Raking ಬಗ್ಗೆ ಚಿಂತೆ ಮಾಡಲ್ಲ; ಶ್ರೀಕಾಂತ್
Team Udayavani, Oct 31, 2017, 6:00 AM IST
ಪ್ಯಾರಿಸ್: ಪ್ರಚಂಡ ಫಾರ್ಮ್ನಲ್ಲಿರುವ ಭಾರತೀಯ ಶಟ್ಲರ್ ಕಿದಂಬಿ ಶ್ರೀಕಾಂತ್ ಈ ಋತುವಿನಲ್ಲಿ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಕೂಟದಲ್ಲಿ ಐದು ಬಾರಿ ಫೈನಲಿಗೇರಿದ್ದು ನಾಲ್ಕು ಸಲ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ. ಈ ಮೂಲಕ ವಿಶ್ವದ ನಂಬರ್ ವನ್ ಸ್ಥಾನಕ್ಕೇರುವತ್ತ ಹೆಜ್ಜೆ ಇಟ್ಟಿದ್ದಾರೆ.
ಶ್ರೀಕಾಂತ್ ಅವರ ಸದ್ಯದ ನಿರ್ವಹಣೆಯನ್ನು ಗಮನಿಸಿದರೆ ಮುಂದಿನ ವಾರ ಪ್ರಕಟವಾಗುವ ನೂತನ ಬಿಡಬ್ಲ್ಯುಎಫ್ ರ್‍ಯಾಂಕಿಂಗ್‌ನಲ್ಲಿ ತನ್ನ ರ್‍ಯಾಂಕಿಂಗನ್ನು ಇನ್ನಷ್ಟು ಉತ್ತಮಪಡಿಸುವ ಸಾಧ್ಯತೆಯಿದೆ. ಆದರೆ ಅದಕ್ಕಾಗಿ ನಿದ್ದೆ ಬಿಡುವ ಪ್ರಶ್ನೆಯೇ ಇಲ್ಲ. ರ್‍ಯಾಂಕಿಂಗ್ ಬಗ್ಗೆ ಹೆಚ್ಚು ಚಿಂತೆ ಮಾಡುವುದಿಲ್ಲ. ಆದರೆ ಫಾರ್ಮ್ ಉಳಿಸಿಕೊಳ್ಳಲು ಪ್ರಯತ್ನಿಸುವೆ ಎಂದು ಶ್ರೀಕಾಂತ್ ಹೇಳಿದ್ದಾರೆ.
ವಿಶ್ವ ನಂಬರ್ ವನ್ ಗೌರವದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ನನಗೇನೂ ತಿಳಿದಿಲ್ಲ. ಖಂಡಿತವಾಗಿಯೂ ರ್‍ಯಾಂಕಿಂಗ್‌ನಲ್ಲಿ ಉನ್ನತ ಸ್ಥಾನಕ್ಕೇರಲಿದ್ದೇನೆ. ಆದರೆ ಯಾವ ಸ್ಥಾನವೆಂಬುದು ಗೊತ್ತಿಲ್ಲ ಮತ್ತು ಅದಕ್ಕಾಗಿ ಚಿಂತೆ ಮಾಡುವುದಿಲ್ಲ ಎಂದವರು ಹೇಳಿದರು.
ರವಿವಾರ ನಡೆದ ಫೈನಲ್‌ನಲ್ಲಿ ಜಪಾನಿನ ಕೆಂಟ ನಿಶಿಮೊಟೊ ಅವರನ್ನು ನೇರ ಸೆಟ್‌ಗಳಿಂದ ಕೆಡಹಿದ ಶ್ರೀಕಾಂತ್ ಅವರು ಫ್ರೆಂಚ್ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಕೂಟದ ಪ್ರಶಸ್ತಿ ಜಯಿಸಿದ್ದರು. ಇದು ಅವರ ಸತತ ಎರಡನೇ ಮತ್ತು ಈ ಋತುವಿನ ನಾಲ್ಕನೇ ಪ್ರಶಸ್ತಿಯಾಗಿದೆ. ಕಳೆದ ವಾರ ಅವರು ಡೆನ್ಮಾರ್ಕ್ ಓಪನ್ ಕೂಟದ ಪ್ರಶಸ್ತಿ ಜಯಿಸಿದ್ದರು. ಅವರು ಈ ಮೊದಲು ಜೂನ್‌ನಲ್ಲಿ ಸತತವಾಗಿ ಇಂಡೋನೇಶ್ಯ ಮತ್ತು ಆಸ್ಟ್ರೇಲಿಯ ಓಪನ್ ಕೂಟದ ಪ್ರಶಸ್ತಿ ಜಯಿಸಿದ್ದರು.
ವಿಶ್ವದ ನಂಬರ್ ವನ್ ಸ್ಥಾನದಲ್ಲಿರುವ ಡೆನ್ಮಾರ್ಕ್‌ನ ವಿಕ್ಟರ್ ಆ್ಯಕ್ಸೆಲ್ಸೆನ್ ಅಂಕಗಳ ಆಧಾರದಲ್ಲಿ ನನಗಿಂತ ಬಹಳಷ್ಟು ಮುನ್ನಡೆಯಲ್ಲಿದ್ದಾರೆ. ಡೆನ್ಮಾರ್ಕ್ ಓಪನ್ ಮೊದಲು ನನ್ನ ಮತ್ತು ವಿಕ್ಟರ್ ನಡುವೆ ಬಹಳಷ್ಟು ವ್ಯತ್ಯಾಸಗಳಿವೆ. ನಂಬರ್ ವನ್ ಸ್ಥಾನಕ್ಕೇರುವ ಸಾಧ್ಯತೆ ನನಗಿಲ್ಲವೆಂದು ನಂಬಿದ್ದೇನೆ. ನನ್ನ ರ್‍ಯಾಂಕಿಂಗನ್ನು ಒಂದು ಅಥವಾ ಎರಡು ಸ್ಥಾನ ಉತ್ತಮಪಡಿಸಿಕೊಳ್ಳಬಹುದು ಎಂದು ಶ್ರೀಕಾಂತ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.