ಮೊಹಾಲಿಯಲ್ಲಿ ವಿರಾಟ್ ಕೊಹ್ಲಿ 100ನೇ ಟೆಸ್ಟ್?
ಶ್ರೀಲಂಕಾ ಸರಣಿ: ಬೆಂಗಳೂರು-ಮೊಹಾಲಿ ಟೆಸ್ಟ್ ತಾಣ ಅದಲು ಬದಲು?
Team Udayavani, Feb 9, 2022, 8:10 AM IST
ಹೊಸದಿಲ್ಲಿ: ಬೆಂಗಳೂರಿನ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ಗೆ ವಿರಾಟ್ ಕೊಹ್ಲಿ ಅವರ 100ನೇ ಟೆಸ್ಟ್ ಪಂದ್ಯದ ಆತಿಥ್ಯದ ಭಾಗ್ಯ ತಪ್ಪಲಿದೆಯೇ? ಮೂಲವೊಂದರ ಪ್ರಕಾರ, ಪ್ರವಾಸಿ ಶ್ರೀಲಂಕಾ ವಿರುದ್ಧದ ಈ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ.
ಇದೇ ತಿಂಗಳು ಶ್ರೀಲಂಕಾ ತಂಡ ಭಾರತಕ್ಕೆ ಆಗಮಿಸಿ 2 ಟೆಸ್ಟ್ ಹಾಗೂ 3 ಟಿ20 ಪಂದ್ಯಗಳಲ್ಲಿ ಪಾಲ್ಗೊಳ್ಳಲಿದೆ. ಇದರ ವೇಳಾಪಟ್ಟಿಯಲ್ಲಿ ಬದಲಾವಣೆ ಆಗಿದೆ. ಮೊದಲು ಟಿ20, ಬಳಿಕ ಟೆಸ್ಟ್ ಸರಣಿ ನಡೆಯಲಿದೆ. ಮೊದಲ ಟಿ20 ಫೆ. 24ರಂದು ಲಕ್ನೋದಲ್ಲಿ, ಉಳಿದೆರಡು ಪಂದ್ಯಗಳು ಫೆ. 26 ಮತ್ತು 27ರಂದು ಧರ್ಮಶಾಲಾದಲ್ಲಿ ಏರ್ಪಡಲಿವೆ.
ಪೂರ್ವ ವೇಳಾಪಟ್ಟಿಯಂತೆ ಮೊದಲ ಟೆಸ್ಟ್ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಇದೀಗ ಮೊಹಾಲಿಗೆ ಸ್ಥಳಾಂತರಗೊಂಡಿದೆ (ಮಾ. 3-7). ದ್ವಿತೀಯ ಟೆಸ್ಟ್ ಬೆಂಗಳೂರಿನಲ್ಲಿ ಏರ್ಪಡಲಿದೆ (ಮಾ. 12-16). ಹೀಗಾಗಿ ಕೊಹ್ಲಿ ತಮ್ಮ 100ನೇ ಟೆಸ್ಟ್ ಪಂದ್ಯವನ್ನು ಬೆಂಗಳೂರಿನಲ್ಲಿ ಆಡುವ ಅವಕಾಶವನ್ನು ಕಳೆದುಕೊಳ್ಳಲಿದ್ದಾರೆ. ಇದು ಡೇ-ನೈಟ್ ಟೆಸ್ಟ್ ಆಗಿರಲಿದೆ.
ಇದನ್ನೂ ಓದಿ:ಬಿಬಿಸಿ ಕ್ರೀಡಾ ಪ್ರಶಸ್ತಿ: ಐವರು ವನಿತಾ ಆ್ಯತ್ಲೀಟ್‌ಗಳ ನಾಮ ನಿರ್ದೇಶನ
ಆದರೆ ಈ ವೇಳಾಪಟ್ಟಿಯಿನ್ನೂ ಅಧಿಕೃತಗೊಂಡಿಲ್ಲ. ಕೊನೆಯ ಕ್ಷಣದಲ್ಲಿ ಬದಲಾವಣೆ ಸಂಭವಿಸಲೂಬಹುದು ಎಂದೂ ಬಿಸಿಸಿಐ ಮೂಲ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.