ಗಾಯಾಳು ನಥನ್ ಆ್ಯಸ್ಟಲ್ ಔಟ್ ಕಿವೀಸ್ ತಂಡಕ್ಕೆ ಸಾಮರ್‌ವಿಲ್ಲೆ
Team Udayavani, Nov 10, 2018, 6:50 AM IST
ವೆಲ್ಲಿಂಗ್ಟನ್: ಯುಎಇಯಲ್ಲಿ ಪಾಕಿಸ್ಥಾನ ವಿರುದ್ಧ ಕ್ರಿಕೆಟ್ ಸರಣಿ ಆಡುತ್ತಿರುವ ನ್ಯೂಜಿಲ್ಯಾಂಡಿಗೆ ಗಾಯಾಳು ಆಟಗಾರರ ಸಂಕಟ ತೀವ್ರಗೊಂಡಿದೆ. ಆಲ್‌ರೌಂಡರ್ ಕೋರಿ ಆ್ಯಂಡರ್ಸನ್ ಹೊರಬಿದ್ದ ಬೆನ್ನಲ್ಲೇ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಟಾಡ್ ಆ್ಯಸ್ಟಲ್ ಕೂಡ ಗಾಯಾಳಾಗಿ ಟೆಸ್ಟ್ ಸರಣಿಯಿಂದಲೇ ಬೇರ್ಪಟ್ಟ ಸುದ್ದಿ ಪ್ರಕಟಗೊಂಡಿದೆ.
ಟಾಡ್ ಆ್ಯಸ್ಟಲ್ ಬದಲು 34ರ ಹರೆಯದ ಆಫ್ಸ್ಪಿನ್ ಬೌಲಿಂಗ್ ಆಲ್‌ರೌಂಡರ್ ವಿಲಿಯಂ ಸಾಮರ್‌ವಿಲ್ಲೆ ಅವರನ್ನು ಸೇರಿಸಿಕೊಳ್ಳಲಾಗಿದೆ. ಮೂಲತಃ ನ್ಯೂಜಿಲ್ಯಾಂಡ್‌ನವರೇ ಆದ 34ರ ಹರೆಯದ ಸಾಮರ್‌ವಿಲ್ಲೆ ಆಸ್ಟ್ರೇಲಿಯದ ನ್ಯೂ ಸೌತ್ ವೇಲ್ಸ್ ಪರ 16 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ನ್ಯೂಜಿಲ್ಯಾಂಡ್ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸುವ ಸಲುವಾಗಿ ಅಲ್ಲಿಂದ ಬಿಡುಗಡೆಗೊಂಡಿದ್ದರು. ಬಳಿಕ “ಆಕ್ಲೆಂಡ್ ಏಸ್’ ತಂಡದ ಪರ ಆಡುವುದರೊಂದಿಗೆ ತವರಿನ ತಂಡ ಸೇರುವ ಹಾದಿ ಸುಗಮಗೊಂಡಿತ್ತು.
ನ. 16ರಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಮರ್‌ವಿಲ್ಲೆ ನ್ಯೂಜಿಲ್ಯಾಂಡ್ ಕ್ಯಾಪ್ ಧರಿಸಬಹುದು.
ಪರಿಷ್ಕೃತ ಟೆಸ್ಟ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಿಂಡೆಲ್, ಟ್ರೆಂಟ್ ಬೌಲ್ಟ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಂ, ಹೆನ್ರಿ ನಿಕೋಲ್ಸ್, ಅಜಾಜ್ ಪಟೇಲ್, ಜೀತ್ ರಾವಲ್, ಐಶ್ ಸೋಧಿ, ಟಿಮ್ ಸೌಥಿ, ರಾಸ್ ಟಯ್ಲರ್, ನೀಲ್ ವ್ಯಾಗ್ನರ್, ಬ್ರಾಡ್ಲಿ ವಾಟಿÉಂಗ್, ವಿಲಿಯಂ ಸಾಮರ್‌ವಿಲ್ಲೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.