IPL 2023: ಸೋತ ಪಂದ್ಯದಲ್ಲೂ ನೂತನ ದಾಖಲೆ ಬರೆದ ಮುಂಬೈ ನಾಯಕ ರೋಹಿತ್
Team Udayavani, Apr 23, 2023, 9:51 AM IST
ಮುಂಬೈ: ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಹೈ ಸ್ಕೋರಿಂಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಜಯ ಸಾಧಿಸಿದೆ. ಗೆಲುವಿನ ಸಮೀಪ ಬಂದಿದ್ದ ಮುಂಬೈ ಇಂಡಿಯನ್ಸ್ ಸೋಲು ಕಂಡಿದೆ. ಆದರೆ ಈ ಪಂದ್ಯದಲ್ಲಿ ಮುಂಬೈ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ.
ಪಂಜಾಬ್ ವಿರುದ್ಧ 27 ಎಸೆತಗಳಲ್ಲಿ 44 ರನ್ ಬಾರಿಸಿದ ರೋಹಿತ್ ಶರ್ಮಾ ಮೂರು ಭರ್ಜರಿ ಸಿಕ್ಸರ್ ಚಚ್ಚಿದರು. ಇದೇ ವೇಳೆ ಐಪಿಎಲ್ ನಲ್ಲಿ 250 ಸಿಕ್ಸರ್ ಬಾರಿಸಿದ ಸಾಧನೆ ಮಾಡಿದರು. ಈ ಸಾಧನೆಗೈದ ಮೊದಲ ಭಾರತೀಯ ಆಟಗಾರ ಎಂಬ ದಾಖಲೆಗೂ ರೋಹಿತ್ ಪಾತ್ರರಾದರು.
233 ಪಂದ್ಯಗಳಲ್ಲಿ ರೋಹಿತ್ 250 ಸಿಕ್ಸರ್ ಬಾರಿಸಿದರು. ರೋಹಿತ್ ಐಪಿಎಲ್ ನಲ್ಲಿ 6058 ರನ್ ಗಳಿಸಿದ್ದಾರೆ.
ಇದನ್ನೂ ಓದಿ:ಅರ್ಶದೀಪ್ ಬೆಂಕಿ ಚೆಂಡಿಗೆ ಸ್ಟಂಪ್ ಪೀಸ್ ಪೀಸ್: ಒಂದು LED stump ಬೆಲೆ ಎಷ್ಟು ಲಕ್ಷ ಗೊತ್ತಾ?
ರೋಹಿತ್ ಒಟ್ಟಾರೆ ಐಪಿಎಲ್ ನಲ್ಲಿ 250 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಮೂರನೇ ಆಟಗಾರನಾಗಿದ್ದಾರೆ. ಈ ಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿರುವುದು ಮಾಜಿ ಆರ್ ಸಿಬಿ ಆಟಗಾರರಾದ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್.
ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಅಗ್ರ ಐದು ಆಟಗಾರರು: ಕ್ರಿಸ್ ಗೇಲ್ – 357, ಎಬಿ ಡಿವಿಲಿಯರ್ಸ್ – 251, ರೋಹಿತ್ ಶರ್ಮಾ – 250, ಎಂಎಸ್ ಧೋನಿ – 235, ವಿರಾಟ್ ಕೊಹ್ಲಿ – 229.
ಶನಿವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು ಎಂಟು ವಿಕೆಟ್ ನಷ್ಟಕ್ಕೆ 214 ರನ್ ಮಾಡಿದರೆ, ಮುಂಬೈ ಇಂಡಿಯನ್ಸ್ 201 ರನ್ ಮಾತ್ರ ಕಲೆಹಾಕಲು ಶಕ್ತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
3rd ODI ವನಿತಾ ಏಕದಿನ: ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್‌ಗೆ ಭಾರತ ಸಜ್ಜು
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.