138 ರನ್ ಮುನ್ನಡೆಯಲ್ಲಿ ಕಿವೀಸ್
Team Udayavani, Aug 26, 2019, 5:54 AM IST
ಕೊಲಂಬೊ: ಮಳೆಪೀಡಿತ ಕೊಲಂಬೊ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲ್ಯಾಂಡ್ ಅಮೋಘ ಬ್ಯಾಟಿಂಗ್ ಪ್ರದರ್ಶನ ಮುಂದುವರಿಸಿದೆ. 4ನೇ ದಿನದಾಟದ ಅಂತ್ಯಕ್ಕೆ 138 ರನ್ನುಗಳ ಮುನ್ನಡೆ ಗಳಿಸಿದೆ.
ಶ್ರೀಲಂಕಾದ 244 ರನ್ನುಗಳ ಮೊದಲ ಇನ್ನಿಂಗ್ಸ್‌ಗೆ ಉತ್ತರವಾಗಿ ನ್ಯೂಜಿಲ್ಯಾಂಡ್ ದಾಖಲಿಸಿದ ಸ್ಕೋರ್ 5 ವಿಕೆಟಿಗೆ 382 ರನ್. ಕೀಪರ್ ಬ್ರಾಡ್ಲಿ ವಾಟಿÉಂಗ್ 81 ಮತ್ತು ಕಾಲಿನ್ ಡಿ ಗ್ರ್ಯಾಂಡ್‌ಹೋಮ್ 83 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಈ ಜೋಡಿಯಿಂದ ಮುರಿಯದ 6ನೇ ವಿಕೆಟಿಗೆ 113 ರನ್ ಒಟ್ಟುಗೂಡಿದೆ. 111 ರನ್ ಗಳಿಸಿ ಅಜೇಯರಾಗಿದ್ದ ಆರಂಭಕಾರ ಟಾಮ್ ಲ್ಯಾಥಂ 154ರ ತನಕ ಸಾಗಿದರು.
ಸೋಮವಾರ ಪಂದ್ಯದ ಕೊನೆಯ ದಿನ. ಆದರೆ ಇನ್ನೂ ಒಂದು ಇನ್ನಿಂಗ್ಸ್ ಕೂಡ ಪೂರ್ತಿಯಾಗದ ಕಾರಣ ಈ ಪಂದ್ಯ ಡ್ರಾಗೊಳ್ಳುವುದು ಬಹುತೇಕ ಖಚಿತ. ಆಗ ಶ್ರೀಲಂಕಾ 2 ಪಂದ್ಯಗಳ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ. ಗಾಲೆ ಪಂದ್ಯವನ್ನು ಲಂಕಾ 6 ವಿಕೆಟ್‌ಗಳಿಂದ ಗೆದ್ದಿತ್ತು.
ಸಂಕ್ಷಿಪ್ತ ಸ್ಕೋರ್: ಶ್ರೀಲಂಕಾ-244. ನ್ಯೂಜಿಲ್ಯಾಂಡ್-5 ವಿಕೆಟಿಗೆ 382.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Editorial: ರಾಜ್ಯದ ಸರಕಾರಿ ಆಸ್ಪತ್ರೆಗಳಿಗೆ ಬೇಕಿದೆ ತುರ್ತು ಕಾಯಕಲ್ಪ
Mangaluru: ದಿಢೀರ್ ಆಗಿ ಕಾಣಿಸಿಕೊಂಡ ನಟ ಯಶ್
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.