ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್
Team Udayavani, Apr 18, 2024, 11:28 PM IST
ಹೊಸದಿಲ್ಲಿ: ಖ್ಯಾತ ಲಾಂಗ್ ಜಂಪರ್ ಮುರಳಿ ಶ್ರೀಶಂಕರ್ ಅವರು ತರಬೇತಿ ಪಡೆಯುವ ವೇಳೆ ಮೊಣಕಾಲಿನ ಗಾಯಕ್ಕೆ ಒಳಗಾದ ಕಾರಣ ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಹೊರಗುಳಿಯಲಿದ್ದಾರೆ. ಗಂಭೀರ ಗಾಯಗೊಂಡ ಕಾರಣ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಅವರು 2024ರ ಋತುವಿನಲ್ಲಿ ಯಾವುದೇ ಸ್ಫರ್ಧೆಯಲ್ಲಿ ಪಾಲ್ಗೊಳ್ಳುವುದು ಸಂಶಯ.
ಏಷ್ಯನ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಬೆಳ್ಳಿಯ ಪದಕ ವಿಜೇತ ಶ್ರೀಶಂಕರ್ ಅವರು 2023ರ ಏಷ್ಯನ್ ಆ್ಯತ್ಲೆಟಿಕ್ ಕೂಟದಲ್ಲಿ ದಾಖಲೆಯ 8.37 ಮೀ. ದೂರ ಹಾರುವ ಮೂಲಕ ಬೆಳ್ಳಿ ಪದಕ ಜಯಿಸಿದರಲ್ಲದೇ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳಲು ಅರ್ಹತೆ ಗಳಿಸಿದ್ದರು.
25ರ ಹರೆಯದ ಶ್ರೀಶಂಕರ್ ಎ. 27ರಂದು ಶಾಂಘಾç ಮತ್ತು ಮೇ 10ರಂದು ದೋಹಾದಲ್ಲಿ ನಡೆ ಯುವ ಡೈಮಂಡ್ಸ್ ಲೀಗ್ ಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ಈ ಋತುವಿನಲ್ಲಿ ತಮ್ಮ ಸ್ಪರ್ಧೆ ಯನ್ನು ಆರಂಭಿಸುವ ಉತ್ಸಾಹದಲ್ಲಿದ್ದರು. ಆದರೆ ಮಂಗಳ ವಾರ ತರಬೇತಿ ವೇಳೆ ಆದ ಗಾಯ ಅವರ ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳುವ ಕನಸನ್ನು ನುಚ್ಚುನೂರು ಮಾಡಿದೆ. ದುರದೃಷ್ಟವಶಾತ್ ಇದೊಂದು ದುಃಸ್ವಪ್ನದಂತೆ ಭಾಸ ವಾಗಿದ್ದರೂ ನಿಜವಾಗಿದೆ. ಇದರಿಂದ ನನ್ನ ಪ್ಯಾರಿಸ್ ಕನಸು ಮುಗಿದಿದೆ ಎಂದವರು ಜಾಲತಾಣದಲ್ಲಿ ಬರೆದು ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.