3 ಹುದ್ದೆಗಳಿಗೆ ಹಾಕಿ ಫೆಡರೇಶನ್ ಅಧ್ಯಕ್ಷ ನರೀಂದರ್ ಬಾತ್ರಾ ರಾಜೀನಾಮೆ
Team Udayavani, Jul 18, 2022, 10:59 PM IST
ಹೊಸದಿಲ್ಲಿ: ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ನರೀಂದರ್ ಬಾತ್ರಾ ಕೆಲವೇ ನಿಮಿಷಗಳ ಅಂತರದಲ್ಲಿ 3 ಪ್ರಮುಖ ಹುದ್ದೆಗಳಿಗೆ ರಾಜೀನಾಮೆ ನೀಡಿ ಸುದ್ದಿಯಾಗಿದ್ದಾರೆ.
65 ವರ್ಷದ ಹಿರಿಯ ಕ್ರೀಡಾ ಆಡಳಿತಗಾರ ರಾಗಿರುವ ನರೀಂದರ್ ಬಾತ್ರಾ ಮೊದಲು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ (ಐಒಎ) ಅಧ್ಯಕ್ಷತೆಗೆ ರಾಜೀನಾಮೆ ನೀಡಿದರು. ಬಳಿಕ ಅಂತಾರಾಷ್ಟ್ರೀಯ ಒಲಿಂಪಿಕ್ ಕೌನ್ಸಿಲ್ (ಐಒಸಿ) ಸದಸ್ಯ ಸ್ಥಾನದಿಂದ ಕೆಳಗಿಳಿದರು. ಸ್ವಲ್ಪ ಹೊತ್ತಿನಲ್ಲೇ ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್ (ಎಫ್ಐಎಚ್) ಅಧ್ಯಕ್ಷ ಸ್ಥಾನವನ್ನೂ ಬಿಟ್ಟುಕೊಟ್ಟರು.
ಕಾರಣ ರಹಸ್ಯವೇನಲ್ಲ
ಆದರೆ ನರೀಂದರ್ ಬಾತ್ರಾ ವಿರುದ್ಧ ಬಂದ ನಾನಾ ಆಪಾದನೆಗಳು, ಅಕ್ರಮ ಹಾಗೂ ಸುಳ್ಳು ಆಶ್ವಾಸನೆಗಳು ಈ ಬೆಳವಣಿಗೆಗೆ ಕಾರಣ ಎಂಬುದು ರಹಸ್ಯವೇನಲ್ಲ. ಹಾಕಿ ಇಂಡಿಯಾ ಫಂಡ್ನಿಂದ 35 ಲಕ್ಷ ರೂ.ಗಳನ್ನು ಸ್ವಂತಕ್ಕಾಗಿ ಬಳಸಿಕೊಂಡಿದ್ದಾರೆ ಎಂಬುದು ಇವರ ಮೇಲಿರುವ ಪ್ರಮುಖ ಆಪಾದನೆ. ಇವರ ಪದಚ್ಯುತಿಗೆ ಭಾರೀ ಒತ್ತಡವಿತ್ತು.
ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ ಹಾಗೂ ಹಾಕಿ ಫೆಡರೇಶನ್ನ ಕೆಲವರು ನ್ಯಾಯಾ ಲಯದ ಮೆಟ್ಟಿಲೇರಿದ್ದರು. ಐಒಎ ಅಧ್ಯಕ್ಷತೆಯಲ್ಲಿ ಮುಂದುವರಿಯದಂತೆ ಕಳೆದ ತಿಂಗಳು ದಿಲ್ಲಿ ಹೈಕೋರ್ಟ್ ಬಾತ್ರಾಗೆ ಆದೇಶಿಸಿತ್ತು. ಆದರೂ ಅವರು ಹುದ್ದೆ ಯಲ್ಲಿ ಮುಂದುವರಿದಿದ್ದರು. ಬಾತ್ರಾ ಆಜೀವ ಸದಸ್ಯತ್ವದ ಮೂಲಕ ಈ ಹುದ್ದೆಗಳಲ್ಲಿ ಮುಂದು ವರಿ ಯುವ ಯೋಜನೆ ಹಾಕಿಕೊಂಡಾಗ ಅವರ ಈ ಸದಸ್ವತ್ವವನ್ನೂ ಹೈಕೋರ್ಟ್ ರದ್ದುಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.