ODI;ಮೊದಲ ಬಾರಿಗೆ ದಕ್ಷಿಣ ಆಫ್ರಿಕಾವನ್ನು ಸೋಲಿಸಿದ ಅಫ್ಘಾನಿಸ್ಥಾನ
Team Udayavani, Sep 19, 2024, 11:44 PM IST
ಶಾರ್ಜಾ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ಥಾನ ತಂಡವು ಆರು ವಿಕೆಟ್ಗಳ ಗೆಲುವು ಸಾಧಿಸಿ ಸಂಭ್ರಮಿಸಿದೆ. ಈ ಗೆಲುವಿನಿಂದ ಅಫ್ಘಾನಿಸ್ಥಾನ ತಂಡವು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸರಣಿಯ ದ್ವಿತೀಯ ಪಂದ್ಯ ಶಾರ್ಜಾದಲ್ಲಿಯೇ ಸೆ. 20ರಂದು ನಡೆಯಲಿದೆ.
ಫಝಲ್ಲಾಕ್ ಫಾರೂಖಿ ಅವರ ಮಾರಕ ದಾಳಿಗೆ ಕುಸಿದ ದಕ್ಷಿಣ ಆಫ್ರಿಕಾವು 33.3 ಓವರ್ಗಳಲ್ಲಿ 106 ರನ್ನಿಗೆ ಆಲೌಟಾಯಿತು. ಇದಕ್ಕುತ್ತರವಾಗಿ ಅಘಾ^ನಿಸ್ಥಾನ ತಂಡವು 26 ಓವರ್ಗಳಲ್ಲಿ ನಾಲ್ಕು ವಿಕೆಟಿಗೆ 107 ರನ್ ಗಳಿಸಿ ಜಯಭೇರಿ ಬಾರಿಸಿತು. ಗುಲ್ಬಾದಿನ್ ನೈಬ್ 34 ರನ್ ಗಳಿಸಿ ಅಜೇಯರಾಗಿ ಉಳಿದರು. ಫಾರೂಖೀ 35 ರನ್ನಿಗೆ ನಾಲ್ಕು ವಿಕೆಟ್ ಕಿತ್ತರು.
ಅಫ್ಘಾನಿಸ್ಥಾನದ ಆರಂಭಿಕ ಬೌಲರ್ಗಳಾದ ಫಝಲ್ಲಾಕ್ ಫಾರೂಖೀ ಮತ್ತು ಘಾಜನ್ಫರ್ ಅವರ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾವು ಪವರ್ಪ್ಲೇ ವೇಳೆ 36 ರನ್ನಿಗೆ 7 ವಿಕೆಟ್ ಕಳೆದುಕೊಂಡು ಶೋಚನೀಯ ಸ್ಥಿತಿಗೆ ತಲುಪಿತ್ತು. ಇದು ಏಕದಿನ ಪಂದ್ಯದಲ್ಲಿ ತಂಡದ ಅತ್ಯಂತ ಕಳಪೆ ಆರಂಭವಾಗಿತ್ತು. ವಿಯಾನ್ ಮುಲ್ಡರ್ ಮತ್ತು ಬಿಜಾರ್ನ್ ಫೋರ್ತುನ್ ಅವರು 8ನೇ ವಿಕೆಟಿಗೆ 39 ರನ್ನುಗಳ ಜತೆಯಾಟ ನಡೆಸಿದ್ದರಿಂದ ತಂಡ ನಿಕೃಷ್ಟ ಮೊತ್ತಕ್ಕೆ ಆಲೌಟ್ ಆಗುವುದರಿಂದ ಪಾರಾಯಿತು. 69 ರನ್ನಿಗೆ ಆಲೌಟ್ ಆಗಿರುವುದು ತಂಡದ ನಿಕೃಷ್ಟ ಮೊತ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.