ಪಿಎಕೆ ಲೀಗ್‌ನಲ್ಲಿ ಆಡಲ್ಲವೆಂದ ಮಾಂಟಿ ಪನೇಸರ್
Team Udayavani, Aug 4, 2021, 10:30 PM IST
ಲಂಡನ್: ಆ.7ರಿಂದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಆರಂಭವಾಗಲಿರುವ ಕಾಶ್ಮೀರ ಪ್ರೀಮಿಯರ್ ಲೀಗ್ ಕ್ರಿಕೆಟ್‌ನಲ್ಲಿ ತಾನು ಭಾಗವಹಿಸುವುದಿಲ್ಲವೆಂದು ಇಂಗ್ಲೆಂಡ್ ಸ್ಪಿನ್ನರ್ ಮಾಂಟಿ ಪನೇಸರ್ ಹೇಳಿದ್ದಾರೆ.
ಎರಡೂ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧ ಚೆನ್ನಾಗಿಲ್ಲ, ಇಂತಹ ಹೊತ್ತಿನಲ್ಲಿ ನಾನು ಈ ಕೂಟದಲ್ಲಿ ಆಡಲು ಬಯಸುವುದಿಲ್ಲವೆಂದು ಹೇಳಿದ್ದಾರೆ. ಇದನ್ನು ಹಲವು ಪಾಕಿಸ್ತಾನೀಯರು ಟೀಕಿಸಿದ್ದಾರೆ. ಆದರೆ ಮಾಂಟಿ ಖಡಕ್ಕಾಗಿ ಉತ್ತರಿಸಿದ್ದು, ತಾನು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಸೂಚನೆಯನ್ನಷ್ಟೇ ಪಾಲಿಸಿದ್ದೇನೆಂದು ಹೇಳಿದ್ದಾರೆ.
ಈ ಕೂಟಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಬೆಂಬಲವಿದೆ. ಇದಕ್ಕೆ ವಿಶ್ವಾದ್ಯಂತ ಆಟಗಾರರನ್ನು ಆಹ್ವಾನಿಸಲಾಗಿದೆ. ಆದರೆ ಭಾರತದ ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕೂಟದಲ್ಲಿ ಭಾಗವಹಿಸುವ ವಿದೇಶೀಯರಿಗೆ ಭಾರತದಲ್ಲಿ ನಡೆಯುವ ಯಾವುದೇ ಕ್ರಿಕೆಟ್ ಕೂಟಗಳಲ್ಲಿ ನಿರ್ಬಂಧ ಹಾಕಲಾಗುವುದು ಎಂದಿದೆ. ಅಲ್ಲದೇ ತನ್ನ ಆಟಗಾರರನ್ನು ಕಳುಹಿಸಿಕೊಡಲಿರುವ ವಿದೇಶಿ ಕ್ರಿಕೆಟ್ ಮಂಡಳಿಗಳೊಂದಿಗೆ ವಾಣಿಜ್ಯಾತ್ಮಕ ಸಂಬಂಧಗಳನ್ನು ಕಡಿದುಕೊಳ್ಳುವುದಾಗಿ ಎಚ್ಚರಿಸಿದೆ. ಇದರ ಮಧ್ಯೆ ದ.ಆಫ್ರಿಕಾದ ಮಾಜಿ ಕ್ರಿಕೆಟಿಗ ಹರ್ಷಲ್ ಗಿಬ್ಸ್ ತಾನು ಆಡುವುದಾಗಿ ಹೇಳಿದ್ದಾರೆ. ಬಿಸಿಸಿಐ ತನ್ನನ್ನು ಪರೋಕ್ಷವಾಗಿ ಬೆದರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.