18 ವರ್ಷಗಳ ಬಳಿಕ ಪಾಕ್ ನೆಲದಲ್ಲಿ ಕಿವೀಸ್ ಏಕದಿನ
Team Udayavani, Sep 16, 2021, 9:40 PM IST
ರಾವಲ್ಪಿಂಡಿ: ಶುಕ್ರವಾರ ಇಲ್ಲಿ ಆತಿಥೇಯ ಪಾಕಿಸ್ತಾನ ಮತ್ತು ಪ್ರವಾಸಿ ನ್ಯೂಜಿಲೆಂಡ್ ತಂಡಗಳ ನಡುವೆ ಸರಣಿಯ ಮೊದಲ ಏಕದಿನ ಪಂದ್ಯ ನಡೆಯಲಿದೆ. ಇದರೊಂದಿಗೆ ಬರೋಬ್ಬರಿ 18 ವರ್ಷಗಳ ಬಳಿಕ ನ್ಯೂಜಿಲೆಂಡ್ ತಂಡ ಪಾಕ್ ನೆಲದಲ್ಲಿ ಅಂತಾರಾಷ್ಟ್ರೀಯ ಪಂದ್ಯವಾಡಲಿದೆ. 2003ರಲ್ಲಿ ಇತ್ತಂಡಗಳ ನಡುವೆ ಇಲ್ಲಿ ಕೊನೆಯ ಪಂದ್ಯ ನಡೆದಿತ್ತು.
ಪಾಕಿಸ್ತಾನ-ನ್ಯೂಜಿಲೆಂಡ್ ಕೊನೆಯ ಸಲ ಏಕದಿನ ಪಂದ್ಯದಲ್ಲಿ ಎದುರಾದದ್ದು 2019ರ ವಿಶ್ವಕಪ್ ಪಂದ್ಯಾವಳಿಯಲ್ಲಿ. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಬಾಬರ್ ಅಜಂ ಅವರ ಶತಕ ಪರಾಕ್ರಮದಿಂದ ಪಾಕ್ 6 ವಿಕೆಟ್‌ಗಳ ಜಯ ಸಾಧಿಸಿತ್ತು. ಈ ಸಲವೂ ಬಾಬರ್ ಅಜಂ ಅವರೇ ಪಾಕ್ ತಂಡವನ್ನು ಮುನ್ನಡೆಸಲಿದ್ದಾರೆ. ನ್ಯೂಜಿಲೆಂಡಿನ ತಾರಾ ಆಟಗಾರರನೇಕರು ಈ ಪ್ರವಾಸದಿಂದ ಹಿಂದೆ ಸರಿದಿದ್ದು, ಟಾಮ್ ಲ್ಯಾಥಂ ತಂಡದ ನೇತೃತ್ವ ವಹಿಸಿದ್ದಾರೆ.
1976-2003ರ ನಡುವೆ ಪಾಕ್ ನೆಲದಲ್ಲಿ ಇತ್ತಂಡಗಳು 19 ಏಕದಿನ ಪಂದ್ಯಗಳನ್ನಾಡಿವೆ. ಪಾಕಿಸ್ಥಾನ 19 ಗೆಲುವಿನ ದಾಖಲೆ ಹೊಂದಿದೆ. ರಾವಲ್ಪಿಂಡಿಯಲ್ಲಿ ನಡೆದ ಮೂರೂ ಪಂದ್ಯಗಳಲ್ಲಿ ಪಾಕ್ ಜಯ ಸಾಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.