ರಸ್ತೆ ಅಪಘಾತ: ಪಾರಾದ ಶಮಿ
Team Udayavani, Mar 26, 2018, 6:10 AM IST
ಡೆಹ್ರಾಡೂನ್: ಭಾರತ ತಂಡದ ವೇಗಿ ಮೊಹಮ್ಮದ್ ಶಮಿ ಅವರು ಡೆಹ್ರಾಡೂನ್ನಿಂದ ಹೊಸದಿಲ್ಲಿಗೆ ಆಗಮಿಸುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.
ದಿಲ್ಲಿಗೆ ಆಗಮಿಸುತ್ತಿದ್ದ ವೇಳೆ ಶಮಿ ಪ್ರಯಾಣಿಸುತ್ತಿದ್ದ ಕಾರು ಟ್ರಕ್ಗೆ ಢಿಕ್ಕಿಯಾಗಿತ್ತು. ಅಪಾಯದಿಂದ ಪಾರಾಗಿರುವ ಅವರು ಅಲ್ಪ ಗಾಯಕ್ಕೆ ಒಳಗಾಗಿದ್ದಾರೆ. ತಲೆಗೆ ಕೆಲವು ಸ್ಟಿಚ್ ಹಾಕಲಾಗಿದೆ.
ಐಪಿಎಲ್ನಲ್ಲಿ ಡೆಲ್ಲಿ ಡೇರ್ಡೆವಿಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಶಮಿ ಡೆಹ್ರಾಡೂನ್ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಅವರು ಅಪಾಯದಿಂದ ಪಾರಾಗಿದ್ದಾರೆ.
ಭಾರತ “ಎ’ ಆಟಗಾರ ಮತ್ತು ಬಂಗಾಲ ತಂಡದ ಬ್ಯಾಟ್ಸ್ಮನ ಅಭಿಮನ್ಯು ಈಶ್ವರನ್ ಅವರ ತಂದೆ ನಡೆಸುತ್ತಿರುವ ಅಭಿಮನ್ಯು ಕ್ರಿಕೆಟ್ ಅಕಾಡೆಮಿಯಲ್ಲಿ 27ರ ಹರೆಯದ ಶಮಿ ಅಭ್ಯಾಸ ನಡೆಸುತ್ತಿದ್ದಾರೆ. ನಾನೀಗ ದೈಹಿಕ ಮತ್ತು ಮಾನಸಿಕ ಕಿರುಕುಳದಿಂದ ಬಳಲುತ್ತಿದ್ದೇನೆ ಎಂದು ಶಮಿ ಹೇಳಿದ್ದಾರೆ. ಅವರ ಪತ್ನಿ ಹಸಿನ್ ಜಹಾನ್ ಇತ್ತೀಚೆಗೆ ಪತಿ ವಿರುದ್ಧವೇ ದೈಹಿಕ ಹಿಂಸೆ ಕುರಿತು ಪೊಲೀಸ್ ದೂರು ನೀಡಿದ್ದರು. ಆದರೆ ಇದನ್ನು ಶಮಿ ನಿರಾಕರಿಸಿದ್ದಾರೆ.
ಶಮಿ ಸುರಕ್ಷಿತವಾಗಿದ್ದಾರೆ. ಢಿಕ್ಕಿ ಸಂಭವಿಸಿದ ಬಳಿಕ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಲ್ಲದೇ ತಲೆಗೆ ಕೆಲವು ಸ್ಟಿಚ್ ಹಾಕಲಾಯಿತು. ಅವರೀಗ ಆರಾಮವಾಗಿದ್ದಾರೆ. ಆದರೆ ಕೆಲವು ದಿ® ವಿಶ್ರಾಂತಿ ಪಡೆಯುವಂತೆ ಸೂಚಿಸಲಾಗಿದೆ ಎಂದು ಅಭಿಮನ್ಯು ಅವರ ತಂದೆ ಈಶ್ವರನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್ಸಿಎ ತಾರತಮ್ಯವೇಕೆ?
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.