World Cup; ಲೆಗ್ ಸ್ಪಿನ್ನರ್ ಚಾಹಲ್ ರನ್ನು ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್
ರಾಹುಲ್ ಈ ಕ್ರಮಾಂಕದಲ್ಲಿ ಆಡಿದರೆ ಬೆಸ್ಟ್ ಎಂದ ಮಾಜಿ ಆಲ್‌ರೌಂಡರ್
Team Udayavani, Sep 29, 2023, 4:33 PM IST
ಮುಂಬಯಿ: ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ತಂಡದಿಂದ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರನ್ನು ಕೈಬಿಟ್ಟಿರುವುದು ತಪ್ಪಾಗಿರಬಹುದು ಎಂದು ಭಾರತದ ಲೆಜೆಂಡರಿ ಮಾಜಿ ಆಲ್‌ರೌಂಡರ್ ಆಟಗಾರ ಯುವರಾಜ್ ಸಿಂಗ್ ಹೇಳಿದ್ದಾರೆ.
‘ದಿ ವೀಕ್’ ನೊಂದಿಗೆ ಸಂದರ್ಶನದಲ್ಲಿ ಮಾತನಾಡಿದ ಯುವರಾಜ್ ಸಿಂಗ್ ‘ಚಾಹಲ್ ನಿಧಾನಗತಿಯ ವಿಕೆಟ್‌ಗಳಲ್ಲಿ ಅಪಾಯಕಾರಿಯಾಗಿರಬಹುದು ಮತ್ತು ಅವರನ್ನು ತಂಡಕ್ಕೆ ಪರಿಗಣಿಸದಿರುವುದು ತಪ್ಪಾಗಿರಬಹುದು’ ಎಂದು ಹೇಳಿದ್ದಾರೆ.
ಗಾಯಾಳಾಗಿ ಅಕ್ಷರ್ ಪಟೇಲ್ ತಂಡದಿಂದ ಹೊರಬಿದ್ದ ಬಳಿಕ ಅನುಭವಿ ಲೆಗ್ ಸ್ಪಿನ್ನರ್ ಆರ್. ಅಶ್ವಿನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಚಾಹಲ್ ಭಾರತ ಪರ 72 ಏಕದಿನ ಪಂದ್ಯಗಳಲ್ಲಿ 141 ವಿಕೆಟ್ ಪಡೆದಿದ್ದಾರೆ.
‘ಕನಿಷ್ಠ ಚಾಹಲ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬಹುದಿತ್ತು. ಲೆಗ್ ಸ್ಪಿನ್ನರ್ ಎಂದರೆ ಯಾವಾಗಲೂ ವಿಕೆಟ್‌ಗಳನ್ನು ಕಬಳಿಸುವ ಬೌಲರ್. ಕುಲದೀಪ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಚಾಹಲ್ ಟರ್ನಿಂಗ್ ಟ್ರ್ಯಾಕ್‌ಗಳಲ್ಲಿ ಮತ್ತು ನಿಧಾನಗತಿಯ ವಿಕೆಟ್‌ಗಳಲ್ಲಿ ಅಪಾಯಕಾರಿಯಾಗಬಹುದಿತ್ತು. ಹಾರ್ದಿಕ್ ನಿಮಗೆ ಮೂರನೇ ಸೀಮರ್‌ನ ಬ್ಯಾಲೆನ್ಸ್ ನೀಡಿದರೆ, ನೀವು ಚಹಾಲ್ ಅವರನ್ನು ಆಯ್ಕೆ ಮಾಡಬಹುದಿತ್ತು”ಎಂದು ಬ್ಯಾಟಿಂಗ್ ದಿಗ್ಗಜ, ಆಲ್-ರೌಂಡ್ ಕೌಶಲ್ಯಗಳನ್ನು ಮೆರೆದ ಭಾರತ ಕ್ರಿಕೆಟ್ ಸೆನ್ಸೇಷನ್ ಮಾಜಿ ಆಟಗಾರ ಅಭಿಪ್ರಾಯ ಹೊರ ಹಾಕಿದ್ದಾರೆ.
ಯುವರಾಜ್ ಸಿಂಗ್ ಅವರು ವಿಶ್ವಕಪ್ ಗಾಗಿ ಟೀಮ್ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಮೌಲ್ಯಯುತ ಒಳನೋಟಗಳನ್ನು ಹಂಚಿಕೊಂಡಿದ್ದು,ವಿಶೇಷವಾಗಿ ನಿರ್ಣಾಯಕವಾದ ನಂ.4 ಕ್ರಮಾಂಕದ ಬ್ಯಾಟಿಂಗ್ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ.
2019 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಯುವರಾಜ್ ಸಿಂಗ್ ಅವರು ನಿವೃತ್ತಿಯಾದ ನಂತರ ವಿಶ್ವಾಸಾರ್ಹ ನಂ. 4 ಬ್ಯಾಟ್ಸ್ ಮ್ಯಾನ್ ಅನ್ನು ಹೊಂದುವ ಸವಾಲನ್ನು ಭಾರತ ತಂಡ ಎದುರಿಸಿದೆ. ಏಕದಿನ ವಿಶ್ವಕಪ್ ಬ್ಯಾಟಿಂಗ್ ಲೈನ್‌ಅಪ್‌ನಲ್ಲಿ ಈ ನಿರ್ಣಾಯಕ ಪಾತ್ರವನ್ನು ಯಾರು ವಹಿಸಬೇಕು ಎಂಬುದರ ಕುರಿತು ಚರ್ಚೆಗಳನ್ನು ತೀವ್ರಗೊಳಿಸಿದೆ. ಈ ಸಂದರ್ಭದಲ್ಲಿ ಯುವರಾಜ್ ಸಿಂಗ್, 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಜವಾಬ್ದಾರಿಯನ್ನು ಕೆಎಲ್ ರಾಹುಲ್ ಅವರಿಗೆ ವಹಿಸಬೇಕೆಂದು ಪ್ರತಿಪಾದಿಸಿದ್ದಾರೆ.
ವಿಶೇಷವಾಗಿ ಏಷ್ಯಾ ಕಪ್ ನಲ್ಲಿ ರಾಹುಲ್ ಅವರ ಮಧ್ಯಮ ಕ್ರಮಾಂಕದ ಪ್ರದರ್ಶನದ ಬಗ್ಗೆ ಅಪಾರ ಮೆಚ್ಚುಗೆ ಹುಟ್ಟಿಕೊಂಡಿದೆ. ಬೆಂಗಳೂರು ಮೂಲದ ಕ್ರಿಕೆಟಿಗ ಗಾಯದಿಂದ ಗಮನಾರ್ಹ ಮರಳುವಿಕೆಯನ್ನು ಎತ್ತಿ ತೋರಿಸಿದ್ದಾರೆ. ಪಾಕಿಸ್ಥಾನದ ವಿರುದ್ಧ ಅದ್ಭುತ ಶತಕದಿಂದ ಗುರುತಿಸಲ್ಪಟ್ಟಿದ್ದಾರೆ. ಈ ಇನ್ನಿಂಗ್ಸ್ ರಾಹುಲ್ ಅವರ ಸ್ಥಿತಿಸ್ಥಾಪಕತ್ವ ಮತ್ತು ಬ್ಯಾಟಿಂಗ್ ಪ್ರತಿಭೆಯನ್ನು ಪ್ರದರ್ಶಿಸಿದ್ದು, ಮಧ್ಯಮ ಕ್ರಮಾಂಕದಲ್ಲಿ ಅವರ ಸಾಮರ್ಥ್ಯವನ್ನು ದೃಢಪಡಿಸಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.