ಮತ್ತೆ ಪಾಕಿಸ್ಥಾನಕ್ಕೆ ಬರಲಿದೆ ಕಿವೀಸ್ ಕ್ರಿಕೆಟ್ ತಂಡ
Team Udayavani, Dec 20, 2021, 9:30 PM IST
ಕರಾಚಿ: ಈ ವರ್ಷ ಪಾಕಿಸ್ತಾನಕ್ಕೆ ಆಗಮಿಸಿಯೂ ಕ್ರಿಕೆಟ್ ಸರಣಿಯನ್ನು ಆಡದೇ ವಾಪಸಾದ ನ್ಯೂಜಿಲೆಂಡ್ ತಂಡದ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದೆ.
ಕಿವೀಸ್ ಪಡೆ 2022ರ ಅಂತ್ಯದಲ್ಲಿ ಪಾಕಿಸ್ತಾನಕ್ಕೆ ಆಗಮಿಸಿ ಎರಡು ಹಂತಗಳಲ್ಲಿ ಸರಣಿಯನ್ನು ಮುಂದುವರಿಸಲಿದೆ. ಒಟ್ಟಾರೆ ಈ ವರ್ಷ ದಿಢೀರನೆ ರದ್ದು ಮಾಡಿದ್ದ ಸರಣಿಗೆ ಪರಿಹಾರದಂತೆ ನ್ಯೂಜಿಲೆಂಡ್ ಪ್ರವಾಸ ಮಾಡಲಿದೆ.
ಈ ವರ್ಷದ ಪ್ರವಾಸದಲ್ಲಿ ಪಾಕಿಸ್ತಾನ-ನ್ಯೂಜಿಲೆಂಡ್ ನಡುವೆ ಸೀಮಿತ ಓವರ್‌ಗಳ 10 ಪಂದ್ಯ ನಡೆಯಬೇಕಿತ್ತು. 2022-23ರಲ್ಲಿ 2 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿದೆ.
ಇದನ್ನೂ ಓದಿ:ಹಿಂದಿ ವಿರೋಧಿಸುವವರು, ಉರ್ದು ಬರೆದರೆ ಪ್ರಶ್ನಿಸಲ್ಲ: ಬಸನಗೌಡ ಪಾಟೀಲ್ ಯತ್ನಾಳ್
ಇದು ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಹಾಗೂ ಕ್ರಿಕೆಟ್ ವರ್ಲ್ಡ್ಕಪ್ ಸೂಪರ್ ಲೀಗ್ ವ್ಯಾಪ್ತಿಗೆ ಬರಲಿದೆ. ಬಳಿಕ 2023ರ ಏಪ್ರಿಲ್‌ನಲ್ಲಿ ಮತ್ತೆ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಲಿರುವ ನ್ಯೂಜಿಲೆಂಡ್ ತಂಡ 5 ಏಕದಿನ ಹಾಗೂ 5 ಟಿ20 ಪಂದ್ಯಗಳ ಸರಣಿಗಳಲ್ಲಿ ಪಾಲ್ಗೊಳ್ಳಲಿದೆ. ಪಿಸಿಬಿ ಅಧ್ಯಕ್ಷ ರಮೀಜ್ ರಾಜ ಸೋಮವಾರ ಇದನ್ನು ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.