ಒಲಿಂಪಿಯನ್ ಮಹಿಳಾ ಸೈಕ್ಲಿಸ್ಟ್ ಆತ್ಮಹತ್ಯೆ
Team Udayavani, Mar 12, 2019, 12:30 AM IST
ನ್ಯೂಯಾರ್ಕ್: ರಿಯೋ ಒಲಿಂಪಿಕ್ಸ್ ಸೈಕ್ಲಿಂಗ್ ಮಹಿಳಾ ತಂಡ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಅಮೆರಿಕದ ಸ್ಪರ್ಧಿ ಕೆಲ್ಲಿ ಕ್ಯಾಟ್ಲಿನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಆಘಾತಕಾರಿ ವಿಷಯವನ್ನು ಅವರ ಕುಟುಂಬ ಮೂಲಗಳು ಖಚಿತಪಡಿಸಿವೆ.
ಕೆಲ್ಲಿಗೆ 23 ವರ್ಷವಾಗಿತ್ತು. ಕಳೆದ ವರ್ಷ ಸೈಕ್ಲಿಂಗ್ ಅವಘಡವೊಂದರಲ್ಲಿ ಕಾಲಿನ ಗಾಯಕ್ಕೆ ಒಳಗಾಗಿದ್ದರು. ಈ ಘಟನೆಯ ಬಳಿಕ ಕೆಲ್ಲಿ ತೀವ್ರ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕಳೆದ ಜನವರಿಯಲ್ಲಿ ಒಂದು ಸಲ ಆತ್ಮಹತ್ಯೆಗೂ ಪ್ರಯತ್ನ ಪಟ್ಟಿದ್ದರು. ಆಗ ಅವರನ್ನು ಬಚಾವ್ ಮಾಡಲಾಗಿತ್ತು. ಇದೀಗ ಸ್ಟಾನ್ಫೋರ್ಡ್ ವಿಶ್ವವಿದ್ಯಾನಿಲಯ ಕ್ಯಾಂಪಸ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಕ್ಯಾಟಿನ್ ಸತತ 3 ಬಾರಿ ವಿಶ್ವ ಚಾಂಪಿಯನ್ ಸೈಕ್ಲಿಂಗ್ ಪ್ರಶಸ್ತಿ ಗೆದ್ದಿದ್ದರು. ಮಾತ್ರವಲ್ಲ ಪ್ರೊ ಸೈಕ್ಲಿಂಗ್ ತಂಡವನ್ನೂ ಪ್ರತಿನಿಧಿಸಿದ್ದರು. ಅವರು ಸ್ಟಾನ್ಫೋರ್ಡ್ ವಿಶ್ವವಿದ್ಯಾನಿಲಯದಲ್ಲಿ ಕಾಂಪ್ಯೂಟೇಶನಲ್ ಮ್ಯಾಥಮ್ಯಾಟಿಕ್ಸ್ ವಿಷಯದಲ್ಲಿ ಪದವಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.