ಟಿ20 ತ್ರಿಕೋನ ಸರಣಿ: ಬಾಂಗ್ಲಾ ವಿರುದ್ಧ ಕಿವೀಸ್ ಪಡೆಗೆ ಭರ್ಜರಿ ಗೆಲುವು
Team Udayavani, Oct 9, 2022, 8:55 PM IST
ಕ್ರೈಸ್ಟ್ಚರ್ಚ್: ಆತಿಥೇಯ ನ್ಯೂಜಿಲೆಂಡ್ ತಂಡವು ಟಿ20 ತ್ರಿಕೋನ ಸರಣಿಯ ಭಾನುವಾರದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 8 ವಿಕೆಟ್ಗಳಿಂದ ಸೋಲಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶವು 8 ವಿಕೆಟಿಗೆ 137 ರನ್ ಗಳಿಸಿತ್ತು. ಇದಕ್ಕುತ್ತರವಾಗಿ ನ್ಯೂಜಿಲೆಂಡ್ ತಂಡವು 17.5 ಓವರ್ಗಳಲ್ಲಿ ಕೇವಲ 2 ವಿಕೆಟಿಗೆ 142 ರನ್ ಪೇರಿಸಿ ಜಯಭೇರಿ ಬಾರಿಸಿತು. ಇದು ಈ ಸರಣಿಯಲ್ಲಿ ನ್ಯೂಜಿಲೆಂಡಿನ ಮೊದಲ ಗೆಲುವು ಆಗಿದೆ. ಸರಣಿಯ ಇನ್ನೊಂದು ತಂಡವಾದ ಪಾಕಿಸ್ತಾನ ಮೊದಲೆರಡು ಪಂದ್ಯಗಳಲ್ಲಿ ಜಯ ಸಾಧಿಸಿ ಅಗ್ರಸ್ಥಾನದಲ್ಲಿದೆ.
ಸರಣಿಯ ಇನ್ನೊಂದು ಸುತ್ತಿನ ಪಂದ್ಯದಲ್ಲಿ ಮಂಗಳವಾರ ಪಾಕಿಸ್ತಾನವು ಮತ್ತೆ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಅ. 12ರಂದು ನ್ಯೂಜಿಲೆಂಡ್-ಬಾಂಗ್ಲಾದೇಶ ಮತ್ತು ಅ. 13ರಂದು ಪಾಕಿಸ್ತಾನ -ಬಾಂಗ್ಲಾದೇಶ ನಡುವೆ ಪಂದ್ಯ ನಡೆಯಲಿದೆ. ಅ. 14ರಂದು ಫೈನಲ್ ನಡೆಯಲಿದೆ.
ಸಂಕ್ಷಿಪ್ತ ಸ್ಕೋರು: ಬಾಂಗ್ಲಾದೇಶ 8 ವಿಕೆಟಿಗೆ 137 (ನಜ್ಮುಲ್ ಹೊಸೈನ್ ಶಾಂಟೊ 33, ನೂರಲ್ ಹಸನ್ 25 ಔಟಾಗದೆ, ಬೌಲ್ಟ್ 25ಕ್ಕೆ 2, ಸೌಥಿ 34ಕ್ಕೆ 2, ಬ್ರೇಸ್ವೆಲ್ 14ಕ್ಕೆ 2, ಐಸ್ ಸೋಧಿ 31ಕ್ಕೆ 2); ನ್ಯೂಜಿಲೆಂಡ್ 17.5 ಓವರ್ಗಳಲ್ಲಿ 2 ವಿಕೆಟಿಗೆ 142 ( ಡೆವೋನ್ ಕಾನ್ವೆ 70 ಔಟಾಗದೆ, ಕೇನ್ ವಿಲಿಯಮ್ಸನ್ 30).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.