ವಿಶ್ವ ಟೆನಿಸ್ ಶ್ರೇಯಾಂಕ: 5ನೇ ಸ್ಥಾನಕ್ಕೆ ಕುಸಿದ ಜೊಕೊ
Team Udayavani, Aug 1, 2017, 6:00 AM IST
ನವದೆಹಲಿ: ಮಾಜಿ ವಿಶ್ವ ನಂ.1 ಶ್ರೇಯಾಂಕಿತ ನೊವಾಕ್ ಜೊಕೊವಿಚ್ ಹೊಸದಾಗಿ ಬಿಡುಗಡೆಯಾದ ಟೆನಿಸ್ ಶ್ರೇಯಾಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದಕ್ಕೂ ಮುನ್ನ ಜೊಕೊ 4ನೇ ಸ್ಥಾನದಲ್ಲಿದ್ದರು. ಸ್ವಿಸ್ನ ಸ್ಟಾನ್ ವಾವ್ರಿಂಕ 3 ರಿಂದ 4ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಮೊಣಕೈ ನೋವಿನಿಂದ ಬಳಲುತ್ತಿರುವ ಜೊಕೊ ಪ್ರಸಕ್ತ ವರ್ಷದಲ್ಲಿ ಯಾವುದೇ ಟೂರ್ನಿಯಲ್ಲಿ ಆಡುವುದಿಲ್ಲ ಎಂದು ಘೋಷಿಸಿದ್ದಾರೆ.
ಕಳೆದು ತಿಂಗಳು ನಡೆದ ವಿಂಬಲ್ಡನ್ನಲ್ಲಿ ಜೊಕೊ ಭುಜದ ನೋವಿನಿಂದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅರ್ಧದಲ್ಲಿಯೇ ಹಿಂದೆ ಸರಿದಿದ್ದರು. ಆ ನಂತರ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು. ಮೊಣಕೈ ಗಾಯ ಗಂಭೀರವಾಗಿರುವುದರಿಂದ ವೈದ್ಯರು ದೀರ್ಘಾವಧಿ ವಿಶ್ರಾಂತಿಗೆ ಸೂಚಿಸಿದ್ದರು. ಉಳಿದಂತೆ ಇಂಗ್ಲೆಂಡ್ನ ಆ್ಯಂಡಿ ಮರ್ರೆ ವಿಂಬಲ್ಡನ್ ಓಪನ್ನಲ್ಲಿ ಕ್ವಾರ್ಟರ್ ಫೈನಲ್ನಲ್ಲಿಯೇ ಸೋತರೂ ನಂ.1ನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ತಾರಾ ಟೆನಿಸ್ ಆಟಗಾರರಾದ ರಾಫೆಲ್ ನಡಾಲ್ ಮತ್ತು ವಿಂಬಲ್ಡನ್ ವಿಜೇತ ರೋಜರ್ ಫೆಡರರ್ ಕ್ರಮವಾಗಿ 2 ಮತ್ತು 3ನೇ ಸ್ಥಾನ ಕಾಯ್ದುಕೊಂಡಿದ್ದಾರೆ.
ನಂ.1 ಸ್ಥಾನ ಕಾಯ್ದುಕೊಂಡ ಪ್ಲಿಸ್ಕೋವಾ: ಮಹಿಳೆಯರ ಡಬ್ಲೂéಟಿಎ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದ್ದು, ಚೆಕ್ ಗಣರಾಜ್ಯದ ಕ್ಯಾರೋಲಿನಾ ಪ್ಲಿಸ್ಕೋವಾ ನಂ.1ನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಪ್ಲಿಸ್ಕೋವಾ ಒಟ್ಟು 6751 ಅಂಕವನ್ನು ಹೊಂದಿದ್ದಾರೆ. ರೊಮೇನಿಯಾದ ಸಿಮೋನಾ ಹಾಲೆಪ್ ನಂ.2ನೇ ಸ್ಥಾನಕ್ಕೆ ಜಿಗಿದ್ದಾರೆ. ಅದೇ ರೀತಿ ವಿಂಬಲ್ಡನ್ ಚಾಂಪಿಯನ್ ಸ್ಪೇನ್ನ ಗಾರ್ಬಿನ್ ಮುಗುರುಜ 4ನೇ ಶ್ರೇಯಾಂಕಕ್ಕೆ ಜಿಗಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.