ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
Team Udayavani, Mar 12, 2019, 12:30 AM IST
ಹೊಸದಿಲ್ಲಿ: ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕ್ರೀಡಾ ಸಾಧಕರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.
ಚಾಂಪಿಯನ್ ರೆಸ್ಲರ್ ಭಜರಂಗ್ ಪೂನಿಯ, ಹಿರಿಯ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್, ಚೆಸ್ ಗ್ರ್ಯಾನ್‌ಮಾಸ್ಟರ್ ದ್ರೋಣವಲ್ಲಿ ಹರೀಕಾ, ಭಾರತದ ಕಬಡ್ಡಿ ತಂಡದ ನಾಯಕ ಅಜಯ್ ಠಾಕೂರ್ ಅವರೆಲ್ಲ ಪದ್ಮಶ್ರೀ ಪ್ರಶಸ್ತಿಯಿಂದ ಪುರಸ್ಕೃತರಾದರು.
ಹಿರಿಯ ಪರ್ವತಾರೋಹಿ ಬಚೇಂದ್ರಿ ಪಾಲ್ ಪದ್ಮಭೂಷಣಕ್ಕೆ ಭಾಜನರಾದರು. ಉಳಿದವರಿಗೆ ಮಾ. 16ರಂದು ನಡೆಯುವ ಮತ್ತೂಂದು ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗೃಹ ಕಚೇರಿಯ ಪ್ರಕಟನೆ ತಿಳಿಸಿದೆ.
ಕಳೆದ ಗಣರಾಜ್ಯೋತ್ಸವದಂದು ಒಟ್ಟು 112 ಮಂದಿ ವಿವಿಧ ಸಾಧಕರನ್ನು ಪದ್ಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಪದ್ಮಶ್ರೀಗೆ ಆಯ್ಕೆಯಾದ ಉಳಿದ ಕ್ರೀಡಾಪಟುಗಳೆಂದರೆ ಫುಟ್ಬಾಲಿಗ ಸುನೀಲ್ ಚೆಟ್ರಿ, ಕ್ರಿಕೆಟಿಗ ಗೌತಮ್ ಗಂಭೀರ್, ಬಿಲ್ಲುಗಾರ್ತಿ ಬೊಂಬಾಯ್ಲದೇವಿ ಲೈಶ್ರಮ್ ಮತ್ತು ಬಾಸ್ಕೆಟ್‌ಬಾಲ್ ಆಟಗಾರ್ತಿ ಪ್ರಶಾಂತಿ ಸಿಂಗ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್‌ಚಂದ್ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
ICC ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.