ಪಾಕಿಸ್ಥಾನದ ವೇಗಿ ಹ್ಯಾರಿಸ್ ರೌಫ್ ಗೆ ಗಿಫ್ಟ್ ಕಳುಹಿಸಿದ ಮಹೇಂದ್ರ ಸಿಂಗ್ ಧೋನಿ
Team Udayavani, Jan 8, 2022, 4:14 PM IST
ಮುಂಬೈ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಪಾಕಿಸ್ಥಾನದ ವೇಗದ ಬೌಲರ್ ಹ್ಯಾರಿಸ್ ರೌಫ್ ಗೆ ಸುಂದರ ಉಡುಗೊರೆಯೊಂದನ್ನು ನೀಡಿದ್ದಾರೆ.
ರೌಫ್ ಟ್ವಿಟರ್ ನಲ್ಲಿ ಈ ಬಗ್ಗೆಬರೆದುಕೊಂಡಿದ್ದು, ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ನ ತನ್ನ ನಂಬರ್ “7” ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ಬಹಿರಂಗಪಡಿಸಿದರು. ಉಡುಗೊರೆ ನೀಡಿದ ಧೋನಿ ಮತ್ತು ಸಿಎಸ್‌ಕೆ ತಂಡದ ಮ್ಯಾನೇಜರ್ ಗೆ ಧನ್ಯವಾದವನ್ನೂ ತಿಳಿಸಿದ್ದಾರೆ.
“ಲೆಜೆಂಡ್ ಮತ್ತು ಕ್ಯಾಪ್ಟನ್ ಕೂಲ್ ಎಂ.ಎಸ್.ಧೋನಿ ಅವರು ಶರ್ಟ್ ಅನ್ನು ಸುಂದರವಾದ ಉಡುಗೊರೆಯಾಗಿ ನೀಡಿ ಗೌರವಿಸಿದ್ದಾರೆ. ಅವರ ರೀತಿಯ ಮತ್ತು ಸದ್ಭಾವನೆಯ ಮೂಲಕ ಇನ್ನೂ ಹೃದಯಗಳನ್ನು ಗೆಲ್ಲುತ್ತಿದ್ದಾರೆ ಎಂದು ರೌಫ್ ಶುಕ್ರವಾರ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ವಿತರಣೆಯತ್ತ ಸತ್ಯ ಪ್ರಕಾಶ್..: ರಾಮಾ ರಾಮಾ ರೇ ನಿರ್ದೇಶಕನ ಹೊಸ ಸಾಹಸ
ರೌಫ್ ಗೆ ಧೋನಿ ವಿರುದ್ಧ ಆಡಲು ಎಂದೂ ಅವಕಾಶ ಸಿಗಲಿಲ್ಲ. ಕಳೆದ ವರ್ಷದ ಟಿ20 ವಿಶ್ವಕಪ್ ಸೂಪರ್ 12 ಹಂತದಲ್ಲಿ ಎರಡು ತಂಡಗಳು ಮುಖಾಮುಖಿಯಾದಾಗ ಹ್ಯಾರಿಸ್ ರೌಫ್ ಪಾಕಿಸ್ತಾನದ ಪರವಾಗಿ ಆಡಿದ್ದರು. ಈ ವೇಳೆ ಎಂ.ಎಸ್.ಧೋನಿ ಟೀಂ ಇಂಡಿಯಾದ ಮೆಂಟರ್ ಆಗಿದ್ದರು.
The legend & capt cool @msdhoni has honored me with this beautiful gift his shirt. The “7” still winning hearts through his kind & goodwill gestures. @russcsk specially Thank you so much for kind support. pic.twitter.com/XYpSNKj2Ia
— Haris Rauf (@HarisRauf14) January 7, 2022
2020ರ ಆಗಸ್ಟ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಮುಂಬರುವ 15ನೇ ಸೀಸನ್ ನಲ್ಲೂ ಸಿಎಸ್ ಕೆ ಪರವಾಗಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.