ಸನ್ಯಾಸ ದೀಕ್ಷೆ ಪಡೆದ್ರಾ ಧೋನಿ ?…ಸಂಚಲನ ಮೂಡಿಸಿದ ಎಂಎಸ್‍ಡಿ ನ್ಯೂ ಲುಕ್
Team Udayavani, Mar 14, 2021, 3:29 PM IST
ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಸನ್ಯಾಸ ದೀಕ್ಷೆ ಪಡೆದ್ರಾ ? ಕೂಲ್ ಕ್ಯಾಪ್ಟನ್ ಖ್ಯಾತಿಯ ಧೋನಿ ಮೋಕ್ಷ ಸಾಧನೆಗೆ ಮುಂದಾಗಿದ್ದಾರಾ ? ಹೀಗೊಂದು ಪ್ರಶ್ನೆ ಕ್ರಿಕೆಟ್ ಪ್ರೇಮಿಗಳಲ್ಲಿ ಹಾಗೂ ಎಂಎಸ್‍ಡಿ ಅಭಿಮಾನಿಗಳಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಧೋನಿ ಅವರ ನ್ಯೂ ಲುಕ್.
ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ಧೋನಿ ಅವರ ಫೋಟೊ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉದ್ದನೇಯ ಹೇರ್ ಸ್ಟೈಲ್ , ಆ ನಂತರದ ಶಾರ್ಟ್ ಹೇರ್ ಸ್ಟೈಲ್ ಮೂಲಕ ಅಭಿಮಾನಿಗಳಿಗೆ ಇಷ್ಟವಾಗಿದ್ದ ಧೋನಿ, ಇದೀಗ ಹೊಸ ಅವತಾರದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.
ಸ್ಟಾರ್ ಸ್ಪೋರ್ಟ್ಸ್ ವಾಹಿನಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಫೋಟೊದಲ್ಲಿ ಧೋನಿ ಸನ್ಯಾಸಿಯಾಗಿ ಕಾಣಿಸಿಕೊಂಡಿದ್ದಾರೆ. ತಲೆ ಮೇಲಿನ ಹಾಗೂ ಮುಖದ ಮೇಲಿನ ಕೂದಲುಗಳನ್ನು ತೆಗೆಸಿರುವ ಧೋನಿ, ಬೌದ್ಧ ಸನ್ಯಾಸಿಯ ವೇಷ ಭೂಷಣ ಧರಿಸಿದ್ದಾರೆ. ಮುಖದ ಮೇಲೆ ಶಾಂತತೆ ನೆಲೆಸಿದೆ. ಈ ಫೋಟೊ ನೋಡಿ ನೀವು ಏನು ಯೋಚಿಸುತ್ತಿದ್ದೀರಿ ಎಂದು ಸ್ಟಾರ್ ಸ್ಫೋರ್ಟ್ಸ್ ಟ್ವೀಟ್ ಮಾಡಿದೆ.
ಧೋನಿ ಅವರ ಹೊಸ ಅವತಾರದ ನೈಜ ಕಾರಣ ತಿಳಿದು ಬಂದಿಲ್ಲ. ಬಹುಶಃ ಇದು ಯಾವುದೋ ಹೊಸ ಜಾಹಿರಾತಿಗಾಗಿ ಧರಿಸಿದ ವೇಷ ಇರಬಹುದು ಎಂದು ಅಭಿಮಾನಿಗಳು ಊಹಿಸಿದ್ದಾರೆ. ಒಟ್ಟಿನಲ್ಲಿ ಎಂಎಸ್ ಧೋನಿ ಅವರ ನ್ಯೂ ಲುಕ್ ಅಭಿಮಾನಿಗಳಿಗೆ ಸಖತ್ ಮೋಡಿ ಮಾಡಿದೆ.
ಇನ್ನು ಶೀಘ್ರದಲ್ಲಿಯೇ ನಡೆಯಲಿರುವ 14 ನೇ ಆವೃತ್ತಿಯ ಐಪಿಎಲ್ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿ ಧೋನಿ ಅಖಾಡಕ್ಕೆ ಇಳಿಯಲಿದ್ದಾರೆ.
??? – our faces since we saw #MSDhoni‘s new avatar that could just break the Internet! ?What do you think is it about? pic.twitter.com/Mx27w3uqQh
— Star Sports (@StarSportsIndia) March 13, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.