ಫಿಲೋಮಿನಾದ ಪ್ರಶಾಂತ್ ನಾಯ್ಕ ರಾಷ್ಟ್ರೀಯ ಚೆಸ್ ಚಾಂಪಿಯನ್
Team Udayavani, Jan 7, 2017, 3:45 AM IST
ದರ್ಬೆ: ಇಲ್ಲಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಶಾಂತ್ ಜೆ. ನಾಯ್ಕ ಹೈದರಾಬಾದ್‌ನಲ್ಲಿ ಜರಗಿದ 1500 ರೇಟೆಡ್ ಒಳಗಿನ ರಾಷ್ಟ್ರೀಯ ಫಿಡೆ ಚೆಸ್ ಪಂದ್ಯಾಟದಲ್ಲಿ ಹೊಸ ರಾಷ್ಟ್ರೀಯ ಚಾಂಪಿಯನ್ ಆಗಿ ಮೂಡಿ ಬಂದಿದ್ದಾರೆ.
ದೇಶದ ಪ್ರಬಲ ಚೆಸ್ ಆಟಗಾರರು ಭಾಗವಹಿಸಿದ ಈ ಸ್ಪರ್ಧಾಕೂಟದಲ್ಲಿ ಪ್ರಶಾಂತ್ 9 ಸುತ್ತುಗಳಲ್ಲಿ ಸತತ ಪೈಪೋಟಿ ನೀಡಿ 8.5 ಅಂಕಗಳನ್ನು ಗಳಿಸಿ, ಚಾಂಪಿಯನ್ ಪಟ್ಟದೊಂದಿಗೆ ಟ್ರೋಫಿ ಮತ್ತು 80,000 ರೂ. ನಗದು ಬಹುಮಾನ ಪಡೆದುಕೊಂಡಿದ್ದಾರೆ.
ಜ. 13 ರಿಂದ 16 ರ ತನಕ ದಿಲ್ಲಿಯಲ್ಲಿ 1600 ರೇಟೆಡ್ ಒಳಗಿನವರಿಗೆ ಅಖೀಲ ಭಾರತ ಚೆಸ್ ಫೆಡರೇಶನ್ ಆಯೋಜಿಸುತ್ತಿರುವ ಅಂತಾರಾಷ್ಟ್ರೀಯ ಚೆಸ್ ಸ್ಪರ್ಧೆಯಲ್ಲಿ ಪ್ರಶಾಂತ್ ಹಾಗೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅವನೀಶ್ ಭಾಗವಹಿಸಲಿದ್ದಾರೆ.
ರಾಷ್ಟ್ರೀಯ ಚಾಂಪಿಯನ್‌ಶಿಪ್ ಪ್ರಶಸ್ತಿ ಗಳಿಸಿದ ಪ್ರಶಾಂತ್ ಅವರನ್ನು ಕಾಲೇಜಿನ ಪ್ರಾಂಶುಪಾಲ ವಂ| ವಿಜಯ್ ಲೋಬೊ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಕಾಶ್ ಡಿ’ಸೋಜಾ ಮತ್ತು ಸೌಮ್ಯಲತಾ ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.