್ತೆಯಾಗಿದ್ದ ಮಹಿಳಾ ಕ್ರಿಕೆಟರ್ ಕಾಡಿನಲ್ಲಿ ಶವವಾಗಿ ಪತ್ತೆ
Team Udayavani, Jan 14, 2023, 5:38 PM IST
ಕಟಕ್: ಒಡಿಶಾದ ಮಹಿಳಾ ಕ್ರಿಕೆಟರ್ ರಾಜಶ್ರೀ ಸ್ವೈನ್ ಶುಕ್ರವಾರ ಕಟಕ್ ಹೊರವಲಯದ ದಟ್ಟ ಅರಣ್ಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಶ್ರೀ ಅವರು ಜ. 11ರಿಂದ ನಾಪತ್ತೆಯಾಗಿದ್ದರು. ಅವರ ಸ್ಕೂಟರ್, ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿತ್ತು. ಅಥಗಢ ಪ್ರದೇಶದ ಗುರುಡಿಜಾಟಿಯಾ ಅರಣ್ಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ ಎಂದು ಕಟಕ್ ಪೊಲೀಸ್ ಉಪ ಆಯುಕ್ತ ಪಿನಾಕ್ ಮಿಶ್ರಾ ತಿಳಿಸಿದ್ದಾರೆ.
ರಾಜಶ್ರೀ ನಾಪತ್ತೆಯಾಗಿರುವ ಬಗ್ಗೆ ಅವರ ಕೋಚ್ ಗುರುವಾರ ಕಟಕ್ನ ಮಂಗಳಬಾಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಗುರುಡಿಜಾಟಿಯಾ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ.
ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸ್ವೇನ್ ಸಾವಿಗೆ ಕಾರಣ ಸ್ಪಷ್ಟವಾಗಲಿದೆ ಎಂದು ಮಿಶ್ರಾ ಹೇಳಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.