Mumbai: ಚೆಂಡು ಬಡಿದು ಫೀಲ್ಡಿಂಗ್ ಮಾಡುತ್ತಿದ್ದ ಆಟಗಾರ ಸಾವು
Team Udayavani, Jan 10, 2024, 11:25 AM IST
ಮುಂಬೈ: ಮಾಟುಂಗಾದ ದಾಡ್ಕರ್ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಬಾಲ್ ತಲೆಗೆ ಬಡಿದು 52 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಪಕ್ಕದ ಪಿಚ್ ನಿಂದ ಬಂದ ಚೆಂಡು ವ್ಯಕ್ತಿಯ ತಲೆಗೆ ಬಡಿದಿದೆ. ಚೆಂಡು ತನ್ನತ್ತ ಸಾಗುತ್ತಿರುವುದನ್ನು ಅವರು ಗಮನಿಸಿಲ್ಲ. ಮೃತ ವ್ಯಕ್ತಿ ಪಕ್ಕದ ಪಿಚ್ ನಲ್ಲಿ ಆಡುತ್ತಿದ್ದ ಬ್ಯಾಟರ್ ನ ಕಡೆಗೆ ಬೆನ್ನು ಹಾಕಿ ಫೀಲ್ಡಿಂಗ್ ಮಾಡುತ್ತಿದ್ದರು, ಆದ್ದರಿಂದ, ಚೆಂಡು ಅವರ ಕಡೆಗೆ ಬರುವುದನ್ನು ನೋಡಲು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಮೃತರಾಗಿದ್ದಾರೆಂದು ಘೋಷಿಸಲಾಯಿತು.
50 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಕಚ್ಚಿ ವೀಸಾ ಓಸ್ವಾಲ್ ವಿಕಾಸ್ ಲೆಜೆಂಡ್ ಕಪ್ ಟಿ20 ಪಂದ್ಯಾವಳಿ ನಡೆಸಲಾಗುತ್ತಿದೆ. ಇಲ್ಲಿ ಏಕಕಾಲಕ್ಕೆ ಎರಡು ಪಂದ್ಯಗಳನ್ನು ನಡೆಸಲಾಗುತ್ತದೆ.
ಸ್ಥಳಾವಕಾಶದ ಕೊರತೆ ಮತ್ತು ಸಮಯದ ಕೊರತೆಯಿಂದಾಗಿ ಒಂದೇ ಮೈದಾನದಲ್ಲಿ ಎರಡು ಅಥವಾ ಹೆಚ್ಚಿನ ಪಂದ್ಯಗಳನ್ನು ಏಕಕಾಲದಲ್ಲಿ ಆಯೋಜಿಸಲಾಗುತ್ತದೆ. ಮತ್ತೊಂದು ಪಂದ್ಯದ ಚೆಂಡಿನಿಂದ ಒಬ್ಬ ಆಟಗಾರ ಗಾಯಗೊಂಡ ಪ್ರಕರಣ ಇದೇ ಮೊದಲು ಅಲ್ಲವಾದರೂ, ಜೀವ ಕಳೆದುಕೊಂಡ ಮೊದಲ ಘಟನೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.