ಬೈಕ್ ಸೈಕ್ಲಿಂಗ್: ರಾಜ್ಯಕ್ಕೆ ಎರಡು ಚಿನ್ನ
Team Udayavani, Feb 21, 2020, 4:34 PM IST
Representative Image
ಬೆಳಗಾವಿ: ಭಾರತೀಯ ಸೈಕ್ಲಿಂಗ್ ಒಕ್ಕೂಟ ಹಾಗೂ ಉತ್ತರಾಖಂಡ ಸೈಕ್ಲಿಂಗ್ ಸಂಸ್ಥೆ ಜಂಟಿ ಆಶ್ರಯದಲ್ಲಿ ಉತ್ತರಾಖಂಡದ ಹಲ್ ವಾಣಿಯಲ್ಲಿ ಆರಂಭವಾದ 16ನೇ ರಾಷ್ಟ್ರೀಯ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್ ಶಿಪ್‌ನಲ್ಲಿ ಕರ್ನಾಟಕದ ಸ್ಪರ್ಧಿಗಳು 2 ಚಿನ್ನ, 1 ಬೆಳ್ಳಿ ಮತ್ತು 1 ಕಂಚಿನ ಪದಕ ಗಳಿಸಿದ್ದಾರೆ.
ವಿಜಯಪುರದ ರಾಘವೇಂದ್ರ ವಂದಾಲ ಹಾಗೂ ಮೈಸೂರಿನ ಚರಿತಗೌಡ ಮೊದಲ ದಿನವೇ ಚಿನ್ನದ ಪದಕ ಬಾಚಿಕೊಂಡು ಗಮನಸೆಳೆದರು.
14 ವರ್ಷದೊಳಗಿನ ಬಾಲಕರ ವಿಭಾಗದ 2 ಲ್ಯಾಪ್ ವೈಯಕ್ತಿಕ ಟೈಮ್ ಟ್ರಯಲ್‌ನಲ್ಲಿ ವಿಜಯಪುರದ ಸೈಕ್ಲಿಂಗ್ ಕ್ರೀಡಾನಿಲಯದ ರಾಘವೇಂದ್ರ ವಂದಾಲ 22.54.673 ಸಮಯದಲ್ಲಿ ಗುರಿ ತಲುಪಿ ಚಿನ್ನದ ಪದಕ ಪಡೆದರು.
ಬಾಲಕಿಯರ ವಿಭಾಗದಲ್ಲಿ ಮೈಸೂರಿನ ಕರೆನ ಮಾರ್ಶಲ್ 2 ಲ್ಯಾಪ್ ವೈಯಕ್ತಿಕ ಟೈಮ್ ಟ್ರಯಲ್‌ನಲ್ಲಿ 31.08.824 ಸಮಯದಲ್ಲಿ ಗುರಿ ತಲುಪಿ ಬೆಳ್ಳಿ ಪದಕಕ್ಕೆ ಭಾಜನರಾದರು. 16 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮೈಸೂರಿನ ಚರಿತಗೌಡ 3 ಲ್ಯಾಪ್ ವೈಯಕ್ತಿಕ ಟೈಮ್ ಟ್ರಯಲ್‌ನಲ್ಲಿ 35.55.598 ಸಮಯದಲ್ಲಿ ಗುರಿ ತಲುಪಿ ಚಿನ್ನ ಗೆದ್ದರು. ಮಹಿಳೆಯರ ವಿಭಾಗದಲ್ಲಿ ಬೆಂಗಳೂರಿನ ಜೋಸ್ನಾ ಕಂಚಿನ ಪದಕ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.