ಭಾರತ ಹಾಕಿಗೆ 5 ವರ್ಷ ಒಡಿಶಾ ಪ್ರಾಯೋಜಕತ್ವ
Team Udayavani, Feb 16, 2018, 6:30 AM IST
ನವದೆಹಲಿ: ಭಾರತ ಹಾಕಿಗೆ ಮುಂದಿನ ಐದು ವರ್ಷ ಒಡಿಶಾ ಪ್ರಾಯೋಜಕತ್ವ ವಹಿಸಿಕೊಂಡಿದೆ. ಸೋಮವಾರ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಘೋಷಿಸಿದರು.
ಇದೇ ವೇಳೆ ನವೆಂಬರ್‌ನಲ್ಲಿ ಆರಂಭವಾಗಲಿರುವ 2018ರ ಹಾಕಿ ವಿಶ್ವಕಪ್‌ಗೆ ಭಾರತೀಯ ತಂಡಗಳ ಜೆರ್ಸಿಯನ್ನು ಒಡಿಶಾ ಮುಖ್ಯಮಂತ್ರಿ ಪಟ್ನಾಯಕ್ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಪಾಟ್ನಾಯಕ್, ಭುವನೇಶ್ವರದಲ್ಲಿ ನಡೆಯಲಿರುವ ಹಾಕಿ ವಿಶ್ವಕಪ್ ಟೂರ್ನಿಗೆ ನಮ್ಮ ಸರ್ಕಾರ ಟೈಟಲ್ ಪ್ರಾಯೋಜಕತ್ವವಹಿಸಿಕೊಂಡಿದೆ. ಮುಂದಿನ ಐದು ವರ್ಷಗಳ ಕಾಲ ಭಾರತ ಪುರುಷರ ಹಾಗೂ ಮಹಿಳೆಯರ ತಂಡಗಳ ಪ್ರಾಯೋಜಕತ್ವವನ್ನು ಒಡಿಶಾ ಸರ್ಕಾರವೇ ವಹಿಸಿಕೊಳ್ಳುತ್ತಿದೆ. ಭಾರತದಲ್ಲಿ ಪ್ರತಿಭೆಗಳಿಗೆ ಕೊರತೆ ಇಲ್ಲ. ಆದರೆ ಅವರಿಗೆ ಪ್ರೋತ್ಸಾಹ ಬೇಕಾಗಿದೆ. ಒಡಿಶಾ ಸರ್ಕಾರ ಆ ಕೆಲಸವನ್ನು ಮಾಡುತ್ತಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ವಿಶ್ವಕಪ್ ಚಿಹ್ನೆಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಭಾರತ ಪುರುಷ ತಂಡದ ನಾಯಕ ಮನ್‌ಪ್ರೀತ್ ಸಿಂಗ್ ಮತ್ತು ಬಾಲಕಿಯರ ತಂಡದ ನಾಯಕಿ ರಾಣಿರಾಮ್ ಪಾಲ್ ಇದ್ದರು.
ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಹಾಕಿ ಸಂಸ್ಥೆಯ ಅಧ್ಯಕ್ಷ ನರೇಂದ್ರ ಬಾತ್ರಾ, ಭಾರತೀಯ ಅಥ್ಲೆಟಿಕ್ಸ್ ಫೆಡರೇಷನ್ ಅಧ್ಯಕ್ಷ ಸುಮರಿವಾಲ, ಐಒಎ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ಸೇರಿದಂತೆ ಕ್ರೀಡಾ ಫೆಡರೇಷನ್‌ಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
– ಮಂಜು ಮಳಗುಳಿ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.