Asia Cup ; 2 ವಿಕೆಟ್ ಕಳೆದುಕೊಂಡ ಪಾಕ್: ಮತ್ತೆ ಮಳೆ ಅಡ್ಡಿ
Team Udayavani, Sep 11, 2023, 8:30 PM IST
ಕೊಲಂಬೊ: ಇಲ್ಲಿನ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ- ಪಾಕಿಸ್ಥಾನ ನಡುವಿನ ಏಷ್ಯಾ ಕಪ್ ಸೂಪರ್ ಫೋರ್ ಮೀಸಲು ದಿನದ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಯಾಗಿದೆ.357 ರನ್ ಗಳ ಸವಾಲು ಪಡೆದಿರುವ ಪಾಕಿಸ್ಥಾನ 11ಓವರ್ ಗಳಲ್ಲಿ 44 ರನ್ ಗಳಿಗೆ 2 ವಿಕೆಟ್ ಕಳೆದು ಕೊಂಡಿದೆ.ಈ ವೇಳೆ ಮಳೆ ಸುರಿದು ಪಂದ್ಯಕ್ಕೆ ಅಡಚಣೆಯಾಗಿದೆ.
9 ರನ್ ಗಳಿಸಿದ್ದ ವೇಳೆ ಇಮಾಮ್-ಉಲ್-ಹಕ್ ಅವರನ್ನು ಬುಮ್ರಾ ಔಟ್ ಮಾಡಿದರು. ಬುಮ್ರಾ ಎಸೆದ ಚೆಂಡು ಹಕ್ ಬ್ಯಾಟ್ ಗೆ ತಗುಲಿ ಶುಭ್ ಮನ್ ಗಿಲ್ ಅವರ ಕೈಸೇರಿತು. 10 ರನ್ ಗಳಿಸಿದ್ದ ನಾಯಕ ಬಾಬರ್ ಆಜಂ ಅವರನ್ನು ಹಾರ್ದಿಕ್ ಪಾಂಡ್ಯ ಬೌಲ್ಡ್ ಮಾಡಿ ಶಾಕ್ ನೀಡಿದರು.
ಭಾನುವಾರ ಭಾರಿ ಮಳೆಯ ಕಾರಣದಿಂದಾಗಿ ಭಾನುವಾರ ನಡೆಯಬೇಕಾಗಿದ್ದ ಪಂದ್ಯ ಮೀಸಲು ದಿನವಾದ ಸೋಮವಾರ ಆಡಲಾಗುತ್ತಿದೆ.
ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ಅತ್ಯಮೋಘ ಶತಕಗಳನ್ನು ಸಿಡಿಸಿ ಭಾರತದ ಬ್ಯಾಟಿಂಗ್ ಬಲ ಸಾಬೀತುಪಡಿಸಿದ್ದಾರೆ. ಭಾರತ 50 ಓವರ್ ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 356 ರನ್ ಗಳ ಸವಾಲಿನ ಮೊತ್ತವನ್ನು ಕಲೆಹಾಕಿತು.ನಾಯಕ ರೋಹಿತ್ ಶರ್ಮಾ 56 ರನ್ ಶುಭಮನ್ ಗಿಲ್ 58 ರನ್ ಗಳಿಸಿ ಔಟಾಗಿದ್ದರು.
ಕೊಹ್ಲಿ 122 ರನ್ ಗಳಿಸಿ ಅಜೇಯರಾಗಿ ಉಳಿದರು.93 ಎಸೆತಗಳಲ್ಲಿ ಆಕರ್ಷಕ 9 ಬೌಂಡರಿ ಮತ್ತು 3 ಸಿಕ್ಸರ್ ಅವರ ಇನ್ನಿಂಗ್ಸ್ ನ ಆಕರ್ಷಣೆಯಾಗಿತ್ತು. ಜವಾಬ್ದಾರಿಯುತ ಆಟವಾಡಿದ ರಾಹುಲ್ ಅಜೇಯ 111 ರನ್ ಗಳಿಸಿದರು.106 ಎಸೆತಗಳಲ್ಲಿ 12 ಬೌಂಡರಿ ಮತ್ತು 2 ಸಿಕ್ಸರ್ ಅವರ ಆಟದ ಆಕರ್ಷಣೆಯಾಗಿತ್ತು. 3 ನೇ ವಿಕೆಟ್ ಗೆ ಇಬ್ಬರು 233 ರನ್ ಜತೆಯಾಟವಾಡಿದ್ದು ಇದು ಏಷ್ಯಾ ಕಪ್ ಇತಿಹಾಸದಲ್ಲಿ ಭಾರತದ ಅತೀ ದೊಡ್ಡ ಜತೆಯಾಟವಾಗಿದೆ.
ನಿನ್ನೆ ಪಂದ್ಯ ಮುಂದೂಡಿಕೆಯಾದ ವೇಳೆ 24.1 ಓವರ್ ಗಳಲ್ಲಿ ಭಾರತ 2 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತ್ತು. 8 ರನ್ ಗಳಿಸಿದ್ದ ಕೊಹ್ಲಿ ಮತ್ತು 17 ರನ್ ಗಳಿಸಿದ್ದ ರಾಹುಲ್ ಆಕರ್ಷಕ ಜತೆಯಾಟವನ್ನು ಆಡಿದರು.ಪಾಕಿಸ್ಥಾನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.