ದ್ವಿತೀಯ ಪಂದ್ಯ: ಆಸ್ಟ್ರೇಲಿಯ ವಿರುದ್ಧ ಇಂಗ್ಲೆಂಡ್ ಗೆ ಸೋಲು; ಆಸ್ಟ್ರೇಲಿಯಕ್ಕೆ ಏಕದಿನ ಸರಣಿ
Team Udayavani, Nov 19, 2022, 11:32 PM IST
ಸಿಡ್ನಿ: ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 72 ರನ್ನುಗಳ ಭಾರೀ ಅಂತರದಿಂದ ಕೆಡವಿದ ಆಸ್ಟ್ರೇಲಿಯ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ.
ಸಿಡ್ನಿಯಲ್ಲಿ ಸಿಡಿದು ನಿಂತ ಆಸ್ಟ್ರೇಲಿಯ 8 ವಿಕೆಟ್ ನಷ್ಟಕ್ಕೆ 280 ರನ್ ಪೇರಿಸಿದರೆ, ಇಂಗ್ಲೆಂಡ್ 38.5 ಓವರ್‌ಗಳಲ್ಲಿ 208ಕ್ಕೆ ಆಲೌಟ್ ಆಯಿತು. ಅಡಿಲೇಡ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಕಾಂಗರೂ ಪಡೆ 6 ವಿಕೆಟ್‌ಗಳಿಂದ ಗೆದ್ದಿತ್ತು.
ಮಿಚೆಲ್ ಸ್ಟಾರ್ಕ್ ಮೊದಲ ಓವರ್‌ನಲ್ಲೇ ಜೇಸನ್ ರಾಯ್ ಮತ್ತು ಡೇವಿಡ್ ಮಲಾನ್ ಅವರನ್ನು ಶೂನ್ಯಕ್ಕೆ ಕೆಡವಿ ಇಂಗ್ಲೆಂಡಿಗೆ ಮರ್ಮಾಘಾತವಿಕ್ಕಿದರು.
ನಡುವೆ ಜೇಮ್ಸ್ ವಿನ್ಸ್ (60) ಮತ್ತು ಸ್ಯಾಮ್ ಬಿಲ್ಲಿಂಗ್ಸ್ (71) ಹೋರಾಟವೊಂದನ್ನು ಸಂಘಟಿಸಿದರೂ ಈ ಜೋಡಿ ಬೇರ್ಪಟ್ಟ ಬಳಿಕ ಆಸೀಸ್ ದಾಳಿ ತೀವ್ರಗೊಂಡಿತು. ಸ್ಟಾರ್ಕ್ ಸಾಧನೆ 47ಕ್ಕೆ 4 ವಿಕೆಟ್.
ಆಸೀಸ್ ಬ್ಯಾಟಿಂಗ್ ಸರದಿಯಲ್ಲಿ ಮೂವರಿಂದ ಅರ್ಧ ಶತಕ ದಾಖಲಾಯಿತು. ಸ್ಟೀವನ್ ಸ್ಮಿತ್ 6 ರನ್ನಿನಿಂದ ಶತಕ ವಂಚಿತರಾದರು (94). ಮಾರ್ನಸ್ ಲಬುಶೇನ್ 58, ಮಿಚೆಲ್ ಮಾರ್ಷ್ 50 ರನ್ ಹೊಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australian Open: ಹಿಂದೆ ಸರಿದ ಸಿಮೋನಾ ಹಾಲೆಪ್
South Africa vs Pakistan 2nd Test: ಬಾಶ್ ದಾಖಲೆ: ದ. ಆಫ್ರಿಕಾ ಮುನ್ನಡೆ
Melbourne Cricket Club; ಸಚಿನ್ ತೆಂಡುಲ್ಕರ್‌ಗೆ ಗೌರವ ಸದಸ್ಯತ್ವ
Boxing: ವಿಶ್ವ ಬಾಕ್ಸಿಂಗ್ ಸಂಸ್ಥೆಯಿಂದ ಮಧ್ಯಂತರ ಏಷ್ಯನ್ ಮಂಡಳಿ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.