ಬಾಂಗ್ಲಾ ಟೆಸ್ಟ್ ಅಹ್ವಾನವನ್ನು ತಿರಸ್ಕರಿಸಿದ ಪಾಕ್
Team Udayavani, Jan 5, 2020, 5:49 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಕರಾಚಿ: ಬಾಂಗ್ಲಾದೇಶದಲ್ಲಿ ಟೆಸ್ಟ್ ಆಡುವ ಮನವಿಯನ್ನು ಪಾಕಿಸ್ಥಾನ ಕ್ರಿಕೆಟ್ ಮಂಡಳಿ ತಿರಸ್ಕರಿಸಿದೆ. ಪಾಕಿಸ್ಥಾನದಲ್ಲಿ ಒಂದು ಟೆಸ್ಟ್ ಪಂದ್ಯವನ್ನು ನಾವು ಆಡಲು ಸಿದ್ಧ ಆದರೆ ಎರಡನೇ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ನಡಿ ಬರುವ ಪಂದ್ಯವನ್ನು ತಮ್ಮ ತವರಾದ ಢಾಕಾದಲ್ಲಿ ಪಾಕಿಸ್ಥಾನ ಆಡಬೇಕೆಂದು (ಬಿಸಿಬಿ) ಬೇಡಿಕೆ ಇರಿಸಿದೆ ಆದರೆ ಪಿಸಿಬಿ ಈ ಮನವಿಯನ್ನು ನೇರವಾಗಿ ತಿರಸ್ಕರಿಸಿದೆ.
ಇದಕ್ಕೂ ಮೊದಲು ಪಾಕಿಸ್ಥಾನದಲ್ಲಿ ನಡೆಯಲಿರುವ ಟಿ20 ಪಂದ್ಯಗಳಲ್ಲಿ ಆಡಲು ಬಾಂಗ್ಲಾದೇಶ ಸಿದ್ಧವಿದೆ. ಆದರೆ ಟೆಸ್ಟ್ ಸರಣಿ ಮಾತ್ರ ತಟಸ್ಥ ತಾಣದಲ್ಲಿ ನಡೆಯಲಿ ಎಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ)ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಜಾಮುದ್ದಿನ್ ಚೌಧರಿ ಪಿಸಿಬಿಗೆ ಮನವಿ ಮಾಡಿದ್ದರು ಇದಕ್ಕೆ ಪಿಸಿಬಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.
ಈ ಕಾರಣದಿಂದ ಬಾಂಗ್ಲಾ ಕ್ರಿಕೆಟ್ ಮಂಡಳಿ ಒಂದು ನಿರ್ಧಾರಕ್ಕೆ ಬಂದು ನಾವು ಪಾಕ್ ವಿರುದ್ಧ ಟೆಸ್ಟ್ ಆಡುವುದಾದರೆ ಒಂದು ಪಂದ್ಯ ಬಾಂಗ್ಲಾದಲ್ಲಿ ನಡೆಯಬೇಕು ಎಂದು ಬೇಡಿಕೆ ಇರಿಸಿತ್ತು. ಆದರೆ ಪಿಸಿಬಿ ಎರಡು ಟೆಸ್ಟ್ ಪಂದ್ಯವೂ ಪಾಕಿಸ್ಥಾನದಲ್ಲೇ ನಡೆಯಬೇಕು ಎಂದು ಹೇಳಿ ಬಾಂಗ್ಲಾ ಮನವಿಯನ್ನು ತಿರಸ್ಕರಿಸಿದೆ. ಒಟ್ಟಾರೆಯಾಗಿ ಇದೀಗ ಬಾಂಗ್ಲಾ ಪಾಕ್ ನೆಲದಲ್ಲಿ ಟೆಸ್ಟ್ ಆಡಲು ಸಮ್ಮತಿ ಸೂಚಿಸುತ್ತದೋ ಎನ್ನುವುದನ್ನು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.